Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರದಲ್ಲೇ ರಾಜ್ಯದಲ್ಲಿ ರಿಯಲ್ ಎಸ್ಟೇಟ್...

ಶೀಘ್ರದಲ್ಲೇ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಕಾಯ್ದೆ ಜಾರಿ: ನಾಯ್ಡು

ವಾರ್ತಾಭಾರತಿವಾರ್ತಾಭಾರತಿ2 May 2017 7:51 PM IST
share
ಶೀಘ್ರದಲ್ಲೇ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಕಾಯ್ದೆ ಜಾರಿ: ನಾಯ್ಡು

ಬೆಂಗಳೂರು, ಮೇ.2: ಕೇಂದ್ರ ಸರಕಾರದ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ಶೀಘ್ರದಲ್ಲಿಯೇ ರಾಜ್ಯದಲ್ಲೂ ಜಾರಿಯಾಗಲಿದೆ ಎಂದು ಕೇಂದ್ರನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಇಂದಿಲ್ಲಿ ಹೇಳಿದ್ದಾರೆ.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿದ್ದ, ಕೇಂದ್ರ ಯೋಜನೆಗಳಾದ ಸ್ಮಾರ್ಟ್ ಸಿಟಿ ಯೋಜನೆ, ಅಮೃತ್ ಯೋಜನೆ, ಸ್ವಚ್ಛ ಭಾರತ್ ಹಾಗೂ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಈಗಾಗಲೇ ಈ ಕಾಯ್ದೆಯನ್ನು 14 ರಾಜ್ಯಗಳಲ್ಲಿ ಅನುಷ್ಠಾನ ಮಾಡಲಾಗಿದ್ದು, ಕೆಲವು ಕರಡುಗಳನ್ನು ಸಿದ್ಧಪಡಿಸಬೇಕಾಗಿರುವ ರಾಜ್ಯ ಸರಕಾರ 15 ದಿನಗಳ ಕಾಲಾವಕಾಶ ಕೇಳಿದೆ. ಶೀಘ್ರದಲ್ಲಿಯೇ ಕರ್ನಾಟಕದಲ್ಲಿ ಇದು ಜಾರಿಯಾಗಲಿದೆ. ಅಲ್ಲದೆ, ಕಟ್ಟಡ ನಿರ್ಮಾಣ ಸಂಸ್ಥೆಗಳು ಯಾವ ಸೌಲಭ್ಯವನ್ನು ಕೊಡುವುದಾಗಿ ಹೇಳುತ್ತಾರೊ, ಅದು ಗ್ರಾಹಕನಿಗೆ ನೀಡಲೇಬೇಕು. ಸೌಲಭ್ಯ ನೀಡದಿದ್ದರೆ ಅಂತಹ ಕಟ್ಟಡ ನಿರ್ಮಾಣ ಸಂಸ್ಥೆಗಳ ವಿರುದ್ಧ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.

ಬಣ್ಣ ಬಣ್ಣದ ದೊಡ್ಡ ದೊಡ್ಡ ಜಾಹೀರಾತುಗಳನ್ನು ನೀಡಿ ಜನರಿಗೆ ವಂಚಿಸುವ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಕಡಿವಾಣ ಹಾಕಲು ಹಾಗೂ ಗುಣಮಟ್ಟದ ಉದ್ಯಮಕ್ಕೆ ಬೆಂಬಲ ನೀಡುವ ಉದ್ದೇಶದಿಂದಾಗಿ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಯನ್ನು ಕೇಂದ್ರ ಸರಕಾರ ತಂದಿದೆ ಎಂದ ಅವರು, ಈ ಕಾಯ್ದೆ ಜಾರಿಯಿಂದ ಗ್ರಾಹಕನೆ ಯಜಮಾನ ಆಗಲಿದ್ದಾನೆ ಎಂದು ಬಣ್ಣಿಸಿದರು.

ಈ ಕಾಯ್ದೆಯಿಂದ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಏನೋ ಆಗಲಿದೆ ಎಂದು ಭಾವಿಸುವ ಅಗತ್ಯವಿಲ್ಲ. ಜನರನ್ನು ವಂಚಿಸುವ ಸೌಲಭ್ಯ ಕೊಡದ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ತೊಂದರೆಯಾಗಲಿದೆ. ಸರಿಯಾಗಿ ಕಾರ್ಯನಿರ್ವಹಿಸುವ ಸಂಸ್ಥೆಗಳಿಗೆ ಯಾವುದೇ ತೊಂದರೆ ಇಲ್ಲ. ಉತ್ತಮವಾಗಿ ಜನರಿಗೆ ಸೌಲಭ್ಯ ನೀಡಿದರೆ ಪ್ರಮಾಣಪತ್ರ ನೀಡಲಾಗುತ್ತದೆ ಎಂದು ವೆಂಕಯ್ಯನಾಯ್ಡು ನುಡಿದರು.

ಸ್ಮಾರ್ಟ್ ಸಿಟಿ: ಬೆಂಗಳೂರು ಮುಂದಿನ ಹಂತದಲ್ಲಿ ಸ್ಮಾರ್ಟ್ ಸಿಟಿ ಆಗುವ ಸಾಧ್ಯತೆ ಇದೆ ಎಂದ ಅವರು, ಈಗಾಗಲೇ ರಾಜ್ಯದ ತುಮಕೂರು, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಉಡುಪಿ ಈ 6 ನಗರಗಳು ಸ್ಮಾರ್ಟ್ ಸಿಟಿ ಯೋಜನೆಯಲ್ಲಿವೆ ಎಂದು ಮಾಹಿತಿ ನೀಡಿದರು.

ಆರ್ಥಿಕ ನೆರವು: ಪರಿಶೀಲನಾ ಸಭೆ ಬಳಿಕ ಕೇಂದ್ರ ಸಚಿವ ವೆಂಕಯ್ಯನಾಯ್ಡು, ರಾಜ್ಯದ ವಸತಿ, ನಗರಾಭಿವೃದ್ಧಿ ಹಾಗೂ ಸ್ಥಳೀಯ ಆಡಳಿತ ಉತ್ತೇಜಿಸಲು ಒಟ್ಟು 677 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಚಿವರಾದ ರೋಶನ್‌ಬೇಗ್, ಎಂ.ಕೃಷ್ಣಪ್ಪ, ಈಶ್ವರಖಂಡ್ರೆ, ಕೆ.ಜೆ.ಜಾರ್ಜ್ ಅವರಿಗೆ ಹಣದ ಚೆಕ್ ಹಸ್ತಾಂತರಿಸಿದರು.

ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಕೇಂದ್ರ ಸರಕಾರದ ಅಧಿಕಾರಿಗಳು ರಾಜ್ಯಗಳಿಗೆ ಖುದ್ದು ಭೇಟಿ ನೀಡಬೇಕೆಂದ ಅವರು, ಸ್ವತಃ ನಾನೆ ಭೇಟಿ ನೀಡಲಿದ್ದೇನೆ. ಇದರಿಂದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುತ್ತದೆ. ಅದೇರೀತಿ, 2020ರೊಳಗೆ ಎಲ್ಲರಿಗೂ ಸೂರು ಒದಗಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಹೇಳಿದರು.

ಮೆಟ್ರೋ ಸಂಪೂರ್ಣ: ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿಗಳು ಸಂಪೂರ್ಣಗೊಂಡಿದ್ದು, ಚಿಕ್ಕಪೇಟೆ ನಿಲ್ದಾಣದ ಕೊನೆಯ ಹಂತದ ಕಾಮಗಾರಿಗಳು ಮಾತ್ರ ಬಾಕಿ ಇದೆ. ಮೇ ತಿಂಗಳ 12 ರಂದು ಕೊನೆಯ ಸುರಕ್ಷತಾ ಪರೀಕ್ಷೆಗಳು ನಡೆಯಲಿದ್ದು, ನಂತರ ಮೆಟ್ರೋ ಕಾರ್ಯಾರಂಭದ ದಿನಾಂಕವನ್ನು ಪ್ರಕಟಿಸುವುದಾಗಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X