Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಸುಲ್ತಾನ್ ಕನ್ನಡ ನಾಡಿಗೆ ನೀಡಿದ...

ಟಿಪ್ಪು ಸುಲ್ತಾನ್ ಕನ್ನಡ ನಾಡಿಗೆ ನೀಡಿದ ಕೊಡುಗೆಯನ್ನು ಮರೆಯಬಾರದು: ಸಾಹಿತಿ ನಾ.ಡಿಸೋಜ

ವಾರ್ತಾಭಾರತಿವಾರ್ತಾಭಾರತಿ3 May 2017 6:28 PM IST
share
ಟಿಪ್ಪು ಸುಲ್ತಾನ್ ಕನ್ನಡ ನಾಡಿಗೆ ನೀಡಿದ ಕೊಡುಗೆಯನ್ನು ಮರೆಯಬಾರದು: ಸಾಹಿತಿ ನಾ.ಡಿಸೋಜ

ಸಾಗರ, ಮೇ 3: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಪ್ರಾಣತ್ಯಾಗ ಮಾಡಿದ ಟಿಪ್ಪು ಸುಲ್ತಾನ್ ಹೆಸರಿಗೆ ಇತ್ತೀಚಿನ ದಿನಗಳಲ್ಲಿ ಮಸಿ ಬಳಿಯುವ ಕೃತ್ಯಗಳು ನಡೆಯುತ್ತಿದೆ.  ಟಿಪ್ಪು ಸುಲ್ತಾನ್ ಕನ್ನಡ ನಾಡಿಗೆ ನೀಡಿದ ಕೊಡುಗೆಯನ್ನು ನಾವೆಂದೂ ಮರೆಯಬಾರದು ಎಂದು ಸಾಹಿತಿ ಡಾ. ನಾ.ಡಿಸೋಜ ತಿಳಿಸಿದರು.

ಮೇ 4ರಂದು ಮೈಸೂರಿನಲ್ಲಿ ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ನಡೆಯಲಿರುವ ಟಿಪ್ಪು ಸುಲ್ತಾನ್ ನೆನಪಿನ ಸಮಾವೇಶ ಕಾರ್ಯಕ್ರಮದ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.

ಟಿಪ್ಪು ಸುಲ್ತಾನ್ 17 ವರ್ಷ ರಾಜ್ಯಭಾರ ಮಾಡಿದ್ದಾರೆ.  ಅವರನ್ನು ದೇಶದ್ರೋಹಿ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿರುವುದು ಸರಿಯಲ್ಲ. ನಾಡಿನ ಜನರಿಗೆ ಕೈಗಾರಿಕೆಯನ್ನು, ದೇಶವಿದೇಶಗಳ ಕುಶಲಕರ್ಮಿಗಳನ್ನು ಕರೆಸಿ ಕರಕುಶಲ ಕಲೆಯನ್ನು ಪರಿಚಯಿಸಿದ ಹೆಗ್ಗಳಿಕೆ ಟಿಪ್ಪು ಸುಲ್ತಾನ್ ಅವರದ್ದಾಗಿದೆ ಎಂದರು.

ಸಂಘಟನೆಯ ಶಶಿಧರ್ ಮಾತನಾಡಿ, ಕರಾವಳಿಗೂ ಟಿಪ್ಪುವಿಗೂ ಅವಿನಾಭಾವ ಸಂಬಂಧವಿದೆ. ಕರಾವಳಿ ಭಾಗದಲ್ಲಿ ಬಜರಂಗದಳದವರು ಟಿಪ್ಪುವಿನ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಜನರಲ್ಲಿ ತಪ್ಪು ಸಂದೇಶವನ್ನು ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಟಿಪ್ಪು ಹಿಂದೂದ್ವೇಷಿ ಎನ್ನುವುದು ಶುದ್ಧಸುಳ್ಳು. ಇತಿಹಾಸ ಅರಿಯದ ಯುವಕರು ಟಿಪ್ಪುವನ್ನು ಮತಾಂತರಿ, ಹಿಂದೂದ್ವೇಷಿ ಎಂದು ಹೇಳುವ ಮೂಲಕ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಮಾತನಾಡಿ, ಮೂಲಭೂತವಾದಿಗಳು ಟಿಪ್ಪುವಿನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಟಿಪ್ಪು 150ಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಲ್ಲಿ ತನ್ನ ಆಡಳಿತಾವಧಿಯಲ್ಲಿ ನಿತ್ಯಪೂಜೆಗೆ ಅನುವು ಮಾಡಿಕೊಟ್ಟಿದ್ದನು. ಶೃಂಗೇರಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವಲ್ಲಿ ಟಿಪ್ಪುವಿನ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಜಿಲ್ಲಾ ಸಂಚಾಲಕ ಎಚ್.ಬಿ.ರಾಘವೇಂದ್ರ ಮಾತನಾಡಿ, ಟಿಪ್ಪುವಿನ ನಿಜ ಜೀವನವನ್ನು ತಿಳಿಸುವ ಸಲುವಾಗಿ ಮೈಸೂರಿನಲ್ಲಿ ಮೇ 4ಕ್ಕೆ ಬೃಹತ್ ಟಿಪ್ಪು ಸುಲ್ತಾನ್ ನೆನಪಿನ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಸಮಾವೇಶಕ್ಕೆ ಸುಮಾರು 2 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ಸಾಗರ ತಾಲ್ಲೂಕಿನಿಂದ ಸುಮಾರು 500ಕ್ಕೂ ಹೆಚ್ಚು ಆಸಕ್ತರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಮೊ. 9481235424, 9448106607 ಸಂಪರ್ಕಿಸಬಹುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X