Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಲಿ ಗಣತಿ ಬಳಿಕ ಆನೆ ಗಣತಿಗೆ ಸಿದ್ಧವಾದ...

ಹುಲಿ ಗಣತಿ ಬಳಿಕ ಆನೆ ಗಣತಿಗೆ ಸಿದ್ಧವಾದ ಅರಣ್ಯ ಇಲಾಖೆ

ಅಝೀಝ್ ಕಿರುಗುಂದ

ವಾರ್ತಾಭಾರತಿವಾರ್ತಾಭಾರತಿ27 April 2017 9:49 AM IST
share
ಹುಲಿ ಗಣತಿ ಬಳಿಕ ಆನೆ ಗಣತಿಗೆ ಸಿದ್ಧವಾದ ಅರಣ್ಯ ಇಲಾಖೆ

ಚಿಕ್ಕಮಗಳೂರು, ಎ.26: ಹುಲಿ ಗಣತಿ ಕಾರ್ಯವನ್ನು ಮುಗಿಸಿರುವ ಅರಣ್ಯ ಇಲಾಖೆ ತನ್ನ ಮುಂದಿನ ಯೋಜನೆಯಲ್ಲಿ ಆನೆಗಳ ಗಣತಿ ಕೈಗೆತ್ತಿಕೊಳ್ಳಲು ಈಗಾಗಲೇ ಅಂತಿಮ ಹಂತದ ಪೂರ್ವ ಸಿದ್ಧತೆ ನಡೆಸಿದ್ದು, ಈಗಾಗಲೇ ಆನೆ ಗಣತಿಗೆ ವಿದ್ಯುಕ್ತವಾಗಿ ಚಾಲನೆ ದೊರಕಿದೆ.

ಮೇ 1ರಿಂದ 5 ದಿನಗಳ ಕಾಲ ಆನೆ ಗಣತಿ ನಡೆಯಲಿದ್ದು, ದೇಶದಲ್ಲಿ ಆನೆಗಳ ಸಂತತಿಯನ್ನು ನಿಖರವಾಗಿ ದಾಖಲಿಸಲು ನಡೆಸಲಾಗುತ್ತಿರುವ ಈ ಗಣತಿಯಲ್ಲಿ ಇಲಾಖೆ ಸಿಬ್ಬಂದಿ ಜತೆಗೆ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳಲು ನಿರ್ಧರಿಸಿದೆ. ಅರಣ್ಯದಲ್ಲಿರುವ ಪ್ರಾಣಿಗಳಲ್ಲಿ ಅತೀ ಹೆಚ್ಚು ಅಪಾಯಕಾರಿಯಾಗಿರುವ ಆನೆಗಳ ಗಣತಿ ಕ್ಲಿಷ್ಟದಾಯಕವಾಗಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ತರಬೇತಿ ಇಲಾಖೆಯಿಂದ ದೊರೆಯಲಿದೆ.

2013 ರ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಆನೆಗಳ ಗಣತಿ ಇಡೀ ದೇಶದಲ್ಲಿ ಏಕಕಾಲಕ್ಕೆ ನಡೆಯುತ್ತಿದೆ. ಕರ್ನಾಟಕವೂ ಸೇರಿದಂತೆ ಆನೆಗಳು ಹೆಚ್ಚಾಗಿರುವ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪ್ರಕ್ರಿಯೆ 3 ದಿನಗಳವರೆಗೆ ನಡೆಯಲಿದೆ. ಮಡಿಕೇರಿ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಆನೆಗಳ ಗಣತಿ ಭರದಿಂದ ನಡೆಯಲಿದೆ.

22ರಿಂದ ಸುಮಾರು 35 ವರ್ಷದ ಯುವಕರಿಗೆ ಹೆಚ್ಚು ಅವಕಾಶ ನೀಡಲಾಗುತ್ತಿದೆ. ಪ್ರತಿ ಬಾರಿಯ ಆನೆ ಗಣತಿಯಲ್ಲಿ ಭಾಗವಹಿಸುವ ಸಾರ್ವಜನಿಕರು ಐದು ದಿನಗಳ ಆನೆಗಣತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಗಣತಿಗೆ ಬರುವವವರು ಆರೋಗ್ಯದಲ್ಲಿ ಸಧೃಡರಾಗಿರಬೇಕು. ಅಂತಹವರಿಗೆ ಹೆಚ್ಚು ಅವಕಾಶ ನೀಡುವುದಾಗಿ ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ. ಎ.16 ರಿಂದ 19ರವರೆಗೆ ಆನೆ ಗಣತಿಯಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯದ ಸುಮಾರು 500 ಚದರ ಕಿ.ಮೀ. ವ್ಯಾಪ್ತಿಯನ್ನು ಗಣತಿಗೆ ಆಯ್ದುಕೊಳ್ಳಲಿದ್ದು, 2013ರ ಗಣತಿಯಲ್ಲಿ ಕಂಡುಬಂದಿದ್ದ 200 ಆನೆಗಳಿಗಿಂತಲೂ ಹೆಚ್ಚು ಸಲಗಗಳು ಈ ಬಾರಿಯ ಗಣತಿಯಲ್ಲಿ ಪತ್ತೆಯಾಗಬಹುದೆಂಬ ನಿರೀಕ್ಷೆ ಹೊಂದಲಾಗಿದೆ. ನೇರ ಹಾಗೂ ಪರೋಕ್ಷ ವಿಧಾನಗಳಲ್ಲಿ ನಡೆಯುವ ಗಣತಿಯು ಭದ್ರಾ ಅಭಯಾರಣ್ಯದಲ್ಲಿ 20 ಬೀಟ್‌ಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗೆ ಕ್ರೋಢೀಕರಿಸಲಾದ ಮಾಹಿತಿಯನ್ನು ಅಂತಿಮವಾಗಿ ಪ್ರಾಜೆಕ್ಟ್ ಎಲಿಫೆಂಟ್ ಕಂಟ್ರೋಲರ್ಗೆ ಒಪ್ಪಿಸಲಾಗುವುದು. ಹುಲಿ ಗಣತಿಯಲ್ಲಿ ತೊಡಗಿಕೊಂಡಿದ್ದ ಅನುಭವವನ್ನೇ ಬಹುಪಾಲು ಈ ಗಣತಿಯಲ್ಲೂ ಬಳಸಿಕೊಳ್ಳುವ ಚಿಂತನೆ ಇಲಾಖೆಯದು.

ಕೇಂದ್ರ ಸರ್ಕಾರದ ನಿರ್ದೇಶನದನ್ವಯ ನಡೆಯಲಿರುವ ಆನೆಗಣತಿ ಹುಲಿಗಣತಿಗಿಂತ ಸಂಪೂರ್ಣ ವಿಭಿನ್ನ ನೆಲೆಯಲ್ಲಿ ಪೂರ್ಣಗೊಳ್ಳಲಿದೆ. ಗಣತಿಯಲ್ಲಿ ಅತ್ಯುಪಯುಕ್ತ ಹಾಗೂ ಸಲಗ ಸಂಖ್ಯಾಬಲ ಹೆಚ್ಚಿಸುವಂತಹ ಆಶಾದಾಯಕ ಅಂಶಗಳು ಪತ್ತೆಯಾಗಬಹುದೆಂಬ ನಿರೀಕ್ಷೆ ಇಲಾಖೆಯದ್ದು. ಆನೆಗಳ ಸಂತತಿಯನ್ನು ನಿಖರಗೊಳಿಸಲು ಸಹಕಾರಿಯಾಗಿರುವಂಥ ಸೆನ್ಸಸ್ ಕಾರ್ಯಕ್ರಮಕ್ಕೆ ಉತ್ಸಾಹಿ ಸ್ವಯಂ ಸೇವಕರ ದಂಡೂ ಸಿದ್ಧಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X