Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಾಂಬ್ ನಾಗ ಪ್ರಕರಣ: ಸುಪ್ರೀಂಕೋರ್ಟ್...

ಬಾಂಬ್ ನಾಗ ಪ್ರಕರಣ: ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ26 April 2017 8:46 PM IST
share
ಬಾಂಬ್ ನಾಗ ಪ್ರಕರಣ: ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಎ.26: ಬ್ಲಾಕ್ ಆ್ಯಂಡ್ ವೈಟ್ ದಂಧೆಯಲ್ಲಿ ತೊಡಗಿದ್ದ ಆರೋಪ ಎದುರಿಸುತ್ತಿರುವ ಮಾಜಿ ರೌಡಿಶೀಟರ್ ವಿ.ನಾಗರಾಜ್ ಯಾನೆ ಬಾಂಬ್ ನಾಗ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡುವಂತೆ ಸೂಚಿಸಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಈ ಸಂಬಂಧ ವಿ.ನಾಗರಾಜ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಪೀಠ ಈ ಆದೇಶ ನೀಡಿತು.     ಅರ್ಜಿದಾರರ ಪರ ವಾದಿಸಿದ ವಕೀಲ ಶ್ರೀರಾಮ್‌ರೆಡ್ಡಿ, ತಮ್ಮ ಕಕ್ಷಿದಾರರಾದ ವಿ.ನಾಗರಾಜ್ ಅವರ ಶರಣಾಗತಿಯಾಗಲಿ ಅಥವಾ ಬಂಧನವೇ ಆಗಲಿ ಪ್ರತಿಯೊಂದನ್ನೂ ವಿಡಿಯೋ ಮೂಲಕವೇ ವಿಚಾರಣೆ ನಡೆಸಬೇಕು. ಹಾಗೂ ವಕೀಲರ ಮುಂದೆಯೇ ಪೊಲೀಸರು ವಿಚಾರಣೆ ನಡೆಸಲು ನ್ಯಾಯಪೀಠವು ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಿಚಾರಣೆ ವೇಳೆ ಪ್ರಕರಣ ಸಂಬಂಧ ಪೊಲೀಸರಿಗೆ ವಿವರವಾದ ಹೇಳಿಕೆ ನೀಡಲು ಅವರು ಸಿದ್ಧರಿದ್ದಾರೆ. ಆದರೆ ಶರಣಾದ ಕೂಡಲೇ ಪೊಲೀಸರು ಕಿರುಕುಳ ನೀಡಬಹುದು. ದೌರ್ಜನ್ಯ ಎಸಗಬಹುದು. ಪೊಲೀಸರು ಕಾನೂನು ಕೈಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ನಾಗರಾಜ್ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಇದೇ ವೇಳೆಯಲ್ಲಿ ನ್ಯಾಯಪೀಠವು ಪೊಲೀಸರಿಂದ ನಿಮಗೆ ಕಿರುಕುಳದ ಭೀತಿ ಏಕೆ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಪೊಲೀಸರು ಹೆಡೆಮುರಿ ಕಟ್ಟುತ್ತೇವೆ ಎನ್ನುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಭೀತಿ ಇದೆ ಎಂದರು.

ವೀಡಿಯೋ ಬಿಡುಗಡೆ ಮಾಡಿದ ಬಳಿಕ ಪೊಲೀಸರು ತಮ್ಮ ಕಕ್ಷಿದಾರರ ವಿರುದ್ಧ ಹೆಚ್ಚು ಕೇಸುಗಳನ್ನು ದಾಖಲಿಸುತ್ತಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು. ಈ ಆರೋಪ ಕೇಳುತ್ತಿದ್ದಂತೆ ಪೊಲೀಸರು ನ್ಯೂಟನ್ ನಿಯಮ ಪಾಲಿಸುತ್ತಿದ್ದಾರೆ ಎನಿಸುತ್ತಿದೆ. ಪ್ರತಿಯೊಂದು ಕ್ರಿಯೆಗೂ ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆ ಇರುತ್ತದೆ. ಈ ನಿಯಮವನ್ನು ಪೊಲೀಸರು ಸಹ ಅನುಸರಿಸುತ್ತಿರಬಹುದು ಎಂದು ಲಘು ಧಾಟಿಯಲ್ಲಿ ನ್ಯಾಯಪೀಠವು ಅಭಿಪ್ರಾಯ ವ್ಯಕ್ತಪಡಿಸಿದರು.

ಸರಕಾರಿ ಪರ ವಕೀಲ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನಣ್ಣ ವಾದಿಸಿ, ಕಳೆದ 1 ತಿಂಗಳಿನಿಂದ ಆರೋಪಿ ನಾಗರಾಜ ಪರಾರಿಯಾಗಿದ್ದು, ಕಾನೂನು ಬದ್ಧವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀರಾಮರೆಡ್ಡಿ, ನಾಗರಾಜು ನಮ್ಮ ಕಚೇರಿಗೆ ಬಂದು ವಕಾಲತ್ತು ನೀಡಿದ್ದಾರೆ. ಅವರು ಎಲ್ಲೂ ಪರಾರಿಯಾಗಿಲ್ಲ ಎಂದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ನ್ಯಾಯಪೀಠ, ಅವರು ಯಾವ ಸಮಯಕ್ಕೆ ಬರುತ್ತಾರೆ ತಿಳಿಸಿ ಎಂದು ಸೂಚಿಸಿತು. ಮತ್ತೆ ನಮ್ಮ ಕಚೇರಿಗೆ ಬಂದರೆ ಅವರನ್ನು ಎಎಜಿ ಪೊನ್ನಣ್ಣ ಬಳಿಯೇ ಕರೆತರುತ್ತೇನೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು 1997ರಲ್ಲಿ ಪಶ್ಚಿಮಬಂಗಾಳದ ಡಿ.ಕೆ.ಬಸು ಪ್ರಕರಣದಲ್ಲಿ ಪೊಲೀಸರಿಗೆ ಹಲವು ಮಾರ್ಗಸೂಚಿಗಳನ್ನು ಪಾಲಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅದರಂತೆ, ವಿ.ನಾಗರಾಜ ಪ್ರಕರಣದಲ್ಲೂ ಸುಪ್ರೀಂನ ಹಲವು ಆದೇಶಗಳನ್ನು ಪಾಲಿಸಲು ಹೈಕೋರ್ಟ್ ಆದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.

ನಾಗರಾಜ್‌ನ ಮಕ್ಕಳು ಒಂದೇ ದಿನ ಹುಟಿದ್ದಾರಾ: ಪ್ರಕರಣದ ವಿಚಾರಣೆ ವೇಳೆ ನಾಗರಾಜ ಪುತ್ರರ ಹೆಸರುಗಳ ಪ್ರಸ್ತಾಪವಾಯಿತು. ಪುತ್ರರಿಗೆ "ಗಾಂಧಿ" ಹಾಗೂ "ಶಾಸ್ತ್ರಿ" ಎನ್ನುವ ಹೆಸರು ಇಡಲಾಗಿದೆ. ಇಬ್ಬರೂ ಒಂದೇ ದಿನ ಹುಟ್ಟಿದ್ದಾರಾ ಎಂದು ನ್ಯಾ. ಎ.ಎಸ್.ಬೋಪಣ್ಣ ಕುತೂಹಲದಿಂದ ಪ್ರಶ್ನಿಸಿದರು. ಇಲ್ಲ ಇಬ್ಬರ ನಡುವೆ 2 ವರ್ಷ ಅಂತರವಿದೆ ಎಂದು ನಾಗರಾಜ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X