Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ದಲ್ಲಿ ಆಕಾಂಕ್ಷಿಗಳ ಸಂಖ್ಯೆ ಗಣನೀಯ...

ದ.ಕ.ದಲ್ಲಿ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ

ಸೇನೆಗೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ27 April 2017 12:05 AM IST
share

 ಮಂಗಳೂರು, ಎ.26: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಯುವ ಸೇನಾ ನೇಮ ಕಾತಿ ರ್ಯಾಲಿಗೆ ದ.ಕ. ಜಿಲ್ಲೆಯಿಂದ ಅರ್ಜಿ ಸಲ್ಲಿಸಿ ದವರ ಸಂಖ್ಯೆ ಕಳೆದ ವರ್ಷಕ್ಕಿಂತ 10 ಪಟ್ಟು ಹೆಚ್ಚಳವಾಗಿದೆ.

 ಈ ವರ್ಷದ ರ್ಯಾಲಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಎ.25 ಅಂತಿಮ ದಿನವಾಗಿತ್ತು. ಜಿಲ್ಲೆಯಲ್ಲಿ ಈ ವರ್ಷ 368 ಯುವಕರು ಅರ್ಜಿ ಸಲ್ಲಿಸಿದ್ದಾರೆ. 2016ರಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಗೆ ದ.ಕ. ಜಿಲ್ಲೆಯಿಂದ ಕೇವಲ 34 ಮಂದಿ ಅರ್ಜಿ ಸಲ್ಲಿಸಿದ್ದರು. 2015ರಲ್ಲಿ 118 ಮಂದಿ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಸ್ಥಳೀಯ ಸೇನಾ ಅಧಿಕಾರಿಗಳಲ್ಲಿ ಸಂತಸ ಮೂಡಿಸಿದೆ.

 ಭಾರತೀಯ ಸೇನೆಯು ಸೇನೆಯಲ್ಲಿನ ವಿವಿಧ ಹುದ್ದೆ ಗಳ ನೇಮಕಾತಿಗೆ ಪ್ರತೀ ವರ್ಷ ರಾಜ್ಯದ ವಿವಿಧೆಡೆ ನೇಮಕಾತಿ ರ್ಯಾಲಿ ನಡೆಸುತ್ತಿದೆ. ಈ ವರ್ಷ ಮೇ 12 ರಿಂದ ಬಿಜಾಪುರದಲ್ಲಿ ರ್ಯಾಲಿ ನಡೆಯಲಿದೆ. ಸೇನಾ ನೇಮಕಾತಿಯ ಎಲ್ಲಾ ಪ್ರಕ್ರಿಯೆಗಳು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ. ಬಿಜಾಪುರದಲ್ಲಿ ನಡೆಯುವ ರ್ಯಾಲಿಗೆ ಸುಮಾರು 18,600 ಆಕಾಂಕ್ಷಿಗಳು ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

  ಸೇನೆಗೆ ಆಯ್ಕೆಯಾಗಲು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ಪ್ರಸಕ್ತ ವರ್ಷ ಈ ನಿಟ್ಟಿನಲ್ಲಿ ನಗರದ ಕೂಳೂರಿನಲ್ಲಿರುವ ಸೇನಾ ನೇಮಕಾತಿ ಕೇಂದ್ರವು ದ.ಕ. ಜಿಲ್ಲಾಡಳಿತದ ಸಹಯೋಗದಲ್ಲಿ ಸೇನಾ ನೇಮಕಾತಿ ರ್ಯಾಲಿ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡಿತ್ತು. ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ, ಮಾಧ್ಯಮಗಳ ಮೂಲಕ ನೇಮಕಾತಿಯ ಪ್ರಚಾರ ನಡೆಸಿತ್ತು. ಈ ವರ್ಷದ ಮಾ.12ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಸಾಮಾನ್ಯ ಸೈನಿಕ, ಸೈನಿಕ ಟ್ರೇಡ್ಸ್‌ಮೆನ್(ಎಸೆಸೆಲ್ಸಿ ಉತ್ತೀರ್ಣ), ತಾಂತ್ರಿಕ ಸೈನಿಕ(ದ್ವಿತೀಯ ಪಿಯುಸಿ- ಪಿಸಿಎಂ), ನರ್ಸಿಂಗ್ ಸಹಾಯಕ (ದ್ವಿತೀಯ ಪಿಯುಸಿ-ಪಿಸಿಬಿ) ಹಾಗೂ ಸೈನಿಕ ಗುಮಾಸ್ತ (ದ್ವಿತೀಯ ಪಿಯುಸಿ ಇಂಗ್ಲಿಷ್, ಅಕೌಂಟ್ಸ್/ಗಣಿತ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

  ಆನ್‌ಲೈನ್‌ನಲ್ಲಿ ನೋಂದಾಯಿಸಿರುವ ಎಲ್ಲಾ ಅಭ್ಯರ್ಥಿಗಳು ಮೇ 2ರಿಂದ ವೆಬ್‌ಸೈಟ್‌ನಿಂದ ತಮ್ಮ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನ ಮತ್ತು ಸಮಯದಂದೇ ಬಿಜಾಪುರದ ಸೈನಿಕ ಶಾಲೆಯಲ್ಲಿ ವರದಿ ಮಾಡಿಕೊಳ್ಳಬೇಕು. ಹಾಜರಾಗಲು ವಿಳಂ ಬವಾದರೆ ನೇಮಕಾತಿಗೆ ಅನರ್ಹಗೊಳ್ಳಲಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಮೊದಲ ಹಂತ ದಲ್ಲಿ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಬೇಕು. ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸ ಲಾಗುವುದು. ಈ ಎರಡು ಹಂತದಲ್ಲಿ ಉತ್ತೀರ್ಣ ರಾದವರು ಲಿಖಿತ ಪರೀಕ್ಷೆ ಬರೆದು, ಇದರಲ್ಲಿ ಪಾಸ್ ಆದವರು ಸೇನೆಗೆ ಆಯ್ಕೆಯಾಗಿ ತರಬೇತಿಗೆ ಒಳಗಾಗಲಿದ್ದಾರೆ.

ಈ ಬಗ್ಗೆ ಯಾವುದೇ ಬಾಹ್ಯ ವ್ಯಕ್ತಿಗಳ, ಏಜೆಂಟರ ಮಾತಿಗೆ ಮರುಳಾಗಿ ದಾಖಲೆಗಳನ್ನು ನೀಡದಂತೆ ಮಂಗಳೂರು ಸೇನಾ ನೇಮಕಾತಿ ಕೇಂದ್ರದ ನಿರ್ದೇಶಕ ಕರ್ನಲ್ ಪ್ರಶಾಂತ್ ಪೇಟ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದವರ ಜಿಲ್ಲಾವಾರು ವಿವರ

ದ.ಕ. -368, ಉಡುಪಿ-136, ಉ.ಕ.- 1,250, ಶಿವಮೊಗ್ಗ -328, ಹಾವೇರಿ-921, ಗದಗ-1,770, ದಾವಣಗೆರೆ -1,641, ಧಾರವಾಡ-1,726, ಚಿಕ್ಕಮಗಳೂರು-201, ಬಿಜಾಪುರ- 4,175, ಬಾಗಲಕೋಟೆ-5,938.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X