ಈಶ್ವರಪ್ಪರಿಂದ ಪಕ್ಷದ ಕಾರ್ಯಕರ್ತರಿಗೆ ಮುಜುಗರ: ಕಿರಣ್‌ಕುಮಾರ್
ಉಡುಪಿ, ಎ.28: ಪಕ್ಷದ ಹಿರಿಯ, ಗೌರವಾನಿತ್ವತ ನಾಯಕರಾದ ಈಶ್ವರಪ್ಪ ಅವರ ಇತ್ತೀಚಿನ ವರ್ತನೆಯಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಕಿರಣ್‌ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರಿಗೆ ಪಕ್ಷದ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಬೇಕೆಂದು ಬುದ್ಧಿಮಾತು ಹೇಳುವ ನಾಯಕರು, ಇದೀಗ ಪಕ್ಷದ ನಾಯಕತ್ವ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈಶ್ವರಪ್ಪ ಬಿಜೆಪಿ ಕಾರ್ಯಕರ್ತರನ್ನು ಇತರ ಪಕ್ಷಗಳ ಕಾರ್ಯಕರ್ತರ ಎದುರು ಮುಜುಗರಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಈಶ್ವರಪ್ಪಅವರ ಇಂತಹ ವರ್ತನೆಯನ್ನು ಪಕ್ಷದ ಯಾವುದೇ ಕಾರ್ಯಕರ್ತರು ಕ್ಷಮಿಸುವುದಿಲ್ಲ ಎಂದವರು ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷರ ಸೂಚನೆ ಮೀರಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಉಡುಪಿ ಜಿಲ್ಲೆಯ ಹಿಂದುಳಿದ ವರ್ಗಗಳ ಮೋರ್ಚಾದ ನಾಯಕರ ಮೇಲೆಯೂ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಕಿರಣ್‌ಕುಮಾರ್ ಆಗ್ರಹಿಸಿದ್ದಾರೆ.
Next Story





