ಮೇ 6,7ರಂದು ಮೈಸೂರಿನಲ್ಲಿ ಬಿಜೆಪಿ ಕಾರ‍್ಯಕಾರಿಣಿ ಅಬಾದಿತ

ಬೆಂಗಳೂರು, ಮೇ 1: ರಾಜ್ಯ ಬಿಜೆಪಿಯಲ್ಲಿ ಗೊಂದಲದ ವಾತಾವರಣ ಇದ್ದರೂ ಮೇ 6 ಮತ್ತು 7ರಂದು ಮೈಸೂರಿನಲ್ಲಿ ರಾಜ್ಯ ಬಿಜೆಪಿ ಕಾರ‍್ಯಕಾರಿಣಿ ಸಭೆ ಈ ಹಿಂದೆ ನಿಗದಿಯಾಗಿರುವಂತೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು , ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ರಾಜ್ಯಕಾರ‍್ಯಕಾರಿಣಿ ನಡೆಸಲು ಸೂಚನೆ ನೀಡಿದೆ.
ಬಿಜೆಪಿಯ ಕೆಲವು ಸಮಸ್ಯೆಗಳು ಬಗೆ ಹರಿಯದ ಹಿನ್ನೆಲೆಯಲ್ಲಿ ಕಾರ್ಯಕಾರಿಣಿ ಬೇಡ ಎಂಬ ಅಭಿಪ್ರಾಯ ಕೇಳಿ ಬಂದಿತ್ತು. ಇದೀಗ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಮಾಜಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಸೇರಿದಂತೆ ಎಲ್ಲರೂ ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ‍್ ತಿಳಿಸಿದ್ದಾರೆ.
Next Story





