ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವತಿಯಿಂದ ಉದ್ಯಮಶೀಲತಾ ಕಾರ್ಯಾಗಾರ

ಮಂಗಳೂರು, ಎ.24: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಬಿಸಿಸಿಐ) ವತಿಯಿಂದ ಆರು ದಿನಗಳ ಉದ್ಯಮಶೀಲತಾ ಕಾರ್ಯಾಗಾರ ನಡೆಯಿತು.
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಯುವ ಉದ್ಯಮಿಗಳಿಗೆ ಹೊಸ ಉದ್ಯಮ ಸ್ಥಾಪಿಸಲು ಇಂತಹ ಕಾರ್ಯಾಗಾರವು ಸಹಕಾರಿಯಾಗಲಿದೆ. ಕಾರ್ಯಾಗಾರದಲ್ಲಿ ಭಾಗವಹಿಸಿರುವ ಎಲ್ಲಾ ಪ್ರತಿನಿಧಿಗಳಿಗೆ ಶುಭವಾಗಲಿ ಎಂದು ಹಾರೈಸಿದರು.
ಅಬ್ರಹಾಂ ಜೇಮ್ಸ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಬಿಸಿಸಿಐ ಸದಸ್ಯ ಮುಹಮ್ಮದ್ ಶರೀಫ್, ಕಾರ್ಯದರ್ಶಿ ಇಮ್ತಿಯಾಝ್ ಅಹಮದ್ ಉಪಸ್ಥಿತರಿದ್ದರು.
ಖಾಲಿದ್ ತಣ್ಣೀರುಬಾವಿ ಕಿರಾಅತ್ ಪಠಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.
Next Story





