ನಾಳೆ ಪರಿಸರ ಪ್ರಯೋಗ ಶಾಲೆಗೆ ಶಿಲಾನ್ಯಾಸ
ಮಂಗಳೂರು, ಎ.26: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ವಿಭಾಗ ವತಿಯಿಂದ ನೂತನ ಪ್ರಾದೇಶಿಕ ಪರಿಸರ ಪ್ರಯೋಗ ಶಾಲೆ ಹಾಗೂ ಹಿರಿಯ ಪರಿಸರ ಅಧಿಕಾರಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಎ.28ರಂದು ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸವನ್ನು ನೆರವೇರಿಸುವರು. ಶಾಸಕ ಬಿ.ಎ.ಮೊಯ್ದಿನ್ ಬಾವಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್ ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





