ಮಾಲೇಗಾಂವ ಪ್ರಕರಣ:ಜಾಮೀನು ನಿರಾಕರಣೆ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಪುರೋಹಿತ್

ಹೊಸದಿಲ್ಲಿ,ಎ.28: ಮಾಲೇಗಾಂವ ಸ್ಫೋಟ ಪ್ರಕರಣದಲ್ಲಿ ತನಗೆ ಜಾಮೀನು ನಿರಾಕರಿಸಿರುವ ಬಾಂಬೆ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆರೋಪಿ ಶ್ರೀಕಾಂತ ಪುರೋಹಿತ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದಾನೆ.
ತುರ್ತು ವಿಚಾರಣೆ ನಡೆಸುವಂತೆ ಪುರೋಹಿತ್ ಮನವಿಯನ್ನು ಶುಕ್ರವಾರ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವು, ಜಾಮೀನು ಅರ್ಜಿಯ ಸರದಿ ಬಂದಾಗ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿತು.
ಎ.25ರಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್‌ಗೆ ಜಾಮೀನು ಮಂಜೂರು ಮಾಡಿದ್ದ ಬಾಂಬೆ ಉಚ್ಚ ನ್ಯಾಯಾಲಯವು ಪುರೋಹಿತ್ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಜಾಮೀನು ನಿರಾಕರಿಸಿತ್ತು.
2008,ಸೆ.29ರಂದು ಮಾಲೇಗಾಂವ್‌ನಲ್ಲಿ ಬೈಕೊಂದರಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಮೃತಪಟ್ಟು, ಸುಮಾರು ನೂರು ಜನರು ಗಾಯಗೊಂಡಿ ದ್ದರು.
Next Story