ದಿಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಕೇನ್ ರಾಜೀನಾಮೆ
ಶೀಲಾ, ಪುತ್ರನ ವಿರುದ್ಧ ವಾಗ್ದಾಳಿ

ಹೊಸದಿಲ್ಲಿ, ಎ.26: ದಿಲ್ಲಿ ಮುನಿಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ದಿಲ್ಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದಿದೆ.
ಚುನಾವಣೆಗಳಲ್ಲಿ ಬಿಜೆಪಿ ಭಾರೀ ವಿಜಯ ಸಾಧಿಸಿದ ಬೆನ್ನಲ್ಲೇ ಅವರ ಈ ಹೇಳಿಕೆ ಬಂದಿದೆ. ತಾವು ರಾಜೀನಾಮೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಮಾಕನ್, ಅದೇ ಸಮಯ ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಮತ್ತಾಕೆಯ ಪುತ್ರ ಸಂದೀಪ್ ದೀಕ್ಷಿತ್ ಅವರ ವಿರುದ್ಧ ವಾಗ್ದಾಳಿ ನಡೆಸುತ್ತ್ತಾ ಅವರು ತಮ್ಮ ವಿರುದ್ಧ ನಿರಂತರ ಅಪಪ್ರಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಿದ್ದಾರೆ.
ಚುನಾವಣೆಗೆ ಸ್ವಲ್ಪವೇ ಸಮಯದ ಮುಂಚೆ ಮಾಕನ್ ಅವರು ಪಕ್ಷದೊಳಗೆ ಬಂಡಾಯ ಎದುರಿಸಬೇಕಾಗಿ ಬಂದಿತ್ತಲ್ಲದೆ, ಅರ್ವಿಂದರ್ ಸಿಂಗ್ ಲವ್ಲಿ ಅವರು ಬಿಜೆಪಿ ಸೇರಿ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದರು.
Next Story





