ಕಾಂಗ್ರೆಸ್- ಎಸ್ಪಿ ಡೈವೋರ್ಸ್!

ಲಕ್ನೋ, ಮೇ 1: "ಯುಪಿ ಕೋ ಯಹ್ ಸಾಥ್ ಪಸಂದ್ ಹೇ" ಘೋಷಣೆ ಇನ್ನು ಇತಿಹಾಸ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಮೈತ್ರಿಕೂಟ ವಿಫಲವಾದ ಬಳಿಕ ಮೊಟ್ಟಮೊದಲ ಬಾರಿಗೆ ಮಾತನಾಡಿದ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ಉಭಯ ಪಕ್ಷಗಳು ಬೇರೆಯಾಗಿರುವುದನ್ನು ಪ್ರಕಟಿಸಿದ್ದಾರೆ.
ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಬ್ಬರ್ ಸ್ಪಷ್ಟಪಡಿಸಿದ್ದಾರೆ. "ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಸಮಾಜವಾದಿ ಪಕ್ಷ ಸೇರಿದಂತೆ ಯಾವ ಪಕ್ಷದ ಜತೆಗೂ ಮೈತ್ರಿ ಇಲ್ಲ" ಎಂದು ಹೇಳಿದ್ದಾರೆ. ಒಂದು ತಿಂಗಳ ಕಾಲ ಪಕ್ಷದ ವಿವಿಧ ಹಂತಗಳಲ್ಲಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ.
Next Story





