ಸಾಮಾನ್ಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ, ಎ.28: ಜಿಲ್ಲೆಯ 3 ತಾಲೂಕುಗಳ 11 ಪರೀಕ್ಷಾ ಕೇಂದ್ರಗಳಲ್ಲಿ ಮೇ 2 ಮತ್ತು 3ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಸೆಕ್ಷನ್144(1)ರಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ನಿಷೇಧಾಜ್ಞೆ ವಿಧಿಸಿದ್ದಾರೆ. ಉಡುಪಿ ತಾಲೂಕಿನ 6, ಕುಂದಾಪುರ ತಾಲೂಕಿನ 3 ಮತ್ತು ಕಾರ್ಕಳ ತಾಲೂಕಿನ 2 ಕೇಂದ್ರಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ.
Next Story





