ಬಿ.ಜೆ.ಪಿ ಭಿನ್ನಮತ ಕಾಂಗ್ರೆಸ್ ಗೆ ಅನುಕೂಲವಾಗಲಿದೆ: ಸತೀಶ್ ಜಾರಕಿಹೊಳಿ

ಹೊನ್ನಾಳ್ಳಿ : ರಾಜ್ಯ ಬಿ.ಜೆ.ಪಿ ಭಿನ್ನಮತ ಸ್ವಲ್ಪಮಟ್ಟಿಗೆ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ 2018 ನೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದ್ದು ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಸ್.ಎಂ.ಕೃಷ್ಣ ಕಾಂಗ್ರೆಸ್ ತೊರೆದಿದ್ದಕ್ಕೆ ಯಾವುದೇ ನಷ್ಟವಿಲ್ಲ ಎಂಬುದನ್ನ ನಂಜನಗೂಡು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಸಾಬೀತಾಗಿದೆ.
ಮಾಜಿ ಸಂಸದ ಹೆಚ್.ವಿಶ್ವನಾಥ್ ಅಸಮಾಧಾನದ ಬಗ್ಗೆ ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸೂಕ್ತ ತೀರ್ಮಾನ ಕೈಗೊಳಲಿದ್ದಾರೆ. ನಾನು ಕಾಂಗ್ರೆಸ್ ತೊರೆಯುವ ಪ್ರೆಶ್ನೆಯಿಲ್ಲ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕ ತರುವುದೆ ನಮ್ಮ ಗುರಿ ಎಂದರು.
ಬೆಳಗಾವಿ ಜಿಲ್ಲೆ ಹಾಗೂ ಕುಟುಂಬದಲ್ಲಿನ ಭಿನ್ನಮತ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ ಅದನ್ನು ಅವರು ಸರಿಪಡಿಸಲಿದ್ದಾರೆ ಎಂದರು.
ಈ ವೇಳೆ ಹೊನ್ನಾಳಿ ಶಾಸಕ ಡಿ.ಜಿ ಶಾಂತನಗೌಡ. ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ. ಜಿಲ್ಲಾ ಎಸ್ಟಿ ಘಟಕ ಅಧ್ಯಕ್ಷ ಕೆ.ಪಿ.ಪಾಲಯ್ಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು







