Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಯಣ್ಣ ಬ್ರಿಗೇಡ್ ನಿಲ್ಲಿಸುವ ಮಾತೇ ಇಲ್ಲ...

ರಾಯಣ್ಣ ಬ್ರಿಗೇಡ್ ನಿಲ್ಲಿಸುವ ಮಾತೇ ಇಲ್ಲ : ಕೆ.ಎಸ್. ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ3 May 2017 7:01 PM IST
share
ರಾಯಣ್ಣ ಬ್ರಿಗೇಡ್ ನಿಲ್ಲಿಸುವ ಮಾತೇ ಇಲ್ಲ : ಕೆ.ಎಸ್. ಈಶ್ವರಪ್ಪ

ದಾವಣಗೆರೆ,ಮೇ 3: ರಾಜ್ಯದ ಎಲ್ಲರಿಗೂ ನ್ಯಾಯ ಕೊಡಿಸುವ ಸಂಘಟನೆಯಾಗಿ ರಾಯಣ್ಣ ಬ್ರಿಗೇಡ್ ಹೊರ ಹೊಮ್ಮುತ್ತಿದೆ. ಆದ್ದರಿಂದ ಬ್ರಿಗೇಡ್ ನಿಲ್ಲಿಸುವ ಮಾತೇ ಇಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದ ಶ್ರೀ ಕನಕ ಗುರುಪೀಠದ ಶಾಖಾ ಮಠಕ್ಕೆ ಬುಧವಾರ ಭೇಟಿ ನೀಡಿ, ಸುದ್ದಿಗಾರರೊಡನೆ ಮಾತನಾಡಿದ ಅವರು, ಹಿಂದುಳಿದ ವರ್ಗ, ದಲಿತರು, ಲಿಂಗಾಯತ, ಬ್ರಾಹ್ಮಣ ಎಲ್ಲಾ ವರ್ಗದ ಬಡವರಿಗೂ ನ್ಯಾಯ ಕೊಡಿಸುವ ಸಂಘಟನೆಯಾಗಿ ಬ್ರಿಗೇಡ್ ಕೆಲಸ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ಬ್ರಿಗೇಡ್ ಚಟುವಟಿಕೆ ನಿಲ್ಲಿಸಬಾರದೆಂಬ ಉದ್ದೇಶವಿದೆ ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್‌ಗೆ ಪದಾಧಿಕಾರಿ ನೇಮಿಸಿದ್ದೇವೆ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಎರಡೂ ಘಟಕಕ್ಕೆ ಪದಾಧಿಕಾರಿ ನೇಮಿಸಲಾಗಿದೆ. ಮೇ 8ಕ್ಕೆ ರಾಯಚೂರಿನಲ್ಲಿ ಬ್ರಿಗೇಡ್‌ನ ಅಭ್ಯಾಸ ವರ್ಗ ಆಯೋಜಿಸಲಾಗಿದೆ ಎಂದರು, ಅಭ್ಯಾಸ ವರ್ಗಕ್ಕೆ ಉಭಯ ಘಟಕದಿಂದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ತಲಾ ಮೂವರು ಪದಾಧಿಕಾರಿಗಳಂತೆ ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 1 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವರು. ಹಿಂದುಳಿದ ವರ್ಗ, ದಲಿತರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಏನು ಮಾಡಿದೆ? ಎಂಬ ಬಗ್ಗೆ ಚರ್ಚಿಸುವುದೇ ವರ್ಗದ ಮುಖ್ಯ ಅಜೆಂಡಾ ಎಂದು ಹೇಳಿದರು.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಪಕ್ಷದ ತತ್ವ, ಸಿದ್ಧಾಂತ, ವಿಚಾರ ಅರಿತ ಸುಸಂಸ್ಕೃತರ ಸರ್ಕಾರ ಬರಬೇಕೆಂದೆ ಇಷ್ಟೆಲ್ಲಾ ಹೋರಾಟ ನಡೆಸಿದ್ದೇನೆ. ಬಿಜೆಪಿಯ 17 ಸಂಸದರು ರಾಜ್ಯವನ್ನು ಪ್ರತಿನಿಧಿಸಿದ್ದರೂ ಪಕ್ಷದಲ್ಲಿ ಗೊಂದಲವೇಕೆಂಬ ಪ್ರಶ್ನೆ ಸಹಜವಾಗಿಯೇ ಜನರಲ್ಲೂ ಇದೆ.ಪಕ್ಷದ ತತ್ವ, ಸಿದ್ಧಾಂತ ಗೊತ್ತಿದ್ದವರೇ ಶಾಸಕರು, ಸಚಿವರಾಗಬೇಕು. ಸುಸಂಸ್ಕೃತ ಸರ್ಕಾರ ಬರಬೇಕೆಂಬ ಅಭಿಲಾಷೆ ಎಂದರು.

ಪ್ರಧಾನಿ ಮೋದಿ ಸರ್ಕಾರವು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಮಸೂದೆ ಮಂಡಿಸಿದೆ. ಅದನ್ನು ಲೋಕಸಭೆಯಲ್ಲಿ ಮೋದಿ ಸರ್ಕಾರ ಸರ್ವಾನುಮತದಿಂದ ಅಂಗೀಕರಿಸಿದೆ. ಆದರೆ, ರಾಜ್ಯಸಭೆಯಲ್ಲಿ ಮಸೂದೆಗೆ ವಿಪಕ್ಷ ಕಾಂಗ್ರೆಸ್, ಇತರೆ ಪಕ್ಷಗಳು ವಿರೋಧ ಮಾಡದಿದ್ದರು, ಜಂಟಿ ಸದನದ ಜಾಯಿಂಟ್ ಸೆಲೆಕ್ಷನ್ ಕಮಿಟಿಗೆ ಹಾಕಿ, ಅಂಗೀಕಾರಕ್ಕೆ ಅಡ್ಡಿಪಡಿಸಿವೆ ಎಂದು ದೂರಿದರು.

ಸಂಘ ಪರಿವಾರದ ಹಿರಿಯ ಪ್ರಚಾರಕ ಬಿ.ಎಲ್. ಸಂತೋಷ್ ಅವರು ಸಂಘದ ಪ್ರತಿನಿಧಿಯಾಗಿ ಬಿಜೆಪಿ ರಾಷ್ಟ್ರೀಯ ನಾಯಕನಾಗಿ ಬೆಳೆದವರ ಬಗ್ಗೆ ಯಡಿಯೂರಪ್ಪ ಹಗುರವಾಗಿ ಮಾತನಾಡಿದ್ದು ಕಾರ್ಯಕರ್ತರಿಗೆ ನೋವನ್ನುಂಟು ಮಾಡಿದೆ, 2018ರ ಚುನಾವಣೆಗೆ 224 ಕ್ಷೇತ್ರದಲ್ಲೂ ರಾಜ್ಯ ನಾಯಕರು ಸಮೀಕ್ಷೆ ನಡೆಸಿ, ಸ್ಥಳೀಯ ಸಂಸ್ಥೆಗಳ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಪಡೆದ ನಂತರವೇ ಬಿಜೆಪಿ ಟಿಕೆಟ್ ನೀಡಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X