ಮೇಲ್ತೆನೆಯಿಂದ ಬ್ಯಾರಿ ಸಾಹಿತ್ಯ ಸಂವಾದ ಕೂಟ

ಮಂಗಳೂರು, ಎ.30: ಬ್ಯಾರಿ ಕಲಾವಿದರು ಮತ್ತು ಬರಹಗಾರರ ಒಕ್ಕೂಟವಾಗಿರುವ ದೇರಳಕಟ್ಟೆಯ ‘ಮೇಲ್ತೆನೆ’ ಸಂಘಟನೆಯ ವತಿಯಿಂದ ಪ್ರಧಾನ ಕಾರ್ಯದರ್ಶಿ, ಉಪನ್ಯಾಸಕ ಟಿ. ಇಸ್ಮಾಯೀಲ್ ಮಾಸ್ಟರ್‌ರ ಮನೆಯಲ್ಲಿ ‘ಬ್ಯಾರಿ ಸಾಹಿತ್ಯ ಸಂವಾದ ಕೂಟ’ ಇತ್ತೀಚೆಗೆ ನಡೆಯಿತು.
ಮೇಲ್ತೆನೆ ಅಧ್ಯಕ್ಷ ಆಲಿಕುಂಞಿ ಪಾರೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಮಾಸ್ಟರ್ ‘ಬ್ಯಾರಿ ಗಂಡುಮಕ್ಕಳು ಶಿಕ್ಷಣದಲ್ಲಿ ಹಿಂದುಳಿಯಲು ಕಾರಣ ಏನು? ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧದ ಮೇಲೆ ಚರ್ಚೆ ನಡೆಸಲಾಯಿತು. ಈ ಸಂದರ್ಭ ಇಸ್ಮಾಯೀಲ್ ಮಾಸ್ಟರ್ ಸ್ವರಚಿತ ಕವನ ವಾಚಿಸಿದರು.
ಉಪಾಧ್ಯಕ್ಷ ಇಸ್ಮತ್ ಫಜೀರ್, ಜೊತೆ ಕಾರ್ಯದರ್ಶಿ ಬಶೀರ್ ಕಲ್ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಶೀರ್ ಅಹ್ಮದ್ ಕಿನ್ಯ, ಹಂಝ ಮಲಾರ್ ಉಪಸ್ಥಿತರಿದ್ದರು.
Next Story