ಗಾಂಜಾ ಮಾರಾಟ ಯತ್ನ: ಓರ್ವನ ಬಂಧನ, ಇನ್ನೋರ್ವ ಪರಾರಿ

ಮಂಗಳೂರು, ಎ.23: ನಗರದ ಸುಲ್ತಾನ್ ಬತ್ತೇರಿಯಲ್ಲಿ ಗಾಂಜಾ ಮಾರಾಟ ಮಾಡಲೆತ್ನಿಸಿದ ಬೆಂದೂರ್‌ವೆಲ್‌ನ ಸಫ್ವಾನ್ (25) ಎಂಬಾತನನ್ನು ಬರ್ಕೆ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತನಿಂದ 8,000 ರೂ. ವೌಲ್ಯದ 125 ಗ್ರಾಂ ಗಾಂಜಾ ಮತ್ತು 35,000 ರೂ. ಮೌಲ್ಯದ ಮೊಬೈಲ್ ಫೋನನ್ನು ವಶ ಪಡಿಸಿಕೊಳ್ಳಲಾಗಿದೆ.
ಈತನ ಜತೆಗಿದ್ದ ಇನ್ನೋರ್ವ ಆರೋಪಿ ಮಂಗಳಾದೇವಿಯ ನಿತೇಶ್ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. ಖಚಿತ ಮಾಹಿತಿ ಮೇರೆಗೆ ಬರ್ಕೆ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ನರೇಂದ್ರ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
ಪರಾರಿಯಾಗಿರುವ ನಿತೇಶ್ ಶೆಟ್ಟಿ ಮಂಗಳೂರಿಗೆ ಗಾಂಜಾವನ್ನು ತರಿಸಿ ಇತರರಿಗೆ ಮಾರಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದ್ದು. ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತ ಆರೋಪಿ ಸಫ್ವಾನ್ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





