ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ನಾಗರಾಜಪ್ಪಗೆ ಜಾಮೀನು
ಮಂಗಳೂರು, ಎ. 29: ನಗರದ ಅಶೋಕನಗರ ಬಿಸಿಎಂ ವಿದ್ಯಾರ್ಥಿ ನಿಲಯದ 10ನೆ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಡಾ.ಬಿ.ಕೆ. ನಾಗರಾಜಪ್ಪನನ್ನು 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮೇಲೆ ಬಿಡುಗಡೆ ಮಾಡಿದೆ.
ಮಾ.26ರಂದು ಸಂಜೆ ವಿದ್ಯಾರ್ಥಿನಿಯರನ್ನು ಪ್ರಶ್ನಿಸುವ ನೆಪದಲ್ಲಿ ಹಾಸ್ಟೆಲ್‌ಗೆ ಬಂದಿದ್ದ ನಾಗರಾಜಪ್ಪ, 10ನೇ ತರಗತಿ ವಿದ್ಯಾರ್ಥಿನಿಯನ್ನು ತನ್ನ ಕೋಣೆಗೆ ಕರೆಸಿ ಆಕೆಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹಿಳಾ ಠಾಣೆಯ ಪೊಲೀಸರು ಆತನನ್ನು ಬಂಧಿಸಿದ್ದರು. ನ್ಯಾಯಾಲಯವು ನಾಗರಾಜಪ್ಪಗೆ ಶರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
Next Story





