Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್‌ನ ನಿಝಾಮರು ದಾರ್ಶನಿಕರು:...

ಹೈದರಾಬಾದ್‌ನ ನಿಝಾಮರು ದಾರ್ಶನಿಕರು: ಪ್ರಣವ್ ಮುಖರ್ಜಿ

ಒಸ್ಮಾನಿಯಾ ವಿವಿಯ ಶತಮಾನೋತ್ಸವ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ26 April 2017 3:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೈದರಾಬಾದ್‌ನ ನಿಝಾಮರು ದಾರ್ಶನಿಕರು: ಪ್ರಣವ್ ಮುಖರ್ಜಿ

 ಹೈದರಾಬಾದ್, ಎ.26: ನೂರು ವರ್ಷದ ಹಿಂದೆ ಒಸ್ಮಾನಿಯಾ ವಿಶ್ವವಿದ್ಯಾನಿಲಯವನ್ನು ಆರಂಭಿಸಿದ ಹೈದರಾಬಾದ್ ರಾಜ್ಯದ ಕೊನೆಯ ನಿಝಾಮರಾಗಿದ್ದ ಮೀರ್ ಒಸ್ಮಾನ್ ಅಲಿಖಾನ್ ಅವರೊಬ್ಬ ದಾರ್ಶನಿಕರು ಎಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ಉನ್ನತ ಶಿಕ್ಷಣಕ್ಕೆ ವಿಶ್ವಮಟ್ಟದ ಸಂಸ್ಥೆಯೊಂದನ್ನು ಸ್ಥಾಪಿಸುವ ಕನಸನ್ನು ಅವರು ಕಂಡಿದ್ದರು ಎಂದು ರಾಷ್ಟ್ರಪತಿ ತಿಳಿಸಿದ್ದಾರೆ.

ಇಂದಿಗೆ ನೂರು ವರ್ಷದ ಹಿಂದೆ , ಹೈದರಾಬಾದ್‌ನ ಕೊನೆಯ ನಿಝಾಮರಾಗಿದ್ದ ದಾರ್ಶನಿಕ ಮೀರ್ ಒಸ್ಮಾನಿಯಾ ಅಲಿಖಾನ್ ಹೈದರಾಬಾದ್‌ನಲ್ಲಿ ವಿಶ್ವಮಟ್ಟದ ಸಂಸ್ಥೆಯೊಂದನ್ನು ಸ್ಥಾಪಿಸುವ ಕನಸು ಕಂಡಿದ್ದರು. ಮನಸ್ಸುಗಳು ಮುಕ್ತವಾಗಿ ಬೆರೆಯಲು ಅವಕಾಶ ನೀಡುವ , ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಆಸ್ಪದ ನೀಡುವ , ಶಾಂತಿಯುತ ಸಹಬಾಳ್ವೆಗೆ ಅನುವು ಮಾಡಿಕೊಡುವ ವೇದಿಕೆಯಾಗಿ ಹೈದರಾಬಾದ್‌ನಲ್ಲಿ ಒಸ್ಮಾನಿಯಾ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ರಾಷ್ಟ್ರಪತಿ ಮುಖರ್ಜಿ ತಿಳಿಸಿದರು.

 ಒಸ್ಮಾನಿಯಾ ವಿವಿಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ನೂರು ವರ್ಷಗಳಲ್ಲಿ ಎರಡು ವಿಶ್ವಯುದ್ದ, ಭಾರತದ ಸ್ವಾತಂತ್ರ, ತೆಲಂಗಾಣ ರಾಜ್ಯದ ರಚನೆಯೂ ಸೇರಿದಂತೆ ವಿವಿ ಹಲವಾರು ಮಹತ್ವಪೂರ್ಣ ಘಟನೆಗಳಿಗೆ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿ ನುಡಿದರು.

     ಮೂಲ ಸಂಶೋಧನೆ ಮತ್ತು ಹೊಸ ಕಲ್ಪನೆಗೆ ತೆರೆದುಕೊಳ್ಳುವ ಪ್ರಕ್ರಿಯೆಯನ್ನು ನಿರ್ಲಕ್ಷಿಸಿದರೆ ನಾವು ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸಲು ಆಗದು. ಇದಕ್ಕೆ ಅಗತ್ಯವಿರುವ ಆರ್ಥಿಕ ನಿಧಿಯನ್ನು ಸರಕಾರ ಅಥವಾ ಉದ್ದಿಮೆಗಳು ನಿರಂತರವಾಗಿ ಒದಗಿಸಬೇಕಿದೆ . ವಿವಿಗಳಲ್ಲಿ ಪೀಠಗಳು ಸ್ಥಾಪನೆಗೊಳ್ಳಬೇಕು. ಉದ್ದಿಮೆಗಳು ನೂತನ ಸಂಶೋಧನಾ ಕಾರ್ಯಗಳಿಗೆ ದತ್ತಿ ನೀಡಬೇಕು. ಶಿಕ್ಷಣ, ಸಂಶೋಧನೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ನಾವು ಶಿಕ್ಷಣ ವ್ಯವಸ್ಥೆಯ ನಕಾಶೆಯಲ್ಲಿ ಸೂಕ್ತ ಸ್ಥಾನ ಪಡೆಯಲಷ್ಟೇ ಅಲ್ಲ, ಅಂತರಾಷ್ಟ್ರೀಯ ಸಮುದಾಯದಲ್ಲಿ ಸೂಕ್ತ ಸ್ಥಾನ ಪಡೆಯಲು ಸಾಧ್ಯ ಎಂದರು. ಎಲ್ಲಾ ಶಿಕ್ಷಣ ಸಂಘದಲ್ಲಿ ಉತ್ಕೃಷ್ಠತೆಯ ಅಗತ್ಯವಿದೆ ಎಂದ ಅವರು, ನಮ್ಮ ವಿವಿಗಳನ್ನು ಮಾದರಿಯಾಗಿ ಬೆಳಸಬೇಕಿದೆ. ಅಂತರಾಷ್ಟ್ರೀಯ ಸಮುದಾಯದಲ್ಲಿ ಸುಮಾರು 1,500ರಿಂದ 1600 ವರ್ಷಗಳಿಂದಲೂ ಭಾರತವು ಉನ್ನತ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು. ತಕ್ಷಿಲಾ, ನಳಂದ ಮತ್ತಿತರ ಶಿಕ್ಷಣ ಸಂಸ್ಥೆಗಳು ಇದೀಗ ಅಧಃಪತನಗೊಂಡಿರಬಹುದು. ಆದರೆ 1000 ವರ್ಷಕ್ಕಿಂತಲೂ ಹೆಚ್ಚಿನ ಕಾಲ ವಿಶ್ವದಾದ್ಯಂತದ ಶಿಕ್ಷಕರು, ವಿದ್ಯಾರ್ಥಿಗಳನ್ನು ಈ ಸಂಸ್ಥೆಗಳು ಆಕರ್ಷಿಸಿವೆ. ವಿವಿಗಳು ಸಮಾಜದಿಂದ ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲ ಎಂದ ಅವರು, ಶಿಕ್ಷಣ ಸಂಸ್ಥೆಗಳು ಸಂಶೋಧನೆ, ಆವಿಷ್ಕಾರ, ಮತ್ತು ಹೊಂದಿಕೆಗೆ ಒತ್ತು ನೀಡಬೇಕು ಎಂಬುದು ದೇಶದ ಪ್ರಪ್ರಥಮ ಶಿಕ್ಷಣ ಸಚಿವ ವೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಆಶಯವಾಗಿತ್ತು ಎಂದು ತಿಳಿಸಿದರು.

ಉಪಕುಲಪತಿ ಎಸ್.ರಾಮಚಂದ್ರಮ್ ಮಾತನಾಡಿ, ವಿವಿಯು ಒಂದು ಕೋಟಿಗಿಂತಲೂ ಹೆಚ್ಚಿನ ಹಳೆಯ ವಿದ್ಯಾರ್ಥಿಗಳನ್ನು ಹೊಂದಿದ್ದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ ಎಂದರು. ತೆಲಂಗಾಣ ಗವರ್ನರ್ ಇ.ಎಸ್.ಎಲ್. ನರಸಿಂಹನ್, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

     1917ರ ಎಪ್ರಿಲ್ 26ರಂದು ಮೀರ್ ಒಸ್ಮಾನಿಯಾ ಅವರು ವಿಶ್ವವಿದ್ಯಾನಿಲಯ ಸ್ಥಾಪಿಸುವ ಬಗ್ಗೆ ರಾಜಾಜ್ಞೆ ಹೊರಡಿಸಿದ್ದರು.ಭಾರತೀಯ ಉಪಖಂಡದಲ್ಲಿ ಉರ್ದು ಶಿಕ್ಷಣ ಮಾಧ್ಯಮವಾಗಿದ್ದ ಏಕೈಕ ವಿವಿಯಾಗಿದೆ. ಆದರೆ ದೇಶ ಸ್ವಾತಂತ್ರ ಪಡೆದ ಬಳಿಕ ಉರ್ದುವಿನ ಬದಲು ಇಂಗ್ಲಿಷ್ ಶಿಕ್ಷಣ ಮಾಧ್ಯಮವಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X