ಸರಕಾರಿ ಕಚೇರಿಗಳಲ್ಲಿ ಬಸವಣ್ಣ ಭಾವಚಿತ್ರ: ಸುತ್ತೋಲೆ ಹೊರಡಿಸುವಂತೆ ಸಿಎಂ ಆದೇಶ

ಬೆಂಗಳೂರು, ಎ.26: ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವ ಸಂಬಂಧ ಇಂದೇ ಸುತ್ತೋಲೆ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿ ಡಾ.ಸುಭಾಷ್‌ಚಂದ್ರ ಕುಂಟಿಯಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಹೇಮರೆಡ್ಡಿ ಮಲ್ಲಮ್ಮ ಜಯಂತಿ: ರಾಜ್ಯ ಸರಕಾರದ ವತಿಯಿಂದ ರೆಡ್ಡಿ ಸಮುದಾಯದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10ರಂದು ಆಚರಿಸಲು ನಿರ್ಧರಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗೆ 69 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದರು.
Next Story





