ಮರ ಉರುಳಿ ಬಿದ್ದು ಮನೆಗೆ ಹಾನಿ
ಮೂಡಿಗೆರೆ, ಮೇ.2: ಭಾರೀ ಗಾಳಿಗೆ ಮರವೊಂದು ಉರುಳಿ ಮನೆಯ ಮೇಲೆ ಬಿದ್ದ ಘಟನೆ ತಾಲ್ಲೂಕಿನ ಬಾಳೂರು ಹೋಬಳಿ ಸುಂಕಸಾಲೆ ಗ್ರಾಪಂ ವ್ಯಾಪ್ತಿಯ ಮಾಳಿಗನಾಡು ಗ್ರಾಮದಲ್ಲಿ ನಡೆದಿದೆ.
ಬಿರುಗಾಳಿಗೆ ಗ್ರಾಮದ ಸುಧೀರ್ ಎಂಬವರ ಮನೆಯ ಸಮೀಪದಲ್ಲಿದ್ದ ಮರವೊಂದು ಏಕಾಏಕಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿ ಮತ್ತು ಗೋಡೆ ಬಹುತೇಕ ಹಾನಿಗೊಂಡಿವೆ. ಮನೆಯಲ್ಲಿದ್ದ ಪೀಠೋಪಕರಣಗಳು, ಪಾತ್ರೆ ಪಗಡೆಗಳಿಗೆ ಹಾನಿಯಾಗಿದೆ. ಅಂದಾಜು 4 ಲಕ್ಷ ರೂ. ನಷ್ಟ ಸಂಭವಿಸಿದೆ.
Next Story





