Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾನೂನು ಬಾಹಿರ ಆರ್ಥಿಕ ವ್ಯವಹಾರಕ್ಕೆ...

ಕಾನೂನು ಬಾಹಿರ ಆರ್ಥಿಕ ವ್ಯವಹಾರಕ್ಕೆ ತಡೆ: ಸಿಎಂ ಸಿದ್ದರಾಮಯ್ಯ

​‘ಐ-ವಿವೇಕ್’ ವೆಬ್‌ಸೈಟ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 May 2017 7:55 PM IST
share
ಕಾನೂನು ಬಾಹಿರ ಆರ್ಥಿಕ ವ್ಯವಹಾರಕ್ಕೆ ತಡೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 2: ಕಾನೂನುಬಾಹಿರವಾಗಿ ಆರ್ಥಿಕ ವ್ಯವಹಾರ ನಡೆಸುವ ಸಂಘ, ಸಂಸ್ಥೆಗಳ ವಿರುದ್ಧ ಜನತೆಗೆ ಜಾಗೃತಿ ಮೂಡಿಸುವ ಸಲುವಾಗಿ ಐ-ವಿವೇಕ್ ವೆಬ್‌ಸೈಟ್‌ನ್ನು ಸಿದ್ಧಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಆರ್ಥಿಕ ಇಲಾಖೆ ಸಿದ್ಧಪಡಿಸಿದ್ದ ‘ಐ-ವಿವೇಕ್’ ವೆಬ್‌ಸೈಟ್‌ನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯವು ಸೇರಿದಂತೆ ದೇಶದೆಲ್ಲೆಡೆ ಕೆಲವು ಸಂಘ-ಸಂಸ್ಥೆಗಳು ಕಾನೂನು ಬಾಹಿರವಾಗಿ ಆರ್ಥಿಕ ವ್ಯವಹಾರ ನಡೆಸಿ ಜನತೆಯ ಹಣವನ್ನು ದೋಚುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇಂತಹ ಸಂಘ, ಸಂಸ್ಥೆಗಳ ಕುರಿತು ಜನತೆ ಮಾಹಿತಿ ನೀಡುವ ಸಲುವಾಗಿ ಐ-ವಿವೇಕ ವೆಬ್‌ಸೈಟ್‌ನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಅಗ್ರಿಗೋಲ್ಡ್ ಕಂಪೆನಿ ಜನತೆಯ ಸಾಕಷ್ಟು ಸಂಪತ್ತನ್ನು ದೋಚಿದೆ. ವಿನಿವಿಂಕ್ ಶಾಸ್ತ್ರಿಯಂತೆ ಜನರಿಗೆ ಮೋಸ ಮಾಡುವವರು ಸಾಕಷ್ಟು ಮಂದಿ ಇದ್ದಾರೆ. ಇಂತವರ ಕುರಿತು ಜನತೆಗೆ ಮೊದಲೇ ಮಾಹಿತಿ ನೀಡುವ ಮೂಲಕ ಜನತೆಯನ್ನು ರಕ್ಷಿಸಬೇಕಾಗಿದೆ. ಹೀಗಾಗಿ ಐ-ವಿವೇಕ್ ವೆಬ್‌ಸೈಟ್‌ನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.

ಸಾರ್ವಜನಿಕರು ಈ ವೆಬ್‌ಸೈಟ್ ಮೂಲಕ ಕಾನೂನು ಬಾಹಿರ ವ್ಯವಹಾರ ನಡೆಸುವ ಸಂಘ, ಸಂಸ್ಥೆ ಹಾಗೂ ವ್ಯಕ್ತಿಗಳ ವಿರುದ್ಧ ದೂರುಗಳನ್ನು ಸಲ್ಲಿಸಬಹುದು. ಹಾಗೂ ದೂರಿನ ಕುರಿತು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿಯನ್ನು ಪಡೆಯಬಹುದಾಗಿದೆ. ಹೀಗಾಗಿ ಪ್ರತಿಯೊಬ್ಬ ನಾಗರಿಕರು ಈ ವೆಬ್‌ಸೈಟ್‌ನ್ನು ಬಳಸುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕೆಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸರಕಾದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಠಿಯಾ ಸೇರಿದಂತೆ ಅನೇಕ ಹಿರಿಯ ಅಧಿಕಾರಿ ಭಾಗವಹಿಸಿದ್ದರು.

ವೆಬ್‌ಸೈಟ್‌ನ ವಿಶೇಷತೆ

  • ಸರಕಾರದ ಮುಖ್ಯಕಾರ್ಯದರ್ಶಿಯ ಅಧ್ಯಕ್ಷತೆಯಲ್ಲಿ ‘ಐ-ವಿವೇಕ್’ ವೆಬ್‌ಸೈಟ್ ಕಾರ್ಯನಿರ್ವಹಿಸುತ್ತದೆ.
  • ಆರ್‌ಬಿಐ, ಸೆಬಿ, ಆರ್‌ಒಸಿ, ಪೊಲೀಸ್ ಇಲಾಖೆ, ಸಹಕಾರ ಸಂಘಗಳ ನಿಬಂಧಕರು ಈ ವೆಬ್‌ಸೈಟ್‌ನ್ನು ನಿಯಂತ್ರಣ ಮಾಡುತ್ತಿರುತ್ತಾರೆ.
  • ಈ ವೆಬ್‌ಸೈಟ್ ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ಲಭ್ಯವಿದೆ.
  • ದೂರುದಾರರು ಹಾಗೂ ಮಾಹಿತಿದಾರರ ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದು.
  • ಈ ವೆಬ್‌ಸೈಟ್‌ನಲ್ಲಿ ಗ್ರಾಹಕ ಜಾಗೃತಾ ವಿಭಾಗ ಹಾಗೂ ಪ್ರಮುಖ ಶಾಸನಗಳನ್ನು ಅವಲೋಕಿಸಲು ಮಾಹಿತಿ ವಿಭಾಗವನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X