ಸ್ಪೆಷಲ್ ಒಲಿಂಪಿಕ್ಸ್ ರಾಜ್ಯ ಸಂಸ್ಥೆಯಿಂದ ಮುಖ್ಯಮಂತ್ರಿಗೆ ಮನವಿ

ಮಂಗಳೂರು, ಎ.20: ಬುದ್ಧಿಮಾಂದ್ಯತೆ, ಮೆದುಳಿನ ಪಾರ್ಶ್ವ, ಆಟಿಸಂ ಹಾಗೂ ಬಹುವಿಧ ನ್ಯೂನ್ಯತೆಯಿಂದ ಬಳಲುತ್ತಿರುವವರಿಗೆ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ರಾಜ್ಯ ಸರಕಾರ ಧನ ಸಹಾಯ ಕಲ್ಪಿಸುವಂತೆ ಸ್ಪೆಷಲ್ ಒಲಿಂಪಿಕ್ಸ್ ರಾಜ್ಯ ಸಂಸ್ಥೆಯ ಅಧ್ಯಕ್ಷ ಹಾಗು ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬುಧವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ರಾಜ್ಯ ವಲಯ ನಿರ್ದೇಶಕ ವಸಂತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story





