ಅಕ್ರಮವಾಗಿ ಬೆಳೆದಿದ್ದ 15ಸಾವಿರ ರೂ. ಮೌಲ್ಯದ ಗಾಂಜಾ.

ಸಾಗರ, ಎ.28: ತಾಲ್ಲೂಕಿನ ವಳಗೆರೆ ಸಮೀಪದ ಕುಂಟೋಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು 15 ಸಾವಿರ ರೂ. ಮೌಲ್ಯದ ಗಾಂಜಾವನ್ನು ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿ ಅಭಿನವ ಖರೆ ಆದೇಶದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಮುತ್ತುರಾಜ್, ಡಿ.ವೈ.ಎಸ್.ಪಿ. ಪಂಪಾಪತಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂಟೋಡಿ ಗ್ರಾಮದ ಸರ್ವೇ ನಂ. 476ರಲ್ಲಿ ಭತ್ತದ ಬೆಳೆ ನಡುವೆ ಬೆಳೆದಿದ್ದ 25 ಹಸಿ ಗಾಂಜಾ ಗಿಡವನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನಿನ ಮಾಲಕ ಆರೋಪಿ ಚನ್ನಪ್ಪ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





