2ನೇ ಸುತ್ತಿನ ಪೋಲಿಯೊ ಲಸಿಕೆಗೆ ಚಾಲನೆ

ಉಡುಪಿ, ಎ.30: ಜಿಲ್ಲೆಯಲ್ಲಿ 2ನೇ ಸುತ್ತಿನ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ರವಿವಾರ ಉಡುಪಿಯ ಕೆ.ಎಂ.ಮಾರ್ಗದಲ್ಲಿರುವ ಸರಕಾರಿ ತಾಯಿ ಮತ್ತು ಮಕ್ಕಳ ಅಸ್ಪತ್ರೆಯಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯ್ಕ, ಆರ್‌ಸಿಹೆಚ್ ಅಧಿಕಾರಿ ಡಾ.ರಾಮ, ರೋಟರಿ ಅಧ್ಯಕ್ಷ ಡಾ. ಸುರೇಶ್ ಶೆಣ್ಯೆ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ರೋಟರಿ ಲಸಿಕಾ ಕಾರ್ಯಕ್ರಮ ದ ಉಸ್ತುವಾರಿ ಜಯಚಂದ್ರ, ತಾಯಿ ಮತ್ತು ಮಕ್ಕಳ ಅಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿಶೋರಿ, ಮಕ್ಕಳ ತಜ್ಞ ಡಾ.ಅಮರನಾಥ ಶಾಸ್ತ್ರಿ, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.
Next Story





