Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ:...

ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ: ಶಿವಸುಂದರ್

ಸಂವಿಧಾನ ಸಂರಕ್ಷಣೆಗಾಗಿ ಜೈ ಭೀಮ್ ಮಹಾರ್ಯಾಲಿ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ23 April 2017 9:18 PM IST
share
ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ: ಶಿವಸುಂದರ್

ಉಡುಪಿ, ಎ.23: ನಮಗೆ ಬೇಕಾದ ಶಿಕ್ಷಣ, ಉದ್ಯೋಗ ಪಡೆಯುವ ಹಕ್ಕಿಗೆ ಇಂದು ಚ್ಯುತಿ ಬಂದಿದೆ. ಭವಿಷ್ಯದಲ್ಲಿ ನಮಗೆ ಬೇಕಾದ ರೀತಿಯಲ್ಲಿ ಬದುಕಲು ಸಾಧ್ಯವಿಲ್ಲ. ನಮ್ಮ ಸಂಸ್ಕೃತಿಯಂತೆ ಇಷ್ಟದ ಬಟ್ಟೆ ಧರಿಸಲು, ಆಹಾರ ಸೇವಿಸುವ ಹಕ್ಕು ಈ ದೇಶದಲ್ಲಿ ಇಲ್ಲವಾಗುತ್ತಿದೆ. ಸಂವಿಧಾನದ ಮೂಲ ಆಶಯ ಸಮಾನತೆ ಮತ್ತು ಮಮತೆಯ ಆಶಯಕ್ಕೆ ಇಂದು ಧಕ್ಕೆ ಬಂದಿದೆ ಎಂದು ಅಂಕಣಕಾರ ಶಿವಸುಂದರ್ ಟೀಕಿಸಿದ್ದಾರೆ.

ಉಡುಪಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ 126ನೆ ಜನ್ಮದಿನದ ಪ್ರಯುಕ್ತ ರವಿವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಜಡ್ಕ್ ಸ್ಟಾಂಡ್ ಬಳಿ ನಡೆದ ಸಂವಿಧಾನ ಸಂರಕ್ಷಣೆಗಾಗಿ ಜೈ ಭೀಮ್ ಮಹಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಇಂದು ಈ ದೇಶವನ್ನು ಕೇವಲ ಶ್ರೀಮಂತರ ಹಾಗೂ ಒಂದು ಧರ್ಮದವರನ್ನಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಅದಕ್ಕೆ ಅವಕಾಶ ನೀಡಬಾರದು. ಇದು ಎಲ್ಲರಿಗೂ ಸೇರಿದ ದೇಶವಾಗಿದೆ ಎಂದ ಅವರು, ಮೀಸಲಾತಿ ಪರ ಎಂದು ಹೇಳುತ್ತಿರುವ ಬಿಜೆಪಿ ಸರಕಾರ ಮೀಸಲಾತಿಯನ್ನು ಅಪ್ರಸ್ತುತಗೊಳಿಸುವ ನೀತಿಯನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು.

ರಾಷ್ಟ್ರದ ವಿರುದ್ಧ ಮಾತನಾಡಿದರೆ ಮಾತ್ರ ರಾಷ್ಟ್ರದ್ರೋಹವೇ ಹೊರತು ಸರಕಾರದ ವಿರುದ್ಧ ಮಾತನಾಡಿದರೆ ಅಲ್ಲ. ಸರಕಾರವನ್ನು ಟೀಕಿಸುವ ಹಕ್ಕು ನಮಗೆ ನೀಡಲಾಗಿದೆ. ಆದರೆ ಇಂದು ಆ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಕೊಲೆಯನ್ನು ಕೂಡ ಕಾನೂನುಬದ್ಧಗೊಳಿಸುವ ಸಂಚು ಮೋದಿ ಸರಕಾರದಿಂದ ನಡೆಯುತ್ತಿದೆ ಎಂದು ದೂರಿದರು.

ಇಂದು ನಮಗೆ ಜೀವಕಾರುಣ್ಯದ ರಾಜಕಾರಣ ಬೇಕೆ ಹೊರತು ದ್ವೇಷ ಬಿತ್ತುವ ರಾಜಕಾರಣವಲ್ಲ. ಅಂಬೇಡ್ಕರ್‌ರ ಸಮಾನತೆ ಮತ್ತು ಮಮತೆ ಆಶಯವನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮಾತನಾಡಿ, ನಮ್ಮನ್ನು ರಕ್ಷಿಸಲು ಮಾಡಿರುವ ಸಂವಿಧಾನವನ್ನು ಈಗ ನಾವು ರಕ್ಷಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿಯ ಬಿಕ್ಕಟ್ಟನ್ನು ದೇಶ ಎದುರಿಸುತ್ತಿದೆ. ಸಂವಿಧಾನದ ಆಶಯವು ಅಪಾಯದಲ್ಲಿ ಸಿಲುಕಿದೆ ಎಂದರು.

ಜನಪರ ಹೋರಾಟಗಾರ ನೂರ್ ಶ್ರೀಧರ್, ಹೋರಾಟಗಾರ ಹುಲಿಕುಂಟೆ ಮೂರ್ತಿ ಮಾತನಾಡಿದರು. ಅಧ್ಯಕ್ಷತೆಯನ್ನು ಸಂವಿಧಾನ ಸಂರಕ್ಷಣಾ ಮಹಾ ರ್ಯಾಲಿಯ ಗೌರವಾಧ್ಯಕ್ಷ ರೆ.ಫಾ.ವಿಲಿಯಂ ಮಾರ್ಟಿಸ್ ವಹಿಸಿದ್ದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಸುಂದರ್ ಮಾಸ್ತರ್, ಶ್ಯಾಮ್‌ರಾಜ್ ಬಿರ್ತಿ, ಶೇಖರ್ ಹೆಜಮಾಡಿ, ಉದಯಕುಮಾರ್ ತಲ್ಲೂರು, ಎಸ್.ಎಸ್. ಪ್ರಸಾದ್, ಬೊಗ್ರ ಕೊರಗ ಮೊದಲಾದವರು ಉಪಸ್ಥಿತರಿದ್ದರು.

ನಾರಾಯಣ ಮಣೂರು ಸ್ವಾಗತಿಸಿದರು. ದಿನಕರ ಎಸ್.ಬೆಂಗ್ರೆ ಕಾರ್ಯ ಕ್ರಮ ನಿರೂಪಿಸಿದರು. ಈ ಇದಕ್ಕೂ ಮುನ್ನ ಗಂಗೊಳ್ಳಿ, ಕಾರ್ಕಳ, ಹೆಜಮಾಡಿ ಯಿಂದ ಹೊರಟ ಬೈಕ್ ರ್ಯಾಲಿ ಉಡುಪಿಯಲ್ಲಿ ಸಮಾಪ್ತಿಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X