Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ತಿಕ್‌ರಾಜ್ ಕೊಲೆ ಆರೋಪಿಗಳ ಬಂಧನ:...

ಕಾರ್ತಿಕ್‌ರಾಜ್ ಕೊಲೆ ಆರೋಪಿಗಳ ಬಂಧನ: ಡಿವೈಎಫ್‌ಐ ಸಂತಸ

ವಾರ್ತಾಭಾರತಿವಾರ್ತಾಭಾರತಿ29 April 2017 6:50 PM IST
share
ಕಾರ್ತಿಕ್‌ರಾಜ್ ಕೊಲೆ ಆರೋಪಿಗಳ ಬಂಧನ: ಡಿವೈಎಫ್‌ಐ ಸಂತಸ

ಮಂಗಳೂರು, ಎ.29: ಏಳು ತಿಂಗಳ ಹಿಂದೆ ನಿಗೂಢವಾಗಿ ಕೊಲೆಯಾದ ಕಾರ್ತಿಕ್ ರಾಜ್ ಪ್ರಕರಣ ದಿನಕ್ಕೊಂದು ತಿರುವು ಪಡೆದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಸಂಘ ಪರಿವಾರ ಕೊಲೆ ಪ್ರಕರಣಕ್ಕೆ ಮತೀಯ ಬಣ್ಣ ಬಳಿದು ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿತ್ತು. ಇಂತಹ ಜಟಿಲ ಪ್ರಕರಣವನ್ನು ಭೇದಿಸುವ ಮೂಲಕ ಆತಂಕಗಳಿಗೆ ಮಂಗಳೂರು ಕಮಿಷನರೆಟ್ ಪೊಲೀಸರು ತೆರೆ ಎಳೆದಿದ್ದಾರೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸಂತಸ ವ್ಯಕ್ತಪಡಿಸಿದ್ದಾರೆ.

ಕಮಿಷನರ್ ಚಂದ್ರಶೇಖರ್, ವಿಶೇಷ ತನಿಖಾ ತಂಡದ ವೆಲೆಂಟೈನ್ ಡಿಸೋಜ ಸಹಿತ ಪೊಲೀಸರ ಕಾರ್ಯದಕ್ಷತೆ ಅಭಿನಂದನಾರ್ಹ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಂಘ ಪರಿವಾರ ನಿರಂತರವಾಗಿ ಕೋಮು ಉದ್ವಿಗ್ನತೆಗೆ ಯತ್ನಿಸುತ್ತಿದೆ. ಜನಜೀವನದ ಜೊತೆ ಚೆಲ್ಲಾಟವಾಡುವ ಇಂತಹ ರಾಜಕಾರಣವನ್ನು ಬಿಜೆಪಿ ಇನ್ನಾದರೂ ಕೈಬಿಡಬೇಕು. ಜಲೀಲ್ ಕರೋಪಾಡಿ ಕೊಲೆ ಪ್ರಕರಣ, ಸವಣೂರು ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಲ್ಲಿ ಪರಿವಾರದ ಕಾರ್ಯಕರ್ತರು ಪಾಲ್ಗೊಂಡಿರುವುದು ಬಯಲಾಗಿದೆ.

ಈ ಹಿಂದೆ ಬಂಟ್ವಾಳ ಹರೀಶ್ ಪೂಜಾರಿ ಕೊಲೆ ಪ್ರಕರಣವನ್ನು ಮುಸ್ಲಿಂ ಸಮುದಾಯದ ತಲೆಗೆ ಕಟ್ಟಿ ರಾಜಕೀಯ ಲಾಭ ಪಡೆಯುವ ಅಪಾಯಕಾರಿ ಆಟವನ್ನು ಸಂಘ ಪರಿವಾರ ಆಡಿತ್ತು. ಕಾರ್ತಿಕ್ ರಾಜ್ ಪ್ರಕರಣದಲ್ಲಿ ವಾಸ್ತವ ಅರಿವಾಗುವ ಮುನ್ನವೇ ಹಿಂದೂ ಹಿತರಕ್ಷಣಾ ಸಮಿತಿಯನ್ನು ರಚಿಸಿ ಕೊಲೆ ಪ್ರಕರಣದ ಹಿಂದೆ ಮುಸ್ಲಿಮರು ಇದ್ದಾರೆ ಎಂದು ಪ್ರತಿಭಟನೆಯನ್ನು ನಡೆಸಲಾಗಿತ್ತು.

ಪ್ರತಿಭಟನಾ ಸಭೆಯಲ್ಲಿ ನಳಿನ್ ಕಟೀಲ್ ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ ನೀಡುವ ಮೂಲಕ ತಮ್ಮ ಉದ್ದೇಶವನ್ನು ಬಹಿರಂಗಪಡಿಸಿದ್ದರು. ಜಿಲ್ಲೆಯಲ್ಲಿ ಸೌಜನ್ಯ, ವಿನಾಯಕ ಬಾಳಿಗಾ, ಹರೀಶ್ ಪೂಜಾರಿ, ಉಡುಪಿಯ ಪ್ರವೀಣ್ ಪೂಜಾರಿ ಮುಂತಾದ ಕೊಲೆ ಪ್ರಕರಣಗಳು ನಡೆದಾಗ ಕನಿಷ್ಠ ಸೌಜನ್ಯಕ್ಕಾಗಿಯೂ ಸಂತ್ರಸ್ತರ ಮನೆಗೆ ಭೇಟಿ ನೀಡದ ಬಿಜೆಪಿ ಮುಖಂಡರು ಕಾರ್ತಿಕ್ ರಾಜ್ ಮನೆಗೆ ಮಾಜಿ ಮುಖ್ಯಮಂತ್ರಿ ಯಡ್ಯೂರಪ್ಪನವರನ್ನು ಕರೆತಂದಿದ್ದರು. ಅವರ ಮೂಲಕ ಈ ಕೊಲೆ ಮುಸ್ಲಿಮ್ ಜಿಹಾದಿಗಳಿಂದ ನಡೆದಿದೆ ಎಂದು ಹೇಳಿಕೆ ಕೊಡಿಸಿದ್ದರು. ಈಗ ಪ್ರಕರಣದ ನೈಜತೆ ಬಯಲಾಗಿದೆ. ಯಡ್ಯೂರಪ್ಪ, ನಳಿನ್ ಕುಮಾರ್ ಕಟೀಲ್ ನಿಜಕ್ಕೂ ಪ್ರಾಮಾಣಿಕರಾಗಿದ್ದರೆ ಈಗ ತಮ್ಮ ಆರೋಪಗಳಿಗಾಗಿ ಜನತೆಯ ಕ್ಷಮೆ ಕೇಳಲಿ ಎಂದು ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ಜಿಲ್ಲೆಯ ಜನತೆ ಇನ್ನು ಮುಂದಾದರೂ ಇಂತಹ ಮತೀಯ ರಾಜಕಾರಣದ ಅಪಾಯಕಾರಿ ಆಟಗಳ ಬಗ್ಗೆ ಅತ್ಯಂತ ಎಚ್ಚರಿಕೆಯನ್ನು ವಹಿಸಬೇಕು, ಕೋಮು ರಾಜಕಾರಣದ ಹುನ್ನಾರಗಳನ್ನು ವಿಫಲಗೊಳಿಸಬೇಕು ಎಂದು ಅವರು ಜನತೆಯನ್ನು ವಿನಂತಿಸಿದ್ದಾರೆ.           

share
ವಾರ್ತಾಭಾರತಿ
ವಾರ್ತಾಭಾರತಿ
Next Story
X