Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏಕೀಕರಣದಿಂದ ರಾಜ್ಯಕ್ಕೆ ನಷ್ಟವೇ ಹೆಚ್ಚು:...

ಏಕೀಕರಣದಿಂದ ರಾಜ್ಯಕ್ಕೆ ನಷ್ಟವೇ ಹೆಚ್ಚು: ಡಾ.ಹಂಪನಾ

ವಾರ್ತಾಭಾರತಿವಾರ್ತಾಭಾರತಿ30 April 2017 7:06 PM IST
share

ಬೆಂಗಳೂರು, ಎ.30: ಕನಾರ್ಟಕ ಏಕೀಕರಣದಿಂದ ರಾಜ್ಯಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಈ ಕುರಿತು ಪ್ರತಿಯೊಬ್ಬ ಕನ್ನಡಿಗರು ಸಿಂಹಾವಲೋಕನ ಮಾಡಬೇಕು ಎಂದು ಹಿರಿಯ ಸಾಹಿತಿ ಡಾ.ಹಂಪಾ ನಾಗರಾಜಯ್ಯ ತಿಳಿಸಿದ್ದಾರೆ.

  ರವಿವಾರ ನಗರದ ಕಸಾಪದಲ್ಲಿ ಹೊರನಾಡು-ಗಡಿ ನಾಡು ಬರಹಗಾರರ ಒಕ್ಕೂಟ (ಸ್ಪಂದನ ವೇದಿಕೆ )ಆಯೋಜಿಸಿದ್ದ ಪುಸ್ತಕ ಬಿಡುಗಡೆ ಹಬ್ಬ ಕಾರ್ಯಕ್ರಮದಲ್ಲಿ 21ಲೇಖಕರ 33 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕರ್ನಾಟಕದ ಏಕೀಕರಣದ ಮೊದಲು ಮದ್ರಾಸ್ ಪ್ರಾಂತ್ಯದಲ್ಲಿ 175 ಕನ್ನಡ ಉಪನ್ಯಾಸಕರಿದ್ದರು.ಕೇರಳದಲ್ಲಿ ಕನ್ನಡ ಶಾಲೆಗಳು ಇದ್ದವು. ಆಂಧ್ರ ಪ್ರದೇಶದ ಎಲ್ಲ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಬಳಸಿಕೊಂಡಿದ್ದರು.ಆದರೆ ಏಕೀಕರಣದ ಬಳಿಕ ಕನ್ನಡದ ವ್ಯಾಪ್ತಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಭಾಷಾವಾರು ರಾಜ್ಯಗಳ ರಚನೆಯಿಂದ ದೇಶದ ಏಕತೆ ಮತ್ತು ಸಾಮರಸ್ಯಕ್ಕೆ  ಹುಳಿ ಹಿಂಡಿದಂತ್ತಾಗಿದೆ.ಪರ ಭಾಷಿಕರನ್ನು ಶತ್ರುಗಳನ್ನಾಗಿ ನೋಡುವ ಗುಮಾನಿ ನಮ್ಮಲ್ಲಿ ಹುಟ್ಟಿಕೊಂಡಿದೆ. ಇತರೆ ಭಾಷೆಗಳೊಂದಿಗಿನ ಕೊಡುಕೊಳ್ಳುವಿಕೆ, ಸಾಂಸ್ಕೃತಿಕ ಐಕ್ಯತೆಯೂ ರೋಗ ಪೀಡಿತವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕನ್ನಡ ಭಾಷೆಯ ಸ್ಥಿತಿ ನೀರು ಹಿಂಗುವ ರೀತಿಯಲ್ಲಿದೆ.ಪ್ರತಿಕೂಲ ಪರಿಸ್ಥಿತಿ ವೇಳೆ ಕನ್ನಡವನ್ನು ಜೀವಂತವಾಗಿಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು. ಹೊರ ಕನ್ನಡಿಗರಿಂದ ಸ್ವಲ್ಪ ಮಟ್ಟಿಗೆ ಕನ್ನಡದ ತಂಗುದಾಣಗಳು ಹಸಿರುನಿಂದ ಕೂಡಿವೆ.ಇದರ ಜೊತೆಗೆ ಒಳ ಕನ್ನಡಿಗರಿಂದ ಕನ್ನಡ ವಿಕಸನಕ್ಕೆ ಕೈ ಜೋಡಿಸಬೇಕು ಎಂದು ಕರೆಕೊಟ್ಟರು.

 ವಿಮರ್ಶಕ ಎಸ್.ಆರ್.ವಿಜಯ್ ಶಂಕರ್ ಮಾತನಾಡಿ, ಗಡಿ ನಾಡು- ಹೊರನಾಡು ಕನ್ನಡಿಗರ ಸಮಸ್ಯೆಗಳ ಬಗ್ಗೆ ಒಳನಾಡಿನ ಕನ್ನಡಿಗರಿಗೆ ಗೊತ್ತಿಲ್ಲ.ಆದರೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ಸಂಘ ಸಂಸ್ಥೆಗಳ ಮೂಲಕ ಕನ್ನಡದ ಅಸ್ತಿತ್ವವನ್ನು ಉಳಿಸಲು ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದರು.

  ಕನ್ನಡದ ಪಾಂಡಿತ್ಯವನ್ನು ರಕ್ಷಣೆ ಮಾಡುವಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಗಿಂತ ಹೊರನಾಡಿನ ವಿಶ್ವವಿದ್ಯಾಲಯಗಳ ಪಾತ್ರ ದೊಡ್ಡದ್ದು.ಹೊರ ನಾಡಿನ ವಿವಿಗಳು ಕನ್ನಡ ಭಾಷೆಯ ಸಂಶೋಧನೆ ಮತ್ತು ವಿದ್ವತ್‌ಗೆ ಹೆಚ್ಚು ಮಹತ್ವವನ್ನು ನೀಡುತ್ತಿರುವುದು ಗಮನಾರ್ಹವಾದದ್ದು ಎಂದು ಬಣ್ಣಿಸಿದರು.

  ಒಕ್ಕೂಟ ವ್ಯವಸ್ಥೆಗೂ ಮುನ್ನಾ ಇದ್ದ ಭಾಷಾ ಸೌಹಾರ್ದತೆ ಕ್ಷೀಣಿಸತೊಡಗಿದೆ. ಭಾಷಾವಾರು ರಾಜ್ಯಗಳೊಂದಿಗಿನ ಸಾಂಸ್ಕೃತಿಕ ಕೊಡುಕೊಳ್ಳುವಿಕೆ ಮಹತ್ವ ಸಂಪೂರ್ಣವಾಗಿ ಕಳೆದುಕೊಂಡಿದೆ. ಕೇರಳದಲ್ಲಿ ಮಲಯಾಳಂ ಭಾಷೆ ಕಡ್ಡಾಯಗೊಳಿಸಿರುವುದರಿಂದ ಕಾಸರಗೋಡಿನ ಕನ್ನಡಿಗರ ಮೇಲೆ ಪರಿಣಾಮ ಬೀರಿಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಹಿತಿ ಡಾ.ಆನಂದರಾಮ ಉಪಾಧ್ಯ, ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಕೆ.ಸಿ.ವಿರೂಪಾಕ್ಷ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X