Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಾ.ರಾಜ್ ಜೀವನದ ತತ್ವಾದರ್ಶಗಳು ಮುಂದಿನ...

ಡಾ.ರಾಜ್ ಜೀವನದ ತತ್ವಾದರ್ಶಗಳು ಮುಂದಿನ ವರ್ಷದಿಂದ ಪಠ್ಯ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ24 April 2017 7:47 PM IST
share
ಡಾ.ರಾಜ್ ಜೀವನದ ತತ್ವಾದರ್ಶಗಳು ಮುಂದಿನ ವರ್ಷದಿಂದ ಪಠ್ಯ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಎ. 24: ಕನ್ನಡ ನಾಡಿನ ಖ್ಯಾತ ನಟ ಡಾ.ರಾಜ್‌ಕುಮಾರ್‌ರ ಜೀವನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮುಂಬರುವ ಶೈಕ್ಷಣಿಕ ವರ್ಷದಿಂದ ಪಠ್ಯಗಳಲ್ಲಿ ಅಳವಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ವರನಟ ಡಾ.ರಾಜ್‌ಕುಮಾರ್‌ರ 89ನೆ ಜನ್ಮದಿನಾಚರಣೆ ಅಂಗವಾಗಿ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಸಮಾಧಿಗೆ ನಮನ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರೋದ್ಯಮ ಲೋಕದಲ್ಲಿ ಮಿಂಚಿದ ಧೃವತಾರೆ ಡಾ.ರಾಜ್‌ಕುಮಾರ್. ಅವರ ಜೀವನ ಆದರ್ಶಗಳು ಇಂದಿನ ಪೀಳಿಗೆಗೆ ಸಂದೇಶವಾಗಿದೆ. ಹೀಗಾಗಿ ಅವರ ಜೀವನದ ಮೌಲ್ಯಗಳನ್ನು ಯುವ ಸಮುದಾಯಕ್ಕೆ ಪರಿಚಯಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ದಾದಾ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ಕಲಾಸೇವೆಯನ್ನು ಮುಂದುವರೆಸಿಕೊಂಡು ಬರುತ್ತಿರುವ ಅವರ ಕುಟುಂಬದವರಿಗೆ ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಪರಮೇಶ್ವರ್ ತಿಳಿಸಿದರು.

ಡಾ.ರಾಜ್‌ಕುಮಾರ್ ಪುತ್ರ ಶಿವರಾಜ್ ಕುಮಾರ್ ಮಾತನಾಡಿ, ರಾಜ್‌ಕುಮಾರ್ ಮಕ್ಕಳಾಗಿ ಜನಿಸಿದ ನಾವು ಧನ್ಯರಾಗಿದ್ದೇವೆ. ನಾಡಿನ ಜನರು ನಮ್ಮ ತಂದೆಯ ಮೇಲೆ ಇಟ್ಟಿರುವ ಅಭಿಮಾನಕ್ಕೆ ಋಣಿಗಳು. ಸರಕಾರ ಕಲಾವಿದನಿಗೆ ಇಷ್ಟು ದೊಡ್ಡ ಗೌರವ ನೀಡುತ್ತಿರುವುದಕ್ಕೆ ನಮ್ಮ ಕುಟುಂಬ ಆಭಾರಿಯಾಗಿದೆ ಎಂದರು.

ನಟ ಪುನೀತ್‌ರಾಜ್‌ಕುಮಾರ್ ಮಾತನಾಡಿ, ಅಪ್ಪನವರ ಬದುಕು ನಮಗೆ ಜೀವನದಲ್ಲಿ ಸ್ಪೂರ್ತಿಯಾಗಿದೆ. ಅವರ ಶಿಸ್ತು, ಸಂಯಮ ಯಶಸ್ಸಿಗೆ ಕಾರಣವಾಗಿತ್ತು. ಅದನೇ ನಾವಿಂದು ಅಳವಡಿಸಿಕೊಂಡಿದ್ದೇವೆ ಎಂದು ಹೇಳಿದರು.

ಈ ವೇಳೆ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್, ರಾಘವೇಂದ್ರರಾಜ್ ಕುಮಾರ್ ಹಾಗೂ ಡಾ.ರಾಜ್ ಕುಟುಂಬದ ಎಲ್ಲಾ ಪ್ರಮುಖರು ಹಿರಿ-ಕಿರಿಯ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ತಾಂತ್ರಿಕ ವರ್ಗದವರು ಇದ್ದರು. ಹಾಗೂ ನಾಡಿನ ವಿವಿಧ ಮೂಲೆಗಳಿಂದ ಅಭಿಮಾನಿಗಳ ಜನಸಾಗರವೇ ಸೇರಿದ್ದರಿಂದ ನೂಕು ನುಗ್ಗಲಾಯಿತು.

ರಾಜ್ಯ ಸರಕಾರ ಅಪ್ಪಾಜಿಯ ಜೀವನದ ತತ್ವ, ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಪಠ್ಯದಲ್ಲಿ ಅಳವಡಿಸಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದುದು. ಈ ವೇಳೆ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಸಿಡಿ ಬಿಡುಗಡೆಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ‘ಟಗರು’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗುವುದು.

-ಶಿವರಾಜ್‌ಕುಮಾರ್, ರಾಜ್‌ಕುಮಾರ್‌ರ ಪುತ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X