ಜಗನ್ ಜಾಮೀನು ರದ್ದಿಗೆ ನ್ಯಾಯಾಲಯದ ನಕಾರ

ಹೈದರಾಬಾದ್,ಎ.28: ಲಂಚದ ಹಣವನ್ನು ತನ್ನ ಕಂಪನಿಗಳಲ್ಲಿ ಹೂಡಿಕೆಯ ರೂಪದಲ್ಲಿ ಪಡೆದುಕೊಂಡಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಅವರ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿತು.
ಪ್ರಕರಣದಲ್ಲಿ ಮಹತ್ವದ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ರಮಾಕಾಂತ ರೆಡ್ಡಿಯವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವ ಮೂಲಕ ಜಗನ್ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿರುವುದರಿಂದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಕಳೆದ ತಿಂಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
Next Story





