Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಮನುಕುಲಕ್ಕೆ ಮಾರಿ ‘ಮಲೇರಿಯಾ’

ಮನುಕುಲಕ್ಕೆ ಮಾರಿ ‘ಮಲೇರಿಯಾ’

ಡಾ. ಮುರಲೀ ಮೋಹನ್ ಚೂಂತಾರುಡಾ. ಮುರಲೀ ಮೋಹನ್ ಚೂಂತಾರು24 April 2017 11:01 PM IST
share
ಮನುಕುಲಕ್ಕೆ ಮಾರಿ ‘ಮಲೇರಿಯಾ’

ಪ್ರತಿ ವರ್ಷ ಎಪ್ರಿಲ್ 25ರಂದು ವಿಶ್ವದಾದ್ಯಂತ ವಿಶ್ವ ಮಲೇರಿಯಾ ದಿನ ಎಂದು ಆಚರಿಸಲಾಗುತ್ತಿದೆ. ಮಲೇರಿಯಾ ರೋಗದಿಂದಾಗುವ ಜಾಗತಿಕ ತೊಂದರೆಗಳು ಮತ್ತು ಪರಿಣಾಮಗಳ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ಜಾರಿಗೆತರಲಾಯಿತು. ವಿಶ್ವಾದ್ಯಂತ ಸರಿಸುಮಾರು 3.3 ಬಿಲಿಯನ್ ಮಂದಿ ಈ ರೋಗಕ್ಕೆ ವರ್ಷವೊಂದರಲ್ಲಿ ತುತ್ತಾಗುತ್ತಿದ್ದು, 2012ರಲ್ಲಿ 6.5 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. 2013ರಲ್ಲಿ 5.8 ಲಕ್ಷ ಮಂದಿ ಜೀವತೆತ್ತಿದ್ದಾರೆ ಎಂದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ವಿಶ್ವಸಂಸ್ಥೆಯ 60ನೆ ವಾರ್ಷಿಕ ಸಮ್ಮೇಳನ 2007ರ ಮೇನಲ್ಲಿ ಜರಗಿದಾಗ ಈ ‘ವಿಶ್ವ ಮಲೇರಿಯಾ ದಿನ’ ಆಚರಣೆಯನ್ನು ಪ್ರತೀ ವರ್ಷ ಎಪ್ರಿಲ್ 25ರಿಂದ ಜಾರಿಗೆ ತರಲಾಯಿತು. ಅದಕ್ಕೂ ಮೊದಲು 2001ರಿಂದ ಪ್ರತಿವರ್ಷ ಎಪ್ರಿಲ್ 25ರಂದು ‘ಆಫ್ರಿಕಾ ಮಲೇರಿಯಾ ದಿನ’ ಆಚರಿಸಲಾಗುತ್ತಿತ್ತು.

ಲ್ಯಾಟಿನ್ ಅಮೆರಿಕ, ಆಫ್ರಿಕ, ಏಷ್ಯಾಖಂಡಗಳ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಸಿಗುವ ಮಲೇರಿಯಾ, ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ ಮನುಕುಲದ ಬಹುದೊಡ್ಡ ಶತ್ರು ಎಂದರೂ ತಪ್ಪಲ್ಲ. ಬೆಳೆಯುತ್ತಿರುವ ರಾಷ್ಟ್ರದ ಬಡ ಮತ್ತು ಮಧ್ಯಮ ವರ್ಗದಜನರಲ್ಲಿ ಕಾಣಸಿಗುವ ಮಲೇರಿಯಾ, ಮೂಲಭೂತ ಸೌಕರ್ಯದ ಕೊರತೆ, ಬಡತನ, ಅನಕ್ಷರತೆ ಇತ್ಯಾದಿ ಕಾರಣಗಳಿಂದಾಗಿ ಭಾರತದಂತಹ ರಾಷ್ಟ್ರಗಳನ್ನು ಬಹಳವಾಗಿ ಕಾಡುತ್ತಿದೆ. ಮಲೇರಿಯಾ ರೋಗದಿಂದ ಉಂಟಾಗುವ ಆರ್ಥಿಕ, ಸಾಮಾಜಿಕ ಪರಿಣಾಮಗಳಿಂದಾಗಿ ದೇಶದ ಪ್ರಗತಿಗೆ ಬಹಳ ದೊಡ್ಡಕಂಟಕವಾಗಿ ಮಲೇರಿಯಾ ಬೆಳೆದು ನಿಂತಿದೆ ಎಂದರೂ ತಪ್ಪಲ್ಲ. ಈ ನಿಟ್ಟಿನಲ್ಲಿ ಮಲೇರಿಯಾ ದಿನ ಆಚರಣೆ ಹೆಚ್ಚು ಅರ್ಥಪೂರ್ಣವಾಗಬೇಕಾದರೆ ನಾವೆಲ್ಲರೂ ಮಲೇರಿಯಾ ವಿರುದ್ಧ ಸಮರಸಾರಿ, ರೋಗವನ್ನು ಗೆಲ್ಲಬೇಕಾದ ಅನಿವಾರ್ಯತೆಯೂ ಇದೆ.

ಮಲೇರಿಯಾ ಯಾಕೆ ಮತ್ತು ಹೇಗೆ?

ಮಲೇರಿಯಾ ರೋಗ ಒಂದು ಉಗ್ರ ಸ್ವರೂಪದ ಸಾರ್ವಜನಿಕ ಆರೋಗ್ಯ ಪಿಡುಗು ಆಗಿದ್ದು, ಬಡತನದ ರೇಖೆಗಿಂತ ಕೆಳಗಿರುವವರಲ್ಲಿ ಹೆಚ್ಚು ಕಂಡುಬರುತ್ತದೆ. ಪ್ಲಾಸ್ಮೋಡಿಯಂ ಜಾತಿಗೆ ಸೇರಿದ ಪ್ರೊಟೊಸೋವನ್ ಪರಾವಲಂಬಿಯೇ ಈ ರೋಗಕ್ಕೆ ಪ್ರಮುಖ ಕಾರಣ. ಈ ಪರಾವಲಂಬಿ ಜೀವಿಗಳಲ್ಲಿ ಐದುಜಾತಿಗಳು ಮಾನವರಿಗೆ ಮಲೇರಿಯಾ ಸೋಂಕು ತಗಲಿಸಬಹುದು. ಪ್ಲಾಸ್ಮೋಡಿಯಂ ವೈವಾಕ್ಸ್, ಫಾಲ್ಸಿಫೆರಂ, ಓವಾಲೆ ಮತ್ತು ಮಲೇರಿಯಾ ಎಂಬ ಐದು ಜಾತಿಗಳಲ್ಲಿ ಫಾಲ್ಸಿಫೆರಂ ಜಾತಿಯ ರೋಗಾಣು ಅತ್ಯಂತ ಗುರುತರವಾದ ಮಲೇರಿಯಾ ರೋಗಕ್ಕೆ ಕಾರಣವಾಗುತ್ತದೆ. ಸುಮಾರು ಶೇ. 80 ಮಲೇರಿಯಾ ಪ್ರಕರಣಗಳಿಗೆ ಫಾಲ್ಸಿಫೆರಂ ಕಾರಣವಾಗಿದ್ದು ಮಲೇರಿಯಾದಿಂದ ಸಂಬಂಧಿಸುವ ಸಾವುಗಳಲ್ಲಿ ಸುಮಾರು ಶೇ. 90ರಷ್ಟು ಪಾಲು ಇದರದ್ದೇ ಆಗಿರುತ್ತದೆ.

ಹೇಗೆ ಹರಡುತ್ತದೆ?

ಮಲೇರಿಯಾ ರೋಗ ಕೇವಲ ಹೆಣ್ಣು ಅನಾಫಿಲಿಸ್ ಸೊಳ್ಳೆಗಳಿಂದ ಮಾತ್ರ ಹರಡುತ್ತದೆ. ಮಲೇರಿಯಾ ಸೋಂಕಿತ ವ್ಯಕ್ತಿಯ ರಕ್ತವನ್ನು ಹೀರಿಕೊಂಡ ಸೊಳ್ಳೆಯ ರಕ್ತದಲ್ಲಿ ಸಣ್ಣ ಪ್ರಮಾಣದ ಸೂಕ್ಷ್ಮಮಲೇರಿಯಾ ರೋಗಾಣುಗಳಿರುತ್ತದೆ.ಒಂದು ವಾರಗಳ ಬಳಿಕ ಸೋಂಕಿತ ಸೊಳ್ಳೆಯು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಯ ರಕ್ತ ಹೀರಿಕೊಳ್ಳುವಾಗ ಈ ಪರಾವಲಂಬಿ ರೋಗಾಣು ಗಳು ಸೊಳ್ಳೆಯ ಎಂಜಲಿನೊಂದಿಗೆ ಬೆರೆತು, ಕಡಿತಕ್ಕೊಳಗಾದ ವ್ಯಕ್ತಿಯ ರಕ್ತದಲ್ಲಿ ಸೇರಿಕೊಳ್ಳುತ್ತದೆ. ಹೀಗೆ ಸೋಂಕಿತ ಹೆಣ್ಣು ಅನಾಫಿಲಿಸ್ ಸೊಳ್ಳೆ ಆರೋಗ್ಯವಂತ ವ್ಯಕ್ತಿಗೆ ಕಚ್ಚುವುದರಿಂದ ಜನರು ಮಲೇರಿಯಾ ರೋಗಕ್ಕೆ ತುತ್ತಾಗುತ್ತಾರೆ. ಗಂಡು ಸೊಳ್ಳೆಗಳು ರೋಗವನ್ನು ಹರಡಿಸುವುದಿಲ್ಲ. ಈ ಜಾತಿಯ ಹೆಣ್ಣು ಸೊಳ್ಳೆಗಳು ರಾತ್ರಿಯ ವೇಳೆ ರಕ್ತಹೀರುತ್ತವೆ. ಅವು ಮುಸ್ಸಂಜೆಯ ವೇಳೆ ಆಹಾರಕ್ಕಾಗಿ ಸಂಚರಿಸಲಾರಂಭಿಸಿ ಆಹಾರ ಹೀರಿಕೊಳ್ಳುವವರೆಗೂ ರಾತ್ರಿ ಹೊತ್ತು ಅವುಗಳ ಸಂಚಾರವನ್ನು ಮುಂದುವರಿಸುತ್ತದೆ. ರಕ್ತದಾನದ ಮೂಲಕವೂ ಮಲೇರಿಯಾ ಸೋಂಕು ಹರಡಬಹುದು. ಆದರೆ ಈ ರೀತಿಯಿಂದ ಹರಡುವುದು ಬಹಳ ಅಪರೂಪ.

ಮಲೇರಿಯಾ ರೋಗ ಹರಡುವ ಅನಾಫಿಲಿಸ್ ಸೊಳ್ಳೆ ತನ್ನ ವಂಶಾಭಿವೃದ್ಧಿ ನಡೆಸಲು ಮನುಷ್ಯನನ್ನು ಅವಲಂಬಿಸಿರುತ್ತದೆ. ಹೀಗೆ ಮನುಷ್ಯ ಸೋಂಕಿತ ಸೊಳ್ಳೆಯಿಂದ ಆರೋಗ್ಯವಂತ ಮನುಷ್ಯನ ರಕ್ತವನ್ನು ಸೇರಿದ ಬಳಿಕ, ಈ ಪರಾವಲಂಬಿಗಳು ಕೆಂಪು ರಕ್ತಕಣಗಳೊಳಗೆ ವೃದ್ಧಿಯಾಗುತ್ತವೆ ಮತ್ತು ಮಲೇರಿಯಾ ರೋಗದ ಲಕ್ಷ್ಷಣಗಳು ಕಾಣಿಸತೊಡಗುತ್ತದೆ.

ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕೆಲವು ಲಸಿಕೆಗಳು ಇನ್ನೂ ವಿಕಸನದ ಹಂತದಲ್ಲಿಯೇ ಇದೆ. ಉನ್ನತ ಸ್ತರದ ರಕ್ಷಣೆ ನೀಡುವ ಮಲೇರಿಯಾ ಲಸಿಕೆ ಸದ್ಯಕ್ಕೆ ಲಭ್ಯವಿಲ್ಲದ ಕಾರಣ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮತ್ತು ಸೊಳ್ಳೆಗಳ ನಿರ್ಮೂಲನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಲೇರಿಯಾ ರೋಗದ ಹೆಚ್ಚಿರುವ ಜಾಗಗಳಲ್ಲಿ ಮಲೇರಿಯಾ ಸೋಂಕಿನ ಸಾಧ್ಯತೆ ಕಡಿಮೆಗೊಳಿಸಲು ರೋಗ ನಿರೋಧಕ ಔಷಧಿಗಳನ್ನು ನಿರಂತರವಾಗಿ ಸೇವಿಸಬೇಕಾಗುತ್ತದೆ. ಆದರೂ, ಪರಾವಲಂಬಿ ಪ್ಲಾಸ್ಮೋಡಿಯಂ ಜೀವಿಗಳು, ಇಂತಹ ಹಲವಾರು ಔಷಧಿಗಳ ವಿರುದ್ಧ ಹೋರಾಡುವಷ್ಟರ ಮಟ್ಟಿಗೆ ವಿಕಸನಗೊಂಡಿದೆ. ಈ ಕಾರಣದಿಂದಲೇ ಮಲೇರಿಯಾ ರೋಗದ ಪರಿಣಾಮಕಾರಿ ನಿಯಂತ್ರಣಕ್ಕೆ ಹೆಚ್ಚಿನ ಮುತುವರ್ಜಿಯಿಂದ ಕೆಲಸ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ.


ರೋಗದ ಲಕ್ಷಣಗಳು ವಿಪರೀತ ಜ್ವರ, ನಡುಕ, ಗಂಟು ಅಥವಾ ಕೀಲುನೋವು, ವಾಂತಿ, ರಕ್ತಹೀನತೆ, ತಲೆ ಸುತ್ತುವುದು, ಉಸಿರು ಕಟ್ಟುವಿಕೆ ಮುಂತಾದುವುಗಳು ಕಾಣಿಸಿಕೊಳ್ಳುತ್ತದೆ. ರೋಗದತೀವ್ರತೆ ಜಾಸ್ತಿಯಾದಲ್ಲಿ ಅಕ್ಷಿಪಟಲದ ಹಾನಿ, ಸೆಳೆತ ಅಥವಾ ಅಪಸ್ಮಾರ ಮತ್ತು ಮೂತ್ರದಲ್ಲಿ ರಕ್ತ ಬರುವ ಸಾಧ್ಯತೆಯೂ ಇದೆ. ಮಲೇರಿಯ ರೋಗದಲ್ಲಿ ಬರುವ ಜ್ವರವೂ ಕೂಡಾ ಪ್ಲಾಸ್ಮೋಡಿಯ ಪರಾವಲಂಬಿಯ ಜಾತಿಯ ಪ್ರಭೇದಕ್ಕೆ ಅನುಗುಣವಾಗಿ ಇರುತ್ತದೆ. ವೈವಾಕ್ಸ್ ಮತ್ತು ಓವಾಲೆ ಸೋಂಕು ತಗಲಿದ್ದಲ್ಲಿ, ಎರಡು ದಿನಗಳಿಗೊಮ್ಮೆ ನಾಲ್ಕರಿಂದ 6ಗಂಟೆಗಳ ಕಾಲ ಹಠಾತ್ ಚಳಿ, ಬಳಿಕ ಜ್ವರ ಮತ್ತು ಬೆವರುವಿಕೆ ಸಂಭವಿಸುತ್ತದೆ.

ಪ್ಲಾಸ್ಮೋಡಿಯಂ ಮಲೇರಿಯ ಪ್ರಭೇದಗಳಲ್ಲಿ ಮೂರು ದಿನಗಳಿಗೊಮ್ಮೆ ಜ್ವರ ಮತ್ತು ಬೆವರುವಿಕೆ ಕಾಣಿಸಿಕೊಳ್ಳುಬಹುದು. ಫಾಲ್ಸಿಪೆರಂ ಪ್ರಭೇದದ ಮಲೇರಿಯಾ ಪ್ರತೀ 36-48 ಗಂಟೆಗಳಿಗೊಮ್ಮೆ ಮರುಕಳಿಸುವ ಜ್ವರವಾಗಿದ್ದು ಅಷ್ಟೇನೂ ತೀವ್ರವಾಗಿರುವುದಿಲ್ಲ. ಆದರೆ ಬಹುಮಟ್ಟಿಗೆ ಸತತ ಜ್ವರಕ್ಕೆ ಕಾರಣವಾಗಬಹುದು. ಅತೀ ತೀವ್ರ ಮಲೇರಿಯಾ ಸಾಮಾನ್ಯವಾಗಿ ಫಾಲ್ಸಿಫೆರಂ ಸೋಂಕಿನಿಂದ ಆಗುತ್ತದೆ. ಸೋಂಕು ತಗಲಿದ 6-14ದಿನಗಳ ನಂತರ ಕಾಣಿಸಿಕೊಳ್ಳುತ್ತದೆ. ಸೂಕ್ತ ಚಿಕಿತ್ಸೆ, ಸಕಾಲದಲ್ಲಿ ದೊರಕದಿದ್ದರೆ ತೀವ್ರ ಮಲೇರಿಯಾದ ಪರಿಣಾಮದಿಂದ ಕೋಮಾಸ್ಥಿತಿ ಮತ್ತು ಸಾವು ಸಂಭವಿಸಬಹುದು. ಚಿಕ್ಕ ಮಕ್ಕಳು ಮತ್ತು ಗರ್ಭಿಣಿಯರು ಇದಕ್ಕೆ ಸುಲಭವಾಗಿ ತುತ್ತಾಗುತ್ತಾರೆ. ಹಿಗ್ಗಿದಗುಲ್ಮಗ್ವಂಥಿ(ಸ್ಪೀನೋಮೆಗಾಲೆ) ತೀವ್ರ ತಲೆನೋವು, ಮೆದುಳಿನ ರಕ್ತಹೀನತೆ, ಹಿಗ್ಗಿದ ಯಕೃತ್ತು (ಹೆಪಾಟೊ ಮೆಗಾಲೆ), ಮೂತ್ರಪಿಂಡಗಳ ವೈಫಲ್ಯಗಳು ಸಂಭವಿಸಬಹುದು. ಮೂತ್ರಪಿಂಡಗಳ ವೈಫಲ್ಯದಿಂದ ಕರಿಮೂತ್ರ ಜ್ವರ ಕೂಡಾ ಉಂಟಾಗಬಹುದು.

 ಮಕ್ಕಳಲ್ಲಿ ತೀವ್ರ ಮಲೇರಿಯಾ ಬಂದಲ್ಲಿ, ಅರಿವಿನ ಶಕ್ತಿ ಕುಂಠಿತಗೊಳಿಸಬಹುದು. ಮೆದುಳಿನ ಮಲೇರಿಯಾ ಜ್ವರದಿಂದ ನರ ಮಂಡಲಕ್ಕೂ ಹಾನಿಯಾಗುವ ಸಾಧ್ಯತೆ ಇದೆ. ಅಪಸ್ಮಾರ ಮತ್ತು ಅಕ್ಷಿಪಟಲ ಬಿಳಿಯಾಗುವುದು ಮೆದುಳಿನ ಜ್ವರದ ಸಂಕೇತವಾಗಿರುತ್ತದೆ. ತೀವ್ರತರ ಮಲೇರಿಯಾ ಫಾಲ್ಸಿಫೆರಂ ಪ್ರಭೇದಗಳಲ್ಲಿ ಕಾಣಸಿಗುತ್ತದೆ. ಯಕೃತ್ತಿನಲ್ಲಿ ಅವ್ಯಕ್ತ ಪರಾವಲಂಬಿಗಳ ಇರುವಿಕೆಯ ಕಾರಣದಿಂದಾಗಿ, ಸೋಂಕು ತಗಲಿದ ತಿಂಗಳುಗಳ ಅಥವಾ ವರ್ಷಗಳ ಬಳಿಕವೂ ರೋಗ ಮರುಕಳಿಸಬಹುದು. ಹಾಗಾಗಿ ರಕ್ತದಲ್ಲಿ ಪರಾವಲಂಬಿಗಳು ಇಲ್ಲದಿರುವುದನ್ನು ಕಂಡು, ಮಲೇರಿಯಾ ಇಲ್ಲ ಎಂಬ ತೀರ್ಮಾನಕ್ಕೆ ಬರಬಾರದು. ಈ ರೀತಿಯ ದೀರ್ಘಕಾಲದ ಮಲೇರಿಯಾ ವೈವಾಕ್ಸ್ ಮತ್ತು ಓವಾಲೆ ಪ್ರಭೇದಗಳಲ್ಲಿ ಕಂಡುಬರುತ್ತದೆ ಮತ್ತು ಈ ರೀತಿಯ ರೋಗಾಣುವಿನಿಂದ ಮಲೇರಿಯಾ ಬಂದಿದ್ದಲ್ಲಿ ಸಂಪೂರ್ಣವಾಗಿ ಮಲೇರಿಯಾ ನಿರ್ಮೂಲನವಾಗುವಂತೆ ಸೂಕ್ತ ಔಷಧ ಸರಿಯಾದ ಪ್ರಮಾಣದಲ್ಲಿ ತೆಗೆದುಕೊಳ್ಳುವುದು ಅತೀ ಅವಶ್ಯಕ.


ತಡೆ ಗಟ್ಟುವುದು ಹೇಗೆ?

ಮಲೇರಿಯಾ ರೋಗವು ಮನುಷ್ಯನಿಂದ ಮನುಷ್ಯನಿಗೆ ಹರಡುವ ಸಾಂಕ್ರಮಿಕ ರೋಗವಾಗಿರುತ್ತದೆ. ಸಾಮಾನ್ಯವಾಗಿ ಎಲ್ಲಾ ಸಾಂಕ್ರಮಿಕ ರೋಗಗಳಲ್ಲಿ ಇರುವಂತೆ ರೋಗ ನಿಯಂತ್ರಣಕ್ಕೆ ಮತ್ತು ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಮಲೇರಿಯಾ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಮತ್ತು ಸಹಕಾರ ಅತೀ ಅವಶ್ಯಕ. ಸಾರ್ವಜನಿಕ ಸ್ಥಳಗಳಲ್ಲಿ ಸೊಳ್ಳೆಗಳು ಬೆಳೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕ ಸ್ಥಳಗಳ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು.

ಸೊಳ್ಳೆಗಳ ನಿಯಂತ್ರಣಕ್ಕಾಗಿ, ಮನೆಯ ಸುತ್ತಮುತ್ತಲಿನ ಆವರಣಗಳಲ್ಲಿ ನೀರು ನಿಲ್ಲದಂತೆ ನಿಗಾ ವಹಿಸಬೇಕು. ನಿಂತ ನೀರಲ್ಲಿ ಅನಾಫಿಲಿಸ್ ಸೊಳ್ಳೆ ಮರಿಗಳು ಬೆಳೆದು ರೋಗ ವರ್ಧನೆ ಕಾರಣವಾಗಬಹುದು. ನೀರು ನಿಲ್ಲುವುದನ್ನು ತಡೆಗಟ್ಟಲು ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

* ಎಳನೀರು ಚಿಪ್ಪು, ಟಯರ್, ಹೂಕುಂಡಗಳ ಕೆಳಗೆ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು.

* ಉಪಯೋಗಿಸದೆ ಇರುವ ನೀರು ನಿಲ್ಲುವ ವಸ್ತುಗಳನ್ನು ಬೋರಲು ಹಾಕಬೇಕು.

* ಬಾವಿ, ನೀರಿನ ತೊಟ್ಟಿ ಮುಂತಾದ ಕಡೆಗಳಲ್ಲಿ ಸೊಳ್ಳೆ ಮರಿಗಳನ್ನು ತಿನ್ನುವ ಗಪ್ಪಿ ಮತ್ತು ಗಂಬೂಸಿ ಮೀನುಗಳನ್ನು ಹಾಕುವ ಮೂಲಕನ ಸೊಳ್ಳೆಗಳನ್ನು ನಿಯಂತ್ರಿಸಬಹುದು.

* ರಾತ್ರಿ ಮಲಗುವ ಸಮಯದಲ್ಲಿ ಸೊಳ್ಳೆ ಪರದೆ, ಸೊಳ್ಳೆ ವಿಕರ್ಷಿತವಾಗುವ ದ್ರಾವಣಗಳನ್ನು ಬಳಸಬೇಕು.

* ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ, ಘನತ್ಯಾಜ್ಯಗಳನ್ನು ಎಸೆಯುವುದನ್ನು ನಿಲ್ಲಿಸಬೇಕು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಅತೀ ಅವಶ್ಯಕ.

* ಯಾರಿಗಾದರೂ ಜ್ವರ ಬಂದಲ್ಲಿ ತೀವ್ರ ನಡುಕ, ಚಳಿ ಜ್ವರವಿದ್ದಲ್ಲಿ ತಕ್ಷಣ ವೈದ್ಯರನ್ನು ಕಂಡು ಮಲೇರಿಯಾ ರಕ್ತಪರೀಕ್ಷೆ ಮಾಡಿಸಬೇಕು. ಸಾಮಾನ್ಯ ವೈರಸ್‌ಜ್ವರವೆಂದು ನಿರ್ಲಕ್ಷಿಸಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಆರಂಭಿಕ ಹಂತದಲ್ಲಿ ಮಲೇರಿಯಾ ರೋಗವನ್ನು ಗುರುತಿಸಿದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಬಹುದು.

* ಹೆಚ್ಚಿನ ಜನ ಸಾಂದ್ರತೆ ಇರುವ ಕೊಳೆಗೇರಿ ಪ್ರದೇಶಗಳಲ್ಲಿ ಸೊಳ್ಳೆಗಳ ಸಾಂದ್ರತೆಯೂ ಹೆಚ್ಚಿರುತ್ತದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮಲೇರಿಯಾ ಹರಡುವ ಸಾಧ್ಯತೆ ಇರುತ್ತದೆ. ಇಂತಹ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಸೊಳ್ಳೆಗಳ ನಿರ್ಮೂಲನಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು.

*ಮಲೇರಿಯಾ ರೋಗದ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಿಗೆ ಪ್ರಯಾಣ ಮಾಡುವ ತುರ್ತು ಆವಶ್ಯಕತೆ ಇದ್ದಲ್ಲಿ, ಅಥವಾ ಈ ಮೊದಲೇ ಮಲೇರಿಯಾ ರೋಗ ಬಂದಿದ್ದಲ್ಲಿ ವೈದ್ಯರ ಸಲಹೆ ಮೇರೆಗೆ ಮಲೇರಿಯಾ ರೋಗ ನಿರೋಧಕ ಔಷಧಿ ಸೇವನೆ ಮಾಡುವುದು ಉತ್ತಮ.

ಒಟ್ಟಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದಂತಹ ರಾಷ್ಟ್ರಗಳಲ್ಲಿ ದೀರ್ಘಾವಧಿಯ ಮಲೇರಿಯಾ ರೋಗಕ್ಕೆ ಚಿಕಿತ್ಸೆ ನೀಡುವುದಕ್ಕಿಂತ, ಆರಂಭದಲ್ಲೇ ಅದನ್ನು ತಡೆಗಟ್ಟುವುದು, ರೋಗದ ದೃಷ್ಟಿಯಿಂದಲ್ಲದೆ ಆರ್ಥಿಕ ದೃಷ್ಟಿಯಿಂದ ಹೆಚ್ಚು ಪರಿಣಾಮಕಾರಿಯಾಗಿದೆ.

share
ಡಾ. ಮುರಲೀ ಮೋಹನ್ ಚೂಂತಾರು
ಡಾ. ಮುರಲೀ ಮೋಹನ್ ಚೂಂತಾರು
Next Story
X