ವಿದ್ಯಾರ್ಥಿ ವೇತನ ಪಡೆಯಲು ಆಧಾರ್ ಕಡ್ಡಾಯ
ಉಡುಪಿ, ಎ.22: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2017-18ನೆ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾಗಿದೆ.
ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್‌ನ ಮಾಹಿತಿಯನ್ನು ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ನೀಡುವಂತೆ ಸೂಚಿಸಲಾಗಿದೆ.
ಕಳೆದ ಸಾಲಿನಲ್ಲಿ ಆಧಾರ್ ಕನ್ಸೆಂಟ್ ಹಾಗೂ ಆಧಾರ್ ಸೀಡಿಂಗ್ ಮಾಡಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಸಾಲಿನ ವಿದ್ಯಾರ್ಥಿ ವೇತನ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
Next Story





