Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿರಿಧಾನ್ಯಗಳು ಭವಿಷ್ಯದ ಭರವಸೆಯ...

ಸಿರಿಧಾನ್ಯಗಳು ಭವಿಷ್ಯದ ಭರವಸೆಯ ಬೆಳೆಗಳು: ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ28 April 2017 11:22 PM IST
share
ಸಿರಿಧಾನ್ಯಗಳು ಭವಿಷ್ಯದ ಭರವಸೆಯ ಬೆಳೆಗಳು: ಕೃಷ್ಣ ಭೈರೇಗೌಡ

ಬೆಂಗಳೂರು, ಎ.28: ನಾವು ಯಾವ ಧಾನ್ಯಗಳನ್ನು ತೃಣ ಮೂಲ ಧಾನ್ಯಗಳೆಂದು ಜರಿಯುತ್ತಿದ್ದೆವೋ, ಯಾವ ಧಾನ್ಯಗಳು ಬಡವರ ಆಹಾರ ಎಂದು ದೂರವಿಡುತ್ತಿದ್ದೆವೋ ಅವೇ ಈಗ ಭಾರತದ ‘ಭವಿಷ್ಯದ ಭರವಸೆಯ ಆಹಾರ ಪದ್ಧತಿ’ಯಾಗಲಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ರಾಜ್ಯ ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಾವಯವ -ಸಿರಿಧಾನ್ಯ ರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲೇ ಪ್ರಥಮ ಭಾರಿಗೆ ಕರ್ನಾಟಕದಲ್ಲಿ ಇಂತಹ ಮೇಳವನ್ನು ಆಯೋಜಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾವಯವ ಪದಾರ್ಥಗಳಿಗೆ ಭಾರೀ ಬೇಡಿಕೆ ಬಂದಿದೆ. ರಾಜ್ಯದಲ್ಲಿ 2004 ರಲ್ಲಿ ಸಾವಯವ ನೀತಿಯನ್ನು ಜಾರಿಗೆ ತರಲಾಗಿದೆ. ಆಗ ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿತ್ತು. ಈಗ 1.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಾವಯವ ಮತ್ತು ಸಿರಿಧಾನ್ಯ ಗಳನ್ನು ಬೆಳೆಯಲಾಗುತ್ತಿದೆ ಎಂದರು.

ಸಾವಯವ ಭಾಗ್ಯ ಮತ್ತು ಕೇಂದ್ರದ ಪರಂಪರಾಗತ ಕೃಷಿ ವಿಕಾಶ ಯೋಜನೆಯಡಿ ಹೆಚ್ಚುವರಿಯಾಗಿ 90 ಸಾವಿರ ಹೆಕ್ಟೇರ್ ಪ್ರದೇಶವನ್ನು ಸಾಮಾನ್ಯಕೃಷಿಯಿಂದ ಸಾವಯವ ಕೃಷಿಗೆ ಪರಿವರ್ತಿಸಲಾಗಿದೆ. ರೈತರು ಬೆಳೆದ ಸಾವಯವ ಪದಾರ್ಥಗಳಿಗೆ ಮಾರುಕಟ್ಟೆ ಕಲ್ಪಿಸಲು ರಾಜ್ಯ ಸರಕಾರ ಸಾವಯವ ಬೆಳೆಯುವ ರೈತರನ್ನು ಒಂದುಗೂಡಿಸಿ 14 ಸಾವಿರ ಸಾವಯವ ಒಕ್ಕೂಟಗಳನ್ನು ರಚನೆ ಮಾಡಿದೆ. ತಲಾ ಒಂದು ಒಕ್ಕೂಟದಲ್ಲಿ ಎರಡು ಸಾವಿರ ರೈತರು ಇದ್ದಾರೆ. ಇವರು ತಾವು ಬೆಳೆದ ಪದಾರ್ಥಗಳನ್ನು ಒಂದೆಡೆ ಕಲೆಹಾಕಿ ಖಾಸಗಿ ಸಂಸ್ಥೆಗಳಿಗೆ ನಿಯಮಿತವಾಗಿ ಸರಬರಾಜು ಮಾಡುತ್ತಿದ್ದಾರೆ. ಇದರಿಂದ ಅವರ ಬೆಳೆಗೂ ಉತ್ತಮ ದರ ಸಿಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್. ಕೆ. ಪಾಟೀಲ್, ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಕೃಷಿ ಸಚಿವ ಸೋಂಪಾಲ್ ಶಾಸ್ತ್ರಿ, ಸಚಿವ ಎಂ.ಆರ್. ಸೀತಾರಾಂ, ಶಾಸಕ ಅಶ್ವತ್ಥ್ ನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ, ರಿಜ್ವಾನ್ ಹರ್ಷದ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X