ಟೆಂಪೊ ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾರ್ಕಳ, ಎ.27: ಪಳ್ಳಿ ಗ್ರಾಮದ ಹಂಪನಕಟ್ಟೆ ಸಮೀಪ ಎ.26ರಂದು ಬೆಳಗ್ಗೆ ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೈಕ್ ಸವಾರ ಮಂಜು ಪ್ರಸಾದ್ ಶೆಟ್ಟಿ ಎಂದು ಗುರುತಿಸ ಲಾಗಿದೆ. ಇವರು ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಬೈಕಿನಲ್ಲಿ ಹೋಗುತ್ತಿ ದ್ದಾಗ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಟೆಂಪೋ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





