ಫ್ರಾನ್ಸ್: ನಾಲ್ವರ ಬಂಧನ; ಆಯುಧ ವಶ

ಪ್ಯಾರಿಸ್, ಮೇ 3: ಫ್ರಾನ್ಸ್ ಭಯೋತ್ಪಾದನೆ ನಿಗ್ರಹ ಪೊಲೀಸರು ಮಂಗಳವಾರ ದಾಳಿ ನಡೆಸಿ ನಾಲ್ವರು ಪುರುಷರು ಮತ್ತು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ ಹಾಗೂ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಲವರನ್ನು ಉತ್ತರ ಫ್ರಾನ್ಸ್‌ನಲ್ಲಿ ಬಂಧಿಸಲಾಗಿದೆ. ದಾಳಿಯ ವೇಳೆ ಪಿಸ್ತೂಲ್‌ಗಳು ಮತ್ತು ಮಶಿನ್‌ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಫ್ರಾನ್ಸ್‌ನಲ್ಲಿ ಮೇ 7ರಂದು ನಡೆಯಲಿರುವ ಎರಡನೆ ಸುತ್ತಿನ ಮತದಾನಕ್ಕೆ ಕೆಲವೇ ದಿನಗಳಿರುವಾಗ ಈ ದಾಳಿ ನಡೆದಿದೆ.
Next Story





