Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪ ಚುನಾವಣಾ ಆಯೋಗದ...

ಯಡಿಯೂರಪ್ಪ ಚುನಾವಣಾ ಆಯೋಗದ ಆಯುಕ್ತರೇ...: ಸಿದ್ದರಾಮಯ್ಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ26 April 2017 1:33 PM IST
share
ಯಡಿಯೂರಪ್ಪ ಚುನಾವಣಾ ಆಯೋಗದ ಆಯುಕ್ತರೇ...: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು, ಎ.26: ವಿಧಾನಸಭೆಗೆ ಅವಧಿಗೆ ಮೊದಲೇ ಚುನಾವಣೆ ಬರಲಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ಆಯೋಗದ ಆಯುಕ್ತರೇ..?

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ.

ವಿಧಾನಸಭೆಗೆ ಅವಧಿಗೆ ಮೊದಲೇ ಚುನಾವಣೆ ಎದುರಾಗಲಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಕುರಿತು  ಮೈಸೂರುವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ ಸಿಎಂ ಈ ರೀತಿ ಪ್ರತಿಕ್ರಿಯಿಸಿದರು.

ಯಡಿಯೂರಪ್ಪಹೇಳಿದ್ದು ಈ ವರೆಗೆ ಯಾವುದೂ ನಿಜ ಆಗಿಲ್ಲ. ಅವರದ್ದು ಕೇವಲ 'ಹಿಟ್ ಆ್ಯಂಡ್ ರನ್' ಕೇಸು ಎಂದು ವ್ಯಂಗ್ಯವಾಡಿದರು.

ಮೂವರು ಮಂತ್ರಿಗಳು ಜೈಲಿಗೆ ಹೋಗಲಿದ್ದಾರೆ. ಇನ್ನೇನೋ ಆಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು. ಅದು ನಿಜ ಆಯಿತೇ ? ಯಾವುದಾದರೂ ಒಂದು ನಿಜ ಆಗಿದೆಯೇ? ಏಕೆ ಯಾವುದೂ ನಿಜ ಆಗಿಲ್ಲ ಎಂದು ನೀವೇ (ಮಾಧ್ಯಮ ಪ್ರತಿನಿಧಿಗಳು) ಅವರನ್ನು ಕೇಳಬೇಕಿತ್ತು ಎಂದರು.

ಯಡಿಯೂರಪ್ಪ ಅವರು ಇನ್ ಕಮ್ ಟ್ಯಾಕ್ಸ್ ಕಮಿಷನರ್ ಆಗಿದ್ದಾಯ್ತು. ಈಗ ಎಲೆಕ್ಷನ್ ಕಮಿಷನರ್ ಆಗಿದ್ದಾರೆ. ಮುಂದೆ ಏನೇನು ಆಗುವರೋ ಗೊತ್ತಿಲ್ಲ ಎಂದು ಹೇಳಿದರು.

ನನ್ನ ವಿರುದ್ಧ ಯಡಿಯೂರಪ್ಪ ಅವರು ಅಧಿಕಾರ ದುರುಪಯೋಗದ ಮಾತನಾಡಿದ್ದಾರೆ. ಅವರಿಂದ ಇಂಥದ್ದನ್ನು ನಾವು ಕೇಳಬೇಕೇ ? ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತದೆ ಅಷ್ಟೆ.

ಅಧಿಕಾರದಲ್ಲಿ ಇದ್ದಾಗ ಮಾಡಬಾರದ್ದನ್ನು ಮಾಡಿ ಈಗ ನಮಗೆ ಹೇಳುತ್ತಿದ್ದಾರೆ. ಯಡಿಯೂರಪ್ಪ ಅವರು ಅಸಂಬದ್ಧವಾಗಿ ಮಾತನಾಡುತ್ತಾರೆ. ಸುಳ್ಳುಗಳನ್ನು ಹೇಳುತ್ತಾರೆ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸದಿರುವುದೇ ಗೌರವ ಎಂದರು.

ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಎಲ್ಲ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಸರ್ಕಾರದ ಅವಧಿ ಇನ್ನು ಒಂದು ವರ್ಷ ಇದೆ. ಈ ಅವಧಿಯಲ್ಲಿ ಎಲ್ಲ ಭರವಸೆಗಳು ಅನುಷ್ಠಾನಗೊಳ್ಳಲಿವೆ ಎಂದು ಹೇಳಿದರು.

ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ತರುವ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅದು ಬಿಜೆಪಿಯ ರಹಸ್ಯ ಅಜೆಂಡಾ. ಈಗಾಗಲೇ ಕಾಯಿದೆ ಜಾರಿಯಲ್ಲಿದೆ. ಹಾಲು ಕೊಡುವ ಹಸುಗಳನ್ನು ವಧೆ ಮಾಡಬಾರದು ಎಂದು ಕಾಯಿದೆ ಹೇಳುತ್ತದೆ. ಬಿಜೆಪಿಯ ರಹಸ್ಯ  ಕಾರ್ಯಸೂಚಿ ಒಂದೊಂದಾಗಿ ಜಾರಿಗೆ ಬರುತ್ತಿದೆ.

ದಿಲ್ಲಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿರಲಿಲ್ಲ. ಉತ್ತಮ ಪ್ರದರ್ಶನ ನೀಡಬಹುದು ಎಂಬ ಅನಿಸಿಕೆ ಇತ್ತು. ಆ ರೀತಿಯೇ ಆಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ತಿಳಿಸಿದರು.

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ರಸ್ತೆ ನಿರ್ಮಿಸುವ ವಿಚಾರ ಇನ್ನೂ ಚರ್ಚೆ ಹಂತದಲ್ಲಿದೆ. ಬಿಜೆಪಿಯವರ ಆರೋಪಗಳಿಗೆ ಹೆದರಿ ಉಕ್ಕು ಸೇತುವೆ ಯೋಜನೆ ಕೈ ಬಿಡಲಿಲ್ಲ. ಹಸಿರು ಪೀಠದ ತಡೆ ಆದೇಶ, ಕೆಲ ಸಾರ್ಜವನಿಕರ ವಿರೋಧದಿಂದ ಹಿಂದೆ ಸರಿಯಬೇಕಾಯಿತು.

ದತ್ತ ಪೀಠ ವಿವಾದ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಗಮನ ಹರಿಸುವಂತೆ ಕಾನೂನು ಇಲಾಖೆ ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು. 
 
ವಿಶ್ವನಾಥ್ ಪಕ್ಷ ಬಿಡುವುದಿಲ್ಲ : 

ಮಾಜಿ ಸಚಿವ ವಿಶ್ವನಾಥ್ ಹೇಳಿಕೆಗಳಿಗೆ ಯಾವತ್ತೂ ಪ್ರತಿಕ್ರಿಯಿಸಿಲ್ಲ. ಕಾಂಗ್ರೆಸ್ ನನ್ನ ತಾಯಿ ಎಂದು ಅವರು ಹೇಳಿದ್ದಾರೆ. ಹೀಗಾಗಿ ವಿಶ್ಪನಾಥ್ ಪಕ್ಷ ಬಿಡುವುದಿಲ್ಲ ಎಂದರು.

ರಾಯಚೂರಿನಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದು ಮೂರು ತಿಂಗಳಾಗಿಲ್ಲ. ಆಗಲೇ ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ಸಮ್ಮೇಳನ ನಡೆಸಲು ಹೊರಟಿರುವುದು ಸರಿಯಲ್ಲ ಎಂಬ ಪ್ರಗತಿಪರ ಸಾಹಿತಿಗಳ ಹೇಳಿಕೆಗೆ, ಈಗ ಸಿದ್ಧತೆ ನಡೆಯುತ್ತಿದೆ ಅಷ್ಟೆ ಎಂದರು.

ನಾಳೆ ದುಬೈಗೆ 
ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉದ್ಘಾಟನೆಗೆ ಶುಕ್ರವಾರ ದುಬೈಗೆ ತೆರಳುತ್ತಿದ್ದೇನೆ. ಅಲ್ಲಿಯ ಕನ್ನಡಿಗರು ಸೇರಿ ವೇದಿಕೆ ರಚನೆ ಮಾಡಿಕೊಂಡಿದ್ದಾರೆ. ಮೂರು ದಿನಗಳ ಪ್ರವಾಸ ಇದಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X