ರಂಗ ಶಿಬಿರದಿಂದ ಮಕ್ಕಳಲ್ಲಿ ಸಾಂಸ್ಕೃತಿಕ ವಿಕಸನ ಸಾಧ್ಯ: ಸೊರಕೆ

ಉದ್ಯಾವರ, ಎ.30:ಕೇವಲ ನಗರ ಪ್ರದೇಶಕ್ಕೆ ಸೀಮಿತವಾದ ಬೇಸಿಗೆ ಶಿಬಿರ, ರಂಗ ತರಬೇತಿ ಶಿಬಿರಗಳನ್ನು ಗ್ರಾಮಾಂತರ ಪ್ರದೇಶದಲ್ಲೂ ಹಮ್ಮಿಕೊಂಡು ಗ್ರಾಮೀಣ ಪ್ರದೇಶದ ಮಕ್ಕಳು ಅವಕಾಶವನ್ನು ಪಡೆಯುವಂತೆ ಮಾಡುವ ಕೆಲಸ ಶ್ಲಾಘನೀಯ ಎಂದು ಮಾಜಿ ಸಚಿವ ಹಾಗೂ ಕಾಪು ಶಾಸಕ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ಉಡುಪಿಯ ರಥಬೀದಿ ಗೆಳೆಯರು ಹಾಗೂ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಜಂಟಿಯಾಗಿ ಆಯೋಜಿಸಿದ ‘ಕುಣಿಯೋಣು ಬಾರಾ’ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಉಡುಪಿಯ ರಥಬೀದಿ ಗೆಳೆಯರು ಹಾಗೂ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಜಂಟಿಯಾಗಿ ಆಯೋಜಿಸಿದ ‘ಕುಣಿಯೋಣು ಬಾರಾ’ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂದಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ರಂಗ ತರಬೇತಿ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳುವುದರೊಂದಿಗೆ ಅವರು ಬದುಕನ್ನು ಅರ್ಥೈಸಿಕೊಳ್ಳಲು ಸಹಾಯಕವಾಗುತ್ತದೆ. ಅಲ್ಲದೇ ಸಾಂಸ್ಕೃತಿಕವಾಗಿ ಮಕ್ಕಳು ವಿಕಸನಗೊಳ್ಳಲು ಸಾಧ್ಯವಾಗುತ್ತದೆ. ಇದು ಅವರ ಭವಿಷ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಸೊರಕೆ ನುಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿಕ್ಷಣ ತಜ್ಞ ಹಾಗೂ ಉಡುಪಿ ಡಾ. ಟಿ.ಎಂ.ಎ.ಪೈ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮಹಾಬಲೇಶ್ವರ ರಾವ್ ಮಾತನಾಡಿ, ಇಂದಿನ ಮಕ್ಕಳಲ್ಲಿ ಅಕಾಲಿಕ ಪ್ರೌಢತೆ ಕಾಣಿಸಿಕೊಳ್ಳುತ್ತಿದೆ. ಅವರು ಬೆರಗು, ಆಶ್ಚರ್ಯಗಳನ್ನು ಕಳೆದುಕೊಳ್ಳು ತಿದ್ದಾರೆ. ಅದಕ್ಕೆ ಇಂದಿನ ಶಿಕ್ಷಣ ಪದ್ಧತಿ ಕಾರಣ. ಅವರು ಕಳಕೊಂಡ ಅವರ ಬೆರಗು, ಅವರ ಆಶ್ಚರ್ಯ, ಅವರ ಬಾಲ್ಯ ಖಂಡಿತವಾಗಿಯೂ ಇಂತಹ ಶಿಬಿರಗಳಲ್ಲಿ ದೊರೆಯುತ್ತವೆ ಎಂಬುದು ನನ್ನ ನಂಬಿಕೆ.
ಫ್ಲಾಟ್ ಸಂಸ್ಕೃತಿ ಹಾಗೂ ಹಳ್ಳಿಗಾಡು ಸಂಸ್ಕೃತಿ ಎರಡೂ ಸಹ ಸಮಾನಂತರ ರೇಖೆಗಳು. ಇವು ಎಲ್ಲೂ ಸಂಧಿಸುವುದಿಲ್ಲ. ಇಂತಹ ಶಿಬಿರಗಳು ಇವೆರಡನ್ನೂ ಸಂಧಿಸುವಂತೆ ಮಾಡುತ್ತವೆ. ಈ ಮೂಲಕ ಹೊಸ ಸಂಸ್ಕೃತಿಯ ಹುಟ್ಟಿಗೆ ಕಾರಣ ವಾಗುತ್ತವೆ ಎಂದು ಡಾ.ರಾವ್ ಅಭಿಪ್ರಾಯಪಟ್ಟರು.
ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುಮಾ ಎಸ್. ಮಾತನಾಡಿದರು. ವೇದಿಕೆಯಲ್ಲಿ ರಥಬೀದಿ ಗೆಳೆಯರು ಅಧ್ಯಕ್ಷ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗಣಪತಿ ಕಾರಂತ್ ಉಪಸ್ಥಿತರಿದ್ದರು.
ರಥಬೀದಿ ಗೆಳೆಯರು ಉಪಾಧ್ಯಕ್ಷರಾದ, ಶಾಲೆಯ ಸಂಚಾಲಕ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ಶಿಬಿರದ ನಿರ್ದೇಶಕ ಸಂತೋಷ್ ನಾಯಕ್ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ವಿಕ್ರಮ ಆಚಾರ್ಯ ವಂದಿಸಿ ಸಂಸ್ಥೆಯ ಕಾರ್ಯದರ್ಶಿ ಪ್ರೊ.ಸುಬ್ರಹ್ಮಣ್ಯ ಜೋಶಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಶಿಬಿರಾರ್ಥಿ ಗಳಿಂದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರ ‘ಜೀಮೂತವಾಹನ’ ನಾಟಕವನ್ನು ಶಿಬಿರಾರ್ಥಿಗಳು ಸಂತೋಷ್ ನಾಯಕ ಪಟ್ಲ ನಿರ್ದೇಶನದಲ್ಲಿ ಪ್ರದರ್ಶಿಸಿದರು.







