ಸಿಎಂ ನೆರವಿನ ಚೆಕ್ ಹಸ್ತಾಂತರ

ಮೂಡುಬಿದಿರೆ,ಎ.30: ಶಿರ್ತಾಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದು ಅನಾರೋಗ್ಯದಿಂದ ಬಳಲುತ್ತಿರುವ ಸೀತಾರಾಮ ರಾವ್ ಅವರ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 75 ಸಾವಿರ ರೂ ನೆರವು ಮಂಜೂರಾಗಿದ್ದು ನೆರವಿನ ಚೆಕ್‌ನ್ನು ಶಾಸಕ ಕೆ. ಅಭಯಚಂದ್ರ ಜೈನ್ ಶನಿವಾರ ತನ್ನ ನಿವಾಸದಲ್ಲಿ ಫಲಾನುಭವಿಗೆ ಹಸ್ತಾಂತರಿಸಿದರು.
ಮೂಡಾ ಅಧ್ಯಕ್ಷ ಸುರೇಶ್ ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಜಿಲ್ಲಾ ಯೋಜನಾ ಸಮಿತಿಯ ಸದಸ್ಯ ಸುರೇಶ್ ಕೋಟ್ಯಾನ್, ಅಕ್ರಮ-ಸಕ್ರಮ ಸಮಿತಿಯ ಸದಸ್ಯ ಸುಂದರ ಸಿ. ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ವಾಸುದೇವ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
Next Story





