Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಪಂನಲ್ಲಿ ಇ-ಆಫೀಸ್ ವ್ಯವಸ್ಥೆ...

ಉಡುಪಿ ಜಿಪಂನಲ್ಲಿ ಇ-ಆಫೀಸ್ ವ್ಯವಸ್ಥೆ ಜಾರಿ: ದಿನಕರ ಬಾಬು

ವಾರ್ತಾಭಾರತಿವಾರ್ತಾಭಾರತಿ27 April 2017 10:26 PM IST
share

ಮಣಿಪಾಲ, ಎ.27: ಉಡುಪಿ ಜಿಪಂನಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ಕಡತ ವಿಲೇವಾರಿಗೆ ಹಾಗೂ ಕೆಲಸ ಮೇಲ್ವಿಚಾರಣೆಗೆ ಅನುಕೂಲವಾಗಿದೆ. ಮುಂದೆ ಎಲ್ಲಾ ತಾಲೂಕು ಪಂಚಾಯತ್‌ಗಳಲ್ಲೂ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಉಡುಪಿ ಜಿಪಂನ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.

ಉಡುಪಿ ಜಿಪಂನ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿ ಒಂದು ವರ್ಷ ಪೂರ್ಣ ಗೊಳಿಸಿದ ಸಂಬಂಧ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ತನ್ನ ಒಂದು ವರ್ಷದ ಸಾಧನೆಯ ವಿವರಗಳನ್ನು ಪತ್ರಕರ್ತರ ಬಳಿ ಹಂಚಿಕೊಂಡರು.

ಜಿಪಂ ಕಚೇರಿಯಲ್ಲಿ ಪ್ರತ್ಯೇಕ ಸಾರ್ವಜನಿಕ ದೂರು ನಿವಾರಣಾ ವಿಭಾಗವನ್ನು ಪ್ರಾರಂಭಿಸಲಾಗಿದೆ. ನೀರು, ನೈರ್ಮಲ್ಯ ವಿಷಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಟೋಲ್‌ಫ್ರಿ ನಂಬರ್ ಒದಗಿಸಲಾಗಿದೆ. ಉಡುಪಿ ಜಿಲ್ಲೆಯ ಗ್ರಾಮೀಣ ಭಾಗವು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಣೆಯಾಗಿದೆ. ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿಗಳಿಂದ ಕಳೆದ ಅಕ್ಟೋಬರ್‌ನಲ್ಲಿ ಪುರಸ್ಕಾರವನ್ನೂ ಸ್ವೀಕರಿಸಲಾಗಿದೆ. ಜಿಪಂ ವತಿಯಿಂದ ಎಲ್ಲಾ ಗ್ರಾಪಂಗಳಿಗೂ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿ ಪ್ರಶಸ್ತಿ ಪತ್ರ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ವೈಜ್ಞಾನಿಕ ಕಸ ವಿಲೇವಾರಿಗೆ ಕ್ರಮ ವಹಿಸಲಾಗುತ್ತಿದೆ. 28 ಗ್ರಾಪಂಗಳ ಪ್ರಸ್ತಾಪಕ್ಕೆ ಸರಕಾರದಿಂದ ಅನುಮತಿ ದೊರಕಿದ್ದು, ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮ ವಹಿಸಲಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಬದಲಾಗಿ ಬಟ್ಟೆಯ ಬ್ಯಾಗ್ ಬಳಕೆಗೆ ಉತ್ತೇಜನ ನೀಡುವುದಕ್ಕೆ 286 ಸ್ವಸಹಾಯ ಗುಂಪುಗಳ ಸದಸ್ಯರಿಗೆ ಜಿಪಂ ವತಿಯಿಂದ ತರಬೇತಿ ನೀಡಲಾಗಿದೆ ಎಂದು ದಿನಕರ ಬಾಬು ತಿಳಿಸಿದರು.

ಜಿಲ್ಲೆಯಲ್ಲಿ ಕಸ ವಿಲೇವಾರಿಗಾಗಿ ಪೈಪ್ ಕಂಪೋಸ್ಟ್‌ಗೆ ಹೆಚ್ಚು ಒತ್ತು ನೀಡಲಾಗಿದ್ದು, 684 ಅಂಗನವಾಡಿ, 588 ಶಾಲೆಗಳಲ್ಲಿ ಇದನ್ನು ಅಳವಡಿಸಲಾಗಿದೆ. ಅದೇ ರೀತಿ 2710 ಕುಟುಂಬಗಳೂ ಈಗಾಗಲೇ ಇದನ್ನು ಅಳವಡಿಸಿಕೊಂಡಿದೆ ಎಂದವರು ನುಡಿದರು.

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆ 2016-17ನೇ ಸಾಲಿನಲ್ಲಿ ವಿಶೇಷ ಸಾಧನೆ ಮಾಡಿದ್ದು, ಒಟ್ಟು 15.50 ಕೋಟಿ ರೂ.ಅನುದಾನ ವನ್ನು ಬಳಕೆ ಮಾಡಿ 5.08 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ. ಈ ಕಾರ್ಯಕ್ರಮದಡಿ ವ2ಯಕ್ತಿಕ ಕಾರ್ಯಕ್ರಮಗಳಿಗೆ ಒತ್ತು ನೀಡಿದ್ದು, ತೋಟಗಾರಿಕಾ ಬೆಳೆಗಳ ವಿಸ್ತರಣೆಗೆ ಸುಮಾರು ಒಂದು ಕೋಟಿ ರೂ. ಅನುದಾನ, ನೀರಾವರಿ, ಬಾವಿ, ದನದ ಕೊಟ್ಟಿಗೆ ರಚನೆ, ವಸತಿ ಯೋಜನೆಯ ಫಲಾನುಭವಿಗಳಿಗೆ ಪೂರಕ ಅನುದಾನ ಇತ್ಯಾದಿ ಅನುಷ್ಠಾನಗೊಳಿಸಲಾಗಿದೆ. ಅಲ್ಲದೇ ಸುಮಾರು 648 ಅಂಗನವಾಡಿಗಳಲ್ಲಿ ಪೌಷ್ಠಿಕ ತೋಟ ರಚನೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಒತ್ತು ನೀಡಲಾಗಿದೆ. ನೈಸರ್ಗಿಕ ನೀರು ಬಳಕೆಗೆ ವಿಶೇಷ ಒತ್ತು ನೀಡಿದ್ದು, ನೀರಿನ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ ಎಂದು ದಿನಕರ ಬಾಬು ತಿಳಿಸಿದರು.
ಕಳೆದೊಂದು ವರ್ಷದಲ್ಲಿ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದು, ಎಲ್ಲರ ಸಹಕಾರದಿಂದ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಸಾಧ್ಯವಾಗಿದೆ. ಅನುದಾನವನ್ನು ಶೇ.100ಕ್ಕೆ ನೂರನ್ನು ಬಳಸಿಕೊಳ್ಳಲಾಗಿದೆ ಎಂದವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಉಪಾದ್ಯಕ್ಷೆ ಶೀಲಾ ಕೆ.ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರಾದ ಬಾಬು ಶೆಟ್ಟಿ ಹಾಗೂ ಶಶಿಕಾಂತ್ ಪಡುಬಿದ್ರಿ ಉಪಸ್ಥಿತರಿದ್ದರು. ಜಿಪಂನ ಸರ್ವ ಸದಸ್ಯರೂ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X