ಕಾರು ಢಿಕ್ಕಿ: ಅಜ್ಜಿ ಮೃತ್ಯು- ಮೊಮ್ಮಗ ಗಂಭೀರ

ಬ್ರಹ್ಮಾವರ, ಎ.21: ಉಪ್ಪೂರು ಗ್ರಾಮದ ಹೆರಾಯಿಬೆಟ್ಟು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.20ರಂದು ರಾತ್ರಿ 8ಗಂಟೆ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ಮೊಮ್ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಪಾರ್ವತಿ(64) ಎಂದು ಗುರುತಿಸಲಾಗಿದೆ. ಅವರ ಮೊಮ್ಮಗ ನಿಖಿಲ್(7) ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರುತಿ ಇಕೋ ಕಾರು ಬೈಕ್‌ನ್ನು ಓವರ್‌ಟೇಕ್ ಮಾಡುವ ಭರದಲ್ಲಿ ರಸ್ತೆಯ ತೀರಾ ಬದಿಗೆ ಬಂದು ಉಪ್ಪೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಅಜ್ಜಿ ಮತ್ತು ಮೊಮ್ಮಗನಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ಪಾರ್ವತಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ
Next Story





