Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸರಳ ಕನ್ನಡದಲ್ಲಿ ಡಿಜಿಟಲ್ ಬದುಕು

ಸರಳ ಕನ್ನಡದಲ್ಲಿ ಡಿಜಿಟಲ್ ಬದುಕು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ21 April 2017 12:09 AM IST
share
ಸರಳ ಕನ್ನಡದಲ್ಲಿ ಡಿಜಿಟಲ್ ಬದುಕು

 ಸದ್ಯಕ್ಕೆ ಇಡೀ ದೇಶ ಡಿಜಿಟಲ್ ಕ್ರಾಂತಿಯ ಕುರಿತಂತೆ ಮಾತನಾಡುತ್ತಿದೆ. ‘ಡಿಜಿಟಲ್ ಇಂಡಿಯಾ’ದ ಮೂಲಕ ಭಾರತವನ್ನು ಕಟ್ಟುವ ಪ್ರಯತ್ನವೊಂದು ನಡೆಯುತ್ತಿದೆ. ಇದರ ಹಿಂದಿರುವ ಕೆಲವು ಹಿತಾಸಕ್ತಿಗಳ ಬಗೆಗಿರುವ ಚರ್ಚೆಗಳು ಅದೇನೇ ಇರಲಿ, ನಾವಿಂದು ಡಿಜಿಟಲ್ ಯುಗಕ್ಕೆ ಬೆನ್ನು ಮಾಡುವಂತಹ ಸ್ಥಿತಿಯಲ್ಲಂತೂ ಇಲ್ಲ. ಈ ಹಿನ್ನೆಲೆಯಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊರತಂದಿರುವ ‘ಡಿಜಿಟಲ್ ಕ್ರಾಂತಿ ಮತ್ತು ಭಾರತ’ ಕೃತಿ ಮಹತ್ವಪೂರ್ಣವಾದುದು. ನಮ್ಮ ಬದುಕನ್ನು ಡಿಜಿಟಲ್ ತಂತ್ರಜ್ಞಾನ ಬಹುತೇಕ ಆವರಿಸಿಕೊಂಡಿದೆ. ಹೀಗಿರುವಾಗ ಆ ಕುರಿತ ಮಾಹಿತಿಗಳನ್ನು ತಿಳಿದುಕೊಳ್ಳುವುದು ಬದುಕಿನ ಅನಿವಾರ್ಯಗಳಲ್ಲಿ ಒಂದಾಗಿದೆ. ಶಿವಾನಂದ ಕಣವಿಯವರ ಇಂಗ್ಲಿಷ್ ಕೃತಿಯ ಕನ್ನಡಾನುವಾದ ‘ಡಿಜಿಟಲ್ ಕ್ರಾಂತಿ ಮತ್ತು ಭಾರತ’. ಡಾ. ವೈ. ಸಿ. ಕಮಲ ಇದನ್ನು ಕನ್ನಡಕ್ಕಿಳಿಸಿದ್ದಾರೆ. ಈ ಪುಸ್ತಕ ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಿ ಹತ್ತು ವರ್ಷಗಳಾಗಿರುವುದು ಒಂದು ಸಣ್ಣ ಮಿತಿ. ಅಂದು ಮುಂಚೂಣಿಯಲ್ಲಿದ್ದ ತಂತ್ರಜ್ಞಾನಗಳಿಗೂ ಇಂದಿನ ತಂತ್ರಜ್ಞಾನಗಳಿಗೂ ವ್ಯತ್ಯಾಸಗಳಿವೆ. ಅಂದಿನ ತಂತ್ರಜ್ಞಾನಗಳು ಇಂದು ಆ್ಯಪ್‌ಗಳಾಗಿ ಮಾರ್ಪಾಟಾಗಿವೆ. ಇಂಗ್ಲಿಷ್‌ನಲ್ಲಿರುವ ಮಾಹಿತಿಗಳನ್ನು ಕನ್ನಡ ಪದಬಳಕೆಗಳ ಜೊತೆಗೆ ಸರಳವಾಗಿ ಜನರಿಗೆ ತಲುಪಿಸುವುದು ಸಣ್ಣ ವಿಷಯವೇನೂ ಅಲ್ಲ. ಅನುವಾದಕಿ ಅದರಲ್ಲಿ ಯಶಸ್ವಿಯಾಗಿದ್ದಾರೆ.

ಕೃತಿಯಲ್ಲಿ ಆರು ಪ್ರಮುಖ ಅಧ್ಯಾಯಗಳಿವೆ. ಮೊದಲನೆ ಅಧ್ಯಾಯ ಮೈಕ್ರೋಚಿಪ್‌ನ ಹಿನ್ನೆಲೆ, ಮುನ್ನೆಲೆಯನ್ನು ತೆರೆದಿಡುತ್ತದೆ. ಎರಡನೆ ಅಧ್ಯಾಯ ಬುದ್ಧಿ, ವೃದ್ಧಿಯ ಸಾಧನವಾಗಿ ಕಂಪ್ಯೂಟರ್‌ಗಳನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವ ತಿಳುವಳಿಕೆಯನ್ನು ನೀಡುತ್ತದೆ. ಹಾಗೆಯೇ ಪರ್ಸನಲ್ ಕಂಪ್ಯೂಟರ್‌ಗಳ ಲಾಭಗಳನ್ನು ವಿವರಿಸುವ ಅಧ್ಯಾಯಗಳೂ ಇವೆ. ಡಿಜಿಟಲ್ ಯುಗದಲ್ಲಿ ಇಂಗ್ಲಿಷ್ ಕನ್ನಡದೊಳಗೆ ಸರಾಗವಾಗಿ ನುಸುಳುವುದರಿಂದ ಇಲ್ಲಿರುವ ಕೆಲವು ಕನ್ನಡ ಶಬ್ದಗಳು ನಮ್ಮನ್ನು ಗೊಂದಲಗೊಳಿಸುವ ಸಾಧ್ಯತೆಗಳು ಇಲ್ಲದಿಲ್ಲ. ಅದೇನೇ ಇರಲಿ, ತಂತ್ರಜ್ಞಾನದ ಜೊತೆಗೆ ಬೆಳೆಯುತ್ತಿರುವ ಸಂದರ್ಭದಲ್ಲಿ ಕನ್ನಡ ಭಾಷಾ ಭಾರತಿ ಪ್ರಾಧಿಕಾರ ಈ ಪ್ರಕಾರದ ಕಡೆಗೆ ಒಲವು ತೋರಿದ್ದು ಅಭಿನಂದನೀಯ. ಕೃತಿಯ ಮುಖಬೆಲೆ 250 ರೂ. 

share
-ಕಾರುಣ್ಯಾ
-ಕಾರುಣ್ಯಾ
Next Story
X