Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಫ್ತಿಕಾರ್ ಅಲಿ ಬಿಜೆಪಿ ಸೇರ್ಪಡೆ ಸುದ್ದಿ...

ಇಫ್ತಿಕಾರ್ ಅಲಿ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ22 April 2017 4:33 PM IST
share
ಇಫ್ತಿಕಾರ್ ಅಲಿ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು: ಯು.ಟಿ.ಖಾದರ್

ಮಂಗಳೂರು, ಎ.22: ತನ್ನ ಸಹೋದರ ಯು.ಟಿ.ಇಫ್ತಿಕಾರ್ ಅಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ಸಚಿವ ಖಾದರ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಸಹಿತ ಕೆಲವು ಮಾಧ್ಯಮಗಳಲ್ಲಿ ಇಫ್ತಿಕಾರ್ ಅಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವರದಿಯ ಹಿನ್ನಲೆಯಲ್ಲಿ ಶನಿವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಯು.ಟಿ.ಖಾದರ್, ನಮ್ಮ (ಯು.ಟಿ.ಫರೀದ್) ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯುಳ್ಳ ಕುಟುಂಬವಾಗಿದೆ. ಯಾವ ಕಾರಣಕ್ಕೂ ಈ ಕುಟುಂಬದ ಯಾವೊಬ್ಬ ಸದಸ್ಯ ಕೂಡ ಕಾಂಗ್ರೆಸ್ ತ್ಯಜಿಸಿ ಇತರ ಯಾವ ಪಕ್ಷಕ್ಕೂ ಸೇರ್ಪಡೆಗೊಳ್ಳುವ ಪ್ರಶ್ನೆಯೇ ಇಲ್ಲ. ಇಫ್ತಿಕಾರ್ ಅಲಿ ಬಿಜೆಪಿ ಸೇರುತ್ತಾರೆ ಎಂಬುದು ಶುದ್ಧ ಸುಳ್ಳು. ಹೀಗೆ ಹೇಳಿ ಗೊಂದಲ ಸೃಷ್ಟಿಸುತ್ತಿರುವುದರಿಂದ ಇವರಿಗೆ ಏನು ಲಾಭ ಎಂದು ಗೊತ್ತಾಗುತ್ತಿಲ್ಲ ಎಂದರು.

* ಕೆಂಪು ದೀಪ ತೆರವು ಸರಕಾರಕ್ಕೆ ಬಿಟ್ಟ ವಿಷಯ:

ಪ್ರಧಾನಿ ನರೇಂದ್ರ ಮೋದಿ ವಿಐಪಿ ಗಣ್ಯರಿಗೆ ‘ಕೆಂಪು ದೀಪ’ ಅಳವಡಿಕೆಗೆ ಸಂಬಂಧಿಸಿ ನಿಯಮಾವಳಿ ರೂಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ.ಖಾದರ್, ಕೆಂಪು ದೀಪವನ್ನು ನಾನು ನನ್ನ ತಲೆಯಲ್ಲಿಟ್ಟುಕೊಂಡು ಓಡಾಡುತ್ತಿಲ್ಲ. ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸರಕಾರ ಇದನ್ನು ನೀಡಿದೆ. ಕಿತ್ತುಕೊಳ್ಳುವುದಾದರೆ ಸರಕಾರವೇ ಕಿತ್ತುಕೊಳ್ಳಲಿದೆ. ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರೆ ಅಥವಾ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡರೆ ಅದಕ್ಕೆ ಬದ್ಧರಾಗಿರುವುದಾಗಿ ಹೇಳಿದರು.

ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತನ್ನ ಸರಕಾರಿ ಕಾರಿನಲ್ಲಿ ಅಳವಡಿಸಲಾದ ಕೆಂಪು ದೀಪ ತೆರವುಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಖಾದರ್, ಅದು ಅವರ ವೈಯಕ್ತಿಕ ವಿಚಾರ ಎಂದರು.

*ಪಡಿತರ ಚೀಟಿ ವಿತರಣೆಗೆ ಕ್ರಮ: ಅರ್ಜಿ ಸಲ್ಲಿಸಿ ಮೂರು ತಿಂಗಳಾದರೂ ಕೂಡ ಪಡಿತರ ಚೀಟಿ ಸಿಗದೆ ಸಮಸ್ಯೆ ವೃದ್ಧಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಯು.ಟಿ.ಖಾದರ್ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ರೇಷನ್ ಕಾರ್ಡ್ ಸಮಸ್ಯೆ ಇಂದು ನಿನ್ನೆಯದಲ್ಲ. ಕಳೆದ 20 ವರ್ಷದಿಂದ ಈ ಸಮಸ್ಯೆ ಇದೆ. ತಾನು ಆಹಾರ ಇಲಾಖೆಯ ಸಚಿವನಾದ ಬೆನ್ನಿಗೆ ರೇಷನ್ ಕಾರ್ಡ್ ಪಡೆಯಲು ಸರಳ ನಿಯಮಗಳನ್ನು ಅಳವಡಿಸಿದೆ. ಈ ಕ್ರಮವನ್ನು ಅಳವಡಿಸಿದ ರಾಜ್ಯಗಳ ಪೈಕಿ ಕರ್ನಾಟಕವು ದೇಶದಲ್ಲೇ ಪ್ರಥಮವಾಗಿದೆ. ಆದರೆ ಕಂದಾಯ ಇಲಾಖೆಯ ಅಸಹಕಾರದಿಂದ ರೇಷನ್ ಕಾರ್ಡ್‌ಗಳನ್ನು ಸಕಾಲಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ವಾರದೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಖಾದರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X