Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರಾಬೆ: ಪತ್ನಿಯನ್ನು ಕೊಲೆ ಮಾಡಿದ ಗಂಡನ...

ಪೆರಾಬೆ: ಪತ್ನಿಯನ್ನು ಕೊಲೆ ಮಾಡಿದ ಗಂಡನ ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ20 April 2017 9:06 PM IST
share

ಪುತ್ತೂರು, ಎ.20: 3 ವರ್ಷಗಳ ಹಿಂದೆ ಪೆರಾಬೆ ಗ್ರಾಮದ ಕೊಚಕಟ್ಟೆ ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯ ಆರೋಪಿಯ ಆರೋಪವನ್ನು ಸಾಬೀತು ಪಡಿಸಿದೆ.

ಸೆಕ್ಷನ್ 302ರಂತೆ ಕೊಲೆ, ಸೆಕ್ಷನ್ 498ರಂತೆ ದೈಹಿಕ, ಮಾನಸಿಕ, ಕಿರುಕುಳ ನೀಡಿದ ಹಾಗೂ ಸೆಕ್ಷನ್ 204ರಲ್ಲಿ ಸಾಕ್ಷ ನಾಶ ಮಾಡಿದ ಕುರಿತು ಆರೋಪ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿಲ್ಲ.

2014ರ ನ.10 ರ ರಾತ್ರಿ ಗಂಟೆ 9:30ಕ್ಕೆ ಘಟನೆ ನಡೆದಿದ್ದು, ಪೆರಾಬೆ ಗ್ರಾಮದ ಕೊಚಕಟ್ಟೆ ನಿವಾಸಿ ಸುರೇಶ್ ಎಂಬವರ ಪತ್ನಿ ಲಕ್ಷ್ಮೀ ಎಂಬವರು ಕೊಲೆಯಾದವರು. ಆರೋಪಿ ಸುರೇಶ್ ಮುಗೇರ 9 ವರ್ಷಗಳ ಹಿಂದೆ ಬಂಟ್ವಾಳ ಗ್ರಾಮದ ಕಾವಳಪಡೂರು ಮದ್ವ ಎಂಬಲ್ಲಿಂದ ಲಕ್ಷ್ಮಿಯವರನ್ನು ವಿವಾಹವಾಗಿದ್ದರು. ಬಳಿಕದ ದಿನಗಳಲ್ಲಿ 5 ವರ್ಷಗಳಿಂದ ಪತ್ನಿ ಲಕ್ಷ್ಮೀಗೆ ನಿರಂತರ ಮಾನಸಿಕ ಕಿರುಕುಳ, ಹಿಂಸೆ ನೀಡುತ್ತಿದ್ದು, 2014ರ ನ.10ರಂದು ರಾತ್ರಿ ಸಾಂಬಾರು ಪದಾರ್ಥ ಸರಿಯಾಗಿಲ್ಲವೆಂದು ಪತ್ನಿಯ ಜೊತೆ ತಗಾದೆ ಎತ್ತಿ ಸಿಟ್ಟುಗೊಂಡು ಮರದ ಮಣೆಯಿಂದ ಲಕ್ಷ್ಮೀಯ ಹಣೆಗೆ ಹಲ್ಲೆ ನಡೆಸಿದ್ದಾರೆ. ಗಂಡನ ಹಲ್ಲೆಯನ್ನು ತಪ್ಪಿಸಲು ಮನೆಯಿಂದ ಲಕ್ಷ್ಮೀ ಓಡಿದ್ದು, ಸ್ಥಳೀಯ ಅಣಿಯೂರು ಯಾನೆ ತನಿಯಾರು ಎಂಬವರ ಜಮೀನಿಗೆ ತಲುಪುತ್ತಿದ್ದಂತೆ ಸುರೇಶ್‌ ಮತ್ತೊಮ್ಮೆ ಲಕ್ಷ್ಮೀಗೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದಾಗಿ ಲಕ್ಷ್ಮೀ ಸ್ಥಳದಲ್ಲೇ ಮೃತಪಟ್ಟಿದ್ದು. ಸಾಕ್ಷವನ್ನು ನಾಶ ಮಾಡುವ ಉದ್ದೇಶದಿಂದ ಪತ್ನಿಯ ಶವವನ್ನು ಅಲ್ಲಿಯೇ ಪಕ್ಕದಲ್ಲಿದ್ದ ಬಾವಿಗೆ ಹಾಕಿದ್ದ. ಮಾರನೆ ದಿನ ಪತ್ನಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಗುಲ್ಲೆಬ್ಬಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.

ಅದೇ ದಿನ ಕಡಬ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 306ರಂತೆ ಮಾನಸಿಕ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.

ಆತ್ಮಹತ್ಯೆ ಕೊಲೆಯಾದಾಗ: 

ಲಕ್ಷ್ಮೀಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ದೇರಳಕಟ್ಟೆ ಪೊರೆನ್ಸಿಕ್ ಲ್ಯಾಬ್‌ನ ಪ್ರೊ. ಡಾ. ಸೂರಜ್ ಎಸ್.ಶೆಟ್ಟಿಯವರು ಮೃತ ಲಕ್ಷ್ಮೀಯವರ ತಲೆ ಭಾಗಕ್ಕೆ ಬಲವಾದ ಹಲ್ಲೆ ನಡೆದಿರುವ ವಿಚಾರ ಪತ್ತೆ ಹಚ್ಚಿದ್ದರು, ಘಟನೆ ನಡೆದ ಸ್ಥಳವನ್ನೂ ಪರಿಶೀಲನೆಯನ್ನು ನಡೆಸಿದರು. 2014ರ ನ.13ರಂದು ಇದೊಂದು ಆತ್ಮಹತ್ಯೆಯಲ್ಲ ಕೊಲೆ ಎಂದು ವರದಿ ನೀಡಿದ್ದರು. ಇದೇ ಆಧಾರದ ಮೇಲೆ ಸರಕಾರಿ ಅಭಿಯೋಜಕ ಉದಯ ಕುಮಾರ್‌ ವಾದ ಮಂಡನೆ ಮಾಡಿದ್ದರು. ಕೊಲೆ ಆರೋಪವನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯ ಆರೋಪವನ್ನು ಸಾಬೀತು ಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X