ಮೂವರ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ತುಮಕೂರು, ಎ.21: ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡವಿದ್ದ ಆರೋಪದ ಮೇಲೆ ಜಿಲ್ಲೆಯ ಗುಬ್ಬಿಯ ಮೂವರನ್ನು ಪೊಲೀಸರ ವರದಿ ಆಧಾರದ ಮೇಲೆ ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್ ಗಡಿಪಾರು ಮಾಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಗುಬ್ಬಿಯ ಜಿ.ಡಿ.ಪ್ರಕಾಶ್, ರಮೇಶ್, ಬ್ಯಾಟರಾಯಪ್ಪ ಇವರನ್ನು ತುಮಕೂರು ಗಡಿಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾಧಿಕಾರಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಧೀಶ ಬೋಪಣ್ಣ ಅವರು ಈ ಬಗ್ಗೆ ವಿಚಾರಣೆ ನಡೆಸಿ ಜಿಲ್ಲಾಧಿಕಾರಿಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದಾರೆ.
ಆರೋಪಿಗಳ ಪರವಾಗಿ ತುಮಕೂರು ವಕೀಲರಾದ ರಮೇಶ್ ವಾದಿಸಿದ್ದರು.
Next Story





