Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಧ್ಯಕಾಲೀನ ಕನಾಟಕದ ಜಲವಾಸ್ತುಶಿಲ್ಪ:...

ಮಧ್ಯಕಾಲೀನ ಕನಾಟಕದ ಜಲವಾಸ್ತುಶಿಲ್ಪ: ರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ20 April 2017 8:56 PM IST
share

ದಾವಣಗೆರೆ, ಎ.20: ಭಾರತದಲ್ಲಿನ ಕೆರೆ, ಬಾವಿಗಳ ಕೋಡಿ, ತೂಬು, ವಿನ್ಯಾಸಗಳನ್ನು ನೋಡಿಯೇ ಬ್ರಿಟಿಷರು ಡ್ಯಾಂಗಳನ್ನು ನಿರ್ಮಿಸಿದರು ಎಂದು ಕುವೆಂಪು ವಿವಿಯ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕ ಡಾ. ರಾಜಾರಾವ್ ಹೆಗ್ಡೆ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೈಸೂರಿನ ರಾಜ್ಯ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಹಾಗೂ ಇತಿಹಾಸ ಅಧ್ಯಾಪಕರ ವೇದಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಧ್ಯಕಾಲೀನ ಕನಾಟಕದ ಜಲವಾಸ್ತುಶಿಲ್ಪ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಭಾರತಕ್ಕೆ ಮೊದಲ ಬಾರಿಗೆ ಬಂದ ಬ್ರಿಟಿಷರು ಇಲ್ಲಿನ ಕೆರೆ, ಬಾವಿ, ಪುಷ್ಕರಣಿಗಳು ಹಾಗೂ ಅವುಗಳನ್ನು ನಿರ್ಮಿಸುವಲ್ಲಿ ತೋರಿರುವ ಜಾಣ್ಮೆಗೆ ಮನಸೋತು, ನಮ್ಮ ಜಲಸಂಸ್ಕೃತಿ, ವಿನ್ಯಾಸಗಳನ್ನೇ ಬಳಸಿ ಅವರು ಡ್ಯಾಂಗಳನ್ನು ನಿರ್ಮಿಸಿದರು ಎಂದರು. ಭಾರತೀಯ ಜಲವಾಸ್ತು ವೈವಿಧ್ಯಪೂರ್ಣವಾಗಿದ್ದು, ನಾವು ನೀರನ್ನು ಕೇವಲ ವಸ್ತುವಾಗಿ ಕಾಣದೇ ದೇವರ ರೂಪದಲ್ಲಿ ಕಂಡವರು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧಾರವಾಡ ವಿವಿ ಇತಿಹಾಸ ಮತ್ತು ಪುರಾತತ್ವ ವಿಭಾಗ ಪ್ರಾಧ್ಯಾಪಕ ಡಾ. ಈರಣ್ಣ ಕೆ. ಪತ್ತಾರ್, ಇಂದು ಜಲಮಟ್ಟ ದಿನೇ ದಿನೇ ಕುಸಿಯುತ್ತಿರುವುದಕ್ಕೆ ನಾವೇ ಕಾರಣ. ಗ್ರಾಮೀಣ ಭಾಗದಲ್ಲಿ ಕೆರೆಗಳನ್ನು ನಾಶ ಮಾಡಿ ಕೃಷಿಗೆ ಬಳಸಿಕೊಂಡರೆ, ನಗರಪ್ರದೇಶಗಳಲ್ಲಿ ಕಟ್ಟಡ, ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ, ಪ್ರತಿ ವರ್ಷ ಲಕ್ಷಾಂತರ ಮರಗಳ ಮಾರಣಹೋಮ ನಡೆಯುತ್ತಿದೆ. ಇದರಿಂದ ಜಲಮಟ್ಟ ಕುಸಿದು ಆಹಾಕಾರ ಎದುರಿಸುವಂತಾಗಿದೆ ಎಂದರು.

ಚಿತ್ರನಟ ಯಶ್ ಕಳೆದ ವರ್ಷ ಸುಮಾರು 165 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸುವ ಕಾಯಕ ಮಾಡಿದ್ದರು. ಆದರೆ, ಅದು ತಾತ್ಕಾಲಿಕ ಪರಿಹಾರವಷ್ಟೇ ಎಂದರಿತ ಅವರು, ಈ ಬಾರಿ ಕೆರೆಗಳ ಜೀರ್ಣೋದ್ಧಾರಕ್ಕೆ ಕೈಹಾಕಿದ್ದಾರೆ. ಇದರಿಂದ ನೀರಿನ ಹಾಹಾಕಾರಕ್ಕೆ ಶಾಶ್ವತ ಪರಿಹಾರ ಕಾಣುತ್ತಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ರಾಜ್ಯ ಪುರಾತತ್ವ, ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ಸಹಾಯಕ ಪ್ರಾಕ್ತನ ಶಾಸ್ತ್ರಜ್ಞ ಐ.ಎನ್. ಗೌಡ, ದಾವಣಗೆರೆ ವಿವಿ ಇತಿಹಾಸ ಅಧ್ಯಾಪಕರ ವೇದಿಕೆ ಅಧ್ಯಕ್ಷ ಪ್ರೊ. ಬಿ.ಎಸ್. ಉಮಾಮಹೇಶ್ವರ, ಐಕ್ಯೂಎಸಿ ಸಂಚಾಲಕ ಡಾ.ಆರ್. ತಿಪ್ಪಾರೆಡ್ಡಿ, ಪತ್ರಾಂಕಿತ ವ್ಯವಸ್ಥಾಪಕ ಎಸ್.ಆರ್. ಜಂತ್ರಿ , ಟಿ. ವೀರೇಶ್ ಇದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗ ಮುಖ್ಯಸ್ಥ ಪ್ರೊ.ಟಿ. ವೀರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಪ್ರಾಧ್ಯಾಪಕ ಡಾ. ಮಂಜಣ್ಣ ಟಿ. ಸ್ವಾಗತಿಸಿದರು. ಪೂಜಾ ಪ್ರಾರ್ಥಿಸಿದರು. ಪ್ರೊ. ನಾಗವೇಣಿ ನಿರೂಪಿಸಿದರು. ಸದಾಶಿವಪ್ಪ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X