Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾತುಕತೆ ನಡೆಸದ ಇಸ್ರೇಲ್‌ಗೆ ನಾಯಕರ...

ಮಾತುಕತೆ ನಡೆಸದ ಇಸ್ರೇಲ್‌ಗೆ ನಾಯಕರ ಖಂಡನೆ

ಫೆಲೆಸ್ತೀನ್ ಕೈದಿಗಳ ಉಪವಾಸ ಸತ್ಯಾಗ್ರಹ 4ನೆ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ20 April 2017 8:22 PM IST
share
ಮಾತುಕತೆ ನಡೆಸದ ಇಸ್ರೇಲ್‌ಗೆ ನಾಯಕರ ಖಂಡನೆ

ರಮಲ್ಲಾ (ಫೆಲೆಸ್ತೀನ್), ಎ. 20: ಇಸ್ರೇಲ್‌ನ ಜೈಲುಗಳಲ್ಲಿ ಉಪವಾ ಸತ್ಯಾಗ್ರಹ ನಡೆಸುತ್ತಿರುವ ಫೆಲೆಸ್ತೀನ್ ಕೈದಿಗಳೊಂದಿಗೆ ಮಾತುಕತೆ ನಡೆಸಲು ಇಸ್ರೇಲ್ ನಿರಾಕರಿಸಿರುವುದನ್ನು ಫೆಲೆಸ್ತೀನ್ ನಾಯಕರು ಖಂಡಿಸಿದ್ದಾರೆ ಹಾಗೂ ಸತ್ಯಾಗ್ರಹನಿರತರ ಪೈಕಿ ಯಾರಾದರೂ ಮೃತಪಟ್ಟರೆ ‘ಹೊಸತೊಂದು ಸಂಘರ್ಷ’ ಆರಂಭವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರದಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಸುಮಾರು 1,500 ಫೆಲೆಸ್ತೀನಿ ಕೈದಿಗಳು ಭಾಗವಹಿಸುತ್ತಿದ್ದಾರೆ ಎಂದು ಫೆಲೆಸ್ತೀನ್ ಪ್ರಾಧಿಕಾರದ ಬಂದೀಖಾನೆ ವ್ಯವಹಾರಗಳ ಇಲಾಖೆಯ ಮುಖ್ಯಸ್ಥ ಇಸ್ಸ ಖರಾದೆ ಹೇಳಿದರು.

ಎಎಫ್‌ಪಿ ಸುದ್ದಿ ಸಂಸ್ಥೆಯು ಇಸ್ರೇಲ್‌ನ ಕಾರಾಗೃಹ ಇಲಾಖೆಯನ್ನು ಸಂಪರ್ಕಿಸಿದಾಗ, ಎಷ್ಟು ಕೈದಿಗಳು ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ ಎಂಬುದನ್ನು ತಿಳಿಸಲು ಅಧಿಕಾರಿಗಳು ನಿರಾಕರಿಸಿದರು.

ಉಪವಾಸ ಸತ್ಯಾಗ್ರಹದ ನೇತೃತ್ವವನ್ನು ಇಸ್ರೇಲ್‌ನ ಜೈಲೊಂದರಲ್ಲಿ ಕೈದಿಯಾಗಿರುವ ಜನಪ್ರಿಯ ಫೆಲೆಸ್ತೀನ್ ನಾಯಕ ಮರ್ವನ್ ಬರ್ಘೌಟಿ ವಹಿಸಿದ್ದಾರೆ. ಎರಡನೆ ಫೆಲೆಸ್ತೀನಿ ‘ಇಂಟಿಫಾಡ’ (ಬಂಡಾಯ)ದಲ್ಲಿ ವಹಿಸಿದ ಪಾತ್ರಕ್ಕಾಗಿ ಬರ್ಘೌಟಿಗೆ ಇಸ್ರೇಲ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಉತ್ತಮ ವೈದ್ಯಕೀಯ ನೆರವು ಮತ್ತು ಟೆಲಿಫೋನ್ ಸೌಕರ್ಯ ಸೇರಿದಂತೆ ಹಲವು ಬೇಡಿಕೆಗಳನ್ನು ಉಪವಾಸನಿರತ ಕೈದಿಗಳು ಮುಂದಿಟ್ಟಿದ್ದಾರೆ.
ಸುಮಾರು 6,500 ಫೆಲೆಸ್ತೀನೀಯರನ್ನು ವಿವಿಧ ಅಪರಾಧಗಳಿಗಾಗಿ ಇಸ್ರೇಲ್ ಬಂಧಿಸಿ ಜೈಲುಗಳಲ್ಲಿಟ್ಟಿದೆ.

ಫೆಲೆಸ್ತೀನ್ ಕೈದಿಗಳು ಹಲವು ಬಾರಿ ಉಪವಾಸ ಸತ್ಯಾಗ್ರಹಗಳನ್ನು ನಡೆಸಿದ್ದರೂ, ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಈವರೆಗೆ ನಡೆದಿಲ್ಲ.ಬಂಧಿತರಿಗೆ ಬಲವಂತವಾಗಿ ಉಣಿಸಲು ಅಧಿಕಾರ ನೀಡುವ ಕಾನೂನನ್ನು ಜಾರಿಗೊಳಿಸಲು ಅಧಿಕಾರಿಗಳು ಹಿಂಜರಿಯುವುದಿಲ್ಲ ಎಂದು ಇಸ್ರೇಲ್‌ನ ಕಾನೂನು ಸಚಿವ ಅಯೆಲೆಟ್ ಶಕೀದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X