Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌಹಾರ್ದತೆಯ ಭಾರತ ಇತರ ರಾಷ್ಟ್ರಗಳಿಗೆ...

ಸೌಹಾರ್ದತೆಯ ಭಾರತ ಇತರ ರಾಷ್ಟ್ರಗಳಿಗೆ ಮಾದರಿ: ಡಾ.ಎಸ್.ಎನ್ ಸುಬ್ಬರಾವ್

ಯೆನೆಪೊಯ ವಿವಿ: ಯುವಜನತೆಗಾಗಿ ರಾಷ್ಟ್ರೀಯ ಏಕೀಕರಣ ಶಿಬಿರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 May 2017 9:41 PM IST
share
ಸೌಹಾರ್ದತೆಯ ಭಾರತ ಇತರ ರಾಷ್ಟ್ರಗಳಿಗೆ ಮಾದರಿ: ಡಾ.ಎಸ್.ಎನ್ ಸುಬ್ಬರಾವ್

ಕೊಣಾಜೆ, ಮೇ 2: ಭಾರತವು ವೈವಿಧ್ಯತೆಯಿಂದ ಕೂಡಿರುವ ರಾಷ್ಟ್ರವಾದರೂ ಏಕತೆಯೊಂದಿಗೆ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬಾಳುವ ಮೂಲಕ ಪ್ರಪಂಚದ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ. ಭಾರತಕ್ಕೆ ದೊರೆತ ಸ್ವಾತಂತ್ರ್ಯ ಇತರ 117 ರಾಷ್ಟ್ರಗಳಿಗೂ ಸ್ಫೂರ್ತಿಯಾಗಿತ್ತು ಎಂದು ರಾಷ್ಟ್ರೀಯ ಯುವ ಯೋಜನೆಯ ನಿರ್ದೇಶಕ ಡಾ.ಎಸ್.ಎನ್ ಸುಬ್ಬರಾವ್ ಹೇಳಿದರು.

ಹೊಸದಿಲ್ಲಿಯ ರಾಷ್ಟ್ರೀಯ ಯುವ ಯೋಜನೆ, ಯೆನೆಪೊಯ ವಿವಿಯ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಆಶ್ರಯದಲ್ಲಿ ದೇರಳಕಟ್ಟೆ ಯೆನೆಪೊಯ ವಿಶ್ವವಿದ್ಯಾನಿಲಯದ ಯೆಂಡ್ಯುರೆನ್ಸ್ ಝೋನ್‌ನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಯುವಜನತೆಗಾಗಿ ರಾಷ್ಟ್ರೀಯ ಏಕೀಕರಣ ಶಿಬಿರ-2017 ಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಲವಾರು ಧರ್ಮ, ಭಾಷೆ, ಜಾತಿಗಳೊಂದಿಗೆ ವಿವಿಧತೆಯನ್ನು ಹೊಂದಿರುವ ಭಾರತವು ಏಕತೆಯ ಮನೋಭಾವನೆಯೊಂದಿಗೆ ಅಖಂಡವಾಗಿ ರೂಪಿತವಾಗಿದೆ. ಇತರೆ ದೇಶಗಳ ಪಾಸ್‌ಪೋರ್ಟಿನಲ್ಲಿ ಧರ್ಮದ ಆಧಾರದಲ್ಲಿ ಹೆಸರನ್ನು ನಮೂದಿಸಿದ್ದರೆ, ದೇಶದ ಪಾಸ್‌ಪೋರ್ಟಿನಲ್ಲಿ ಗಣರಾಜ್ಯ ಭಾರತ ಎಂದು ನಮೂದಿಸಲಾಗಿರುವುದು ದೇಶದ ಏಕತೆಯನ್ನು ತೋರಿಸುತ್ತದೆ ಎಂದರು.

ಯೆನೆಪೊಯ ವಿವಿಯ ಕುಲಪತಿ ಯೆನೆಪೊಯ ಅಬ್ದುಲ್ಲಾ ಕುಂಞಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಅರುಣ್.ಎನ್.ಪೂಜಾರ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಎ.ಎಂ ಖಾನ್, ನಿವೃತ್ತ ಸೇನಾಧಿಕಾರಿ ಹಾಗೂ ಕರ್ನಾಟಕ ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ಶರತ್ ಭಂಡಾರಿ ಮುಖ್ಯ ಅತಿಥಿಗಳಾಗಿದ್ದರು.

ಯೆನೆಪೊಯ ದಂತ ಮಹಾವಿದ್ಯಾಲಯದ ಡೀನ್.ಡಾ.ಬಿ.ಎಚ್.ಶ್ರೀಪತಿ ರಾವ್, ಯೆನೆಪೊಯ ವೈದ್ಯಕೀಯ ಕಾಲೇಜಿನ ಡೀನ್ ಡಾ.ಗುಲಾಂ ಜೀಲಾನಿ ಖಾದಿರಿ, ರಾಷ್ಟ್ರೀಯ ಯುವ ಯೋಜನೆಯ ಡಾ.ರಾಮ್ ಸಿಂಗ್ ಪರ್ಮಾರ್, ಡಾ.ಸುಕುಮಾರ್ ಕರಿಯಾಲ್, ಸಂಘಟನಾ ಕಾರ್ಯದರ್ಶಿ ಅನಿಲ್ ಹೆಬ್ಬಾರ್, ಡಾ.ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು

ಡಾ.ಮುಹಮ್ಮದ್ ನ್ಹುಮನ್ ಮತ್ತು ಡಾ. ಶ್ರೀಕಾ ರೈ ಕಾರ್ಯಕ್ರಮ ನಿರ್ವಹಿಸಿದರು.

ವಿವಿಧ ರಾಜ್ಯಗಳಿಂದ ಆಗಮಿಸಿದ ಶಿಬಿರಾರ್ಥಿಗಳು
ಶಿಬಿರದಲ್ಲಿ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಜಮ್ಮುಕಾಶ್ಮೀರ, ದೆಹಲಿ, ಉತ್ತರಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಘಢ, ತ್ರಿಪುರ, ಬಿಹಾರಮ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 500 ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ನಡುವೆ ಸಂವಾದ ಹಾಗೂ ಸಂಸ್ಕೃತಿ, ಕಲೆ , ಸಂಪ್ರದಾಯಗಳ ಕುರಿತು ಪರಸ್ಪರ ಪರಿಚಯದ ಕಾರ್ಯಕ್ರಮಗಳು, ನಾಯಕತ್ವದ ಕೌಶಲ್ಯಗಳು, ಆರೋಗ್ಯ ಜಾಗೃತಿ ಪ್ರಾಥಮಿಕ ಚಿಕಿತ್ಸೆ ತರಬೇತಿ ಕಾರ್ಯಕ್ರಮ, ದುರಂತ ನಿರ್ವಹಣೆ, ರಾಷ್ಟ್ರ ನಿರ್ಮಾಣದಲ್ಲಿ ಯುವಸಮುದಾಯದ ಪಾತ್ರ ಮಹಿಳಾ ಸಬಲೀಕರಣ, ಪರಿಸರ ಉಳಿಸುವುದು, ಐತಿಹಾಸಿಕ ಸ್ಮಾರಕಗಳ ರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ಶಿಬಿರ ಒಳಗೊಂಡಿದೆ.

ಯೆನೆಪೊಯ ವಿವಿ ಕ್ಯಾಂಪಸ್ ಹಾಗೂ ಉಳ್ಳಾಲ ಸಮುದ್ರ ತೀರದಲ್ಲಿ ಸ್ವಚ್ಛತೆ, ಬಬ್ಬುಕಟ್ಟೆ, ಚೇತನನಗರ ಕುಂಪಲದ ಶಾಲೆಗಳಿಗೆ ಸುಣ್ಣ ಬಳಿಯುವ ಕಾರ್ಯಕ್ರಮಗಳು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X