ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: ಮೂವರು ಸೈನಿಕರು ಹುತಾತ್ಮ

ಶ್ರೀನಗರ, ಎ.27: ಸೈನಿಕ ಕ್ಯಾಂಪ್ ಒಂದರ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದು, ಇಬ್ಬರು ಸೈನಿಕರು ಹಾಗೂ ಸೇನಾ ಕ್ಯಾಪ್ಟನ್ ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟ ಸೇನಾಧಿಕಾರಿಯನ್ನು ಕ್ಯಾ.ಆಯುಷ್ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಶರಣಾಗಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.
Next Story





