ಬಯಲು ಶೌಚಮುಕ್ತ ಘೋಷಣೆಗೆ ಕಾಪು ಪುರಸಭೆ ಸಜ್ಜು
ಉಡುಪಿ, ಎ.26: ಕಾಪು ಪುರಸಭೆಯನ್ನು ಬಯಲು ಶೌಚಮುಕ್ತ ಪ್ರದೇಶವನ್ನಾಗಿ ಘೋಷಿಸುವ ಸಂಬಂಧ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವನ್ನು ಮಂಡಿಸಲಾಯಿತು.
ಬಯಲು ಶೌಚಮುಕ್ತ ನಗರಗಳನ್ನು ಘೋಷಿಸುವ ಕುರಿತು ಕಾಪು ಪುರಸಭೆಯಿಂದ ಸಲ್ಲಿಕೆಯಾಗಿರುವ ಪ್ರಸ್ತಾಪವನ್ನು ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲು ಹಾಗೂ ಉಳಿದ ಪುರಸಭೆಗಳು ಒಂದು ತಿಂಗಳೊಳಗೆ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗದಿದ್ದಲ್ಲಿ ಮುಖ್ಯಾಧಿಕಾರಿಗಳನ್ನು ಹೊಣೆ ಮಾಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಸಮುದಾಯ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆಗೆ ಆದ್ಯತೆ ನೀಡಿ, ಉತ್ತಮ ನಿರ್ವಹಣೆಯಿಂದ ಜನರಿಗೆ ಸಮುದಾಯ ಶೌಚಾಲಯಗಳ ಬಗ್ಗೆ ಉತ್ತಮ ಅಭಿಪ್ರಾಯ ರೂಪುಗೊಳ್ಳುತ್ತದೆ. ಇಲ್ಲದಿದ್ದಲ್ಲಿ ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದರು.
Next Story





