Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು...

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ2 May 2017 3:49 PM IST
share
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವಾರ್ಷಿಕೋತ್ಸವ

ಬೆಳ್ತಂಗಡಿ, ಮೇ 2: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಪಾರ್ಶ್ವ ಪರಿಣಾಮ ಇಲ್ಲದ ಚಿಕಿತ್ಸಾ ವಿಧಾನವಾಗಿದ್ದು, ಇದರ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸಬೇಕು. ಹೆಚ್ಚಿನ ಸಂಶೋಧನೆ ಮತ್ತು ಪ್ರಕಾಶನಾ ಕಾರ್ಯ ನಡೆಯಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಉಪಕುಲಪತಿ ಡಾ.ಕೆ.ಎಸ್ ರವೀಂದ್ರನಾಥ್ ಹೇಳಿದರು.  

ಉಜಿರೆ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ನಡೆದ ವಾರ್ಷಕೋತ್ಸವ  ಸಮಾರಂಭದಲ್ಲಿ ಮಾತನಾಡಿದರು.

ಕಳೆದ ವರ್ಷ ಸಂಶೋಧನೆಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಹತ್ತು ಕೋಟಿ ರೂ. ಅನುದಾನ ನೀಡಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕಾಗಿ 20 ಕೋಟಿ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದರು.

ಇಂದು ಶಿಕ್ಷಣ ಕ್ಷೇತ್ರ ವಾಣಿಜ್ಯಮಯವಾಗುತ್ತಿದ್ದು, ಗುಣಮಟ್ಟ ಕಡಿಮೆಯಾಗುತ್ತಿದೆ. ಶೇ.50ರಷ್ಟು ಕಾಲೇಜುಗಳು ಮಾತ್ರ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಆದುದರಿಂದ ಹೊಸ ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡುವುದಕ್ಕಾಗಿ ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

ವೈದ್ಯರು ಬದ್ಧತೆ, ಪ್ರಾಮಾಣಿಕತೆ ಮತ್ತು ವೃತ್ತಿಪರ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಮಾನವೀಯತೆಯಿಂದ ರೋಗಿಗಳ ಸೇವೆ ಮಾಡಬೇಕು. ರೋಗಿ ಮತ್ತು ವೈದ್ಯರ ಸಂಬಂಧ ಪವಿತ್ರವಾಗಿದ್ದು, ವೈದ್ಯರು ರೋಗಿಯೊಂದಿಗೆ ಮುಕ್ತವಾಗಿ ಸಂವಹನ ನಡೆಸಿ ಚಿಕಿತ್ಸೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಇಂದು ಜನರು ಅನೇಕ ರೋಗಗಳಿಗೆ ಬಲಿಯಾಗುತ್ತಾರೆ. ಶ್ರಮ, ಸಂಸ್ಕೃತಿಯೊಂದಿಗೆ ಹಿತ - ಮಿತ ಆಹಾರ ಸೇವನೆ ಮಾಡಿ ಆರೋಗ್ಯ ಸುಧಾರಣೆಯೊಂದಿಗೆ ಆರೋಗ್ಯಭಾಗ್ಯ ಹೊಂದಬೇಕು. ದೇಹ ಮತ್ತು ಮನಸ್ಸಿನ ಆರೋಗ್ಯದೊಂದಿಗೆ ನಾವು ಆಧ್ಯಾತ್ಮಿಕ ಅರಿವು, ಜಾಗೃತಿ ಹಾಗೂ ಸ್ಪಂದನ ಹೊಂದಿರಬೇಕು. ಪ್ರಕೃತಿ ಚಿಕಿತ್ಸೆ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಇಡಬೇಕು ಎಂದು ಹೇಳಿದರು.

ಡಾ. ಶಕ್ತಿವಿಜಯನ್ ಕಾಲೇಜಿನ ವರದಿ ಸಾದರ ಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಡಾ. ಶಿವಪ್ರಸಾದ್ ಶೆಟ್ಟಿ ವಂದಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X